ನ್ಯಾ. ಸಂತೋಷ ಪಾಟೀಲ ಹತ್ಯೆ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ
Protest demanding arrest of those accused in the murder of Justice Santosh Patil
ಬೆಳಗಾವಿ 19: ನ್ಯಾಯವಾದಿ ಸಂತೋಷ ಅಶೋಕ ಪಾಟೀಲ ಅವರ ಹತ್ಯೆಯನ್ನು ಖಂಡಿಸಿ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಬೆಳಗಾವಿ ಬಾರ್ ಅಸೋಶಿಯೇಶನ್ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ರಾಯಬಾಗ ವಕೀಲರ ಸಂಘದ ವತಿಯಿಂದ ದಿ. 19ರಂದು ಕರೆದ ಸರ್ವ ಸದಸ್ಯರ ಸಭೆಯಲ್ಲಿ ಅನಿರ್ಧಿಷ್ಟ ಕಾಲ ನ್ಯಾಯಾಲಯದ ಕಾರ್ಯ ಕಲಾಪಗಳಿಂದ ಹೊರಗುಳಿಯುವ ನಿರ್ಧಾರವನ್ನು ಸರ್ವಾನುಮತದಿಂದ ತೀರ್ಮಾನ ಕೈಗೊಳ್ಳಲಾಗಿದೆ.
ಕಳೆದ ಎಪ್ರೀಲ್ 29ರಂದು ಸವಸುದ್ದಿಯ ವಕೀಲ ಸಂತೋಷ ಅಶೋಕ ಪಾಟೀಲ ಅವರ ಹತ್ಯೆಯಾಗಿದ್ದರೂ ಇದುವರೆಗೆ ಆರೋಪಿಗಳನ್ನು ಬಂಧಿಸಲಾಗಿಲ್ಲ. ಜೂನ್ 13ರಿಂದ ವಿವಿಧ ರೀತಿಯ ಪ್ರತಿಭಟನೆ ಮಾಡುತ್ತಾ ಬಂದರೂ ಕೂಡ ಇಲ್ಲಿಯವರೆಗೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಅಧಿಕಾರಿಗಳು ವಿಫಲರಾಗಿದ್ದಾರೆ. ಅದರಂತೆ ಸಂಬಂಧಪಟ್ಟ ತನಿಖಾ ಅಧಿಕಾರಿಗಳು ಪ್ರಕರಣದ ಉನ್ನತ ಮಟ್ಟದ ತನಿಖೆ ಮಾಡುವುದು ಅತ್ಯವಶ್ಯಕವಾಗಿದೆ. ಇದು ವಿಶೇಷ ಪ್ರಕರಣವಾಗಿದ್ದು ಎಸ್‌ಐಟಿ ತನಿಖೆಗೆ ವಹಿಸಬೇಕೆಂದು ರಾಯಬಾಗ ಬಾರ್ ಅಸೋಶಿಯೇಶನ ಮನವಿ ಮಾಡಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಸುಮಾರು 100 ಜನ ವಕೀಲರೊಂದಿಗೆ ಸತ್ಯಾಗ್ರಹ ಕೈಗೊಳ್ಳಲು ನಿರ್ಧಾರ ಮಾಡಿ ಸಭೆಯು ಸರ್ವಾನುಮತದಿಂದ ಠರಾವು ಪಾಸು ಮಾಡಿದ್ದು ಈ ವಿಷಯವನ್ನು ಎಸ್‌ಪಿ ಅವರ ಗಮನಕ್ಕೆ ತರಲಾಗಿದೆ ಎಂದು ಅಸೋಶಿಯೇಶನ್ ಅಧ್ಯಕ್ಷ ಪಿ.ಎಮ್. ದರೂರ ಅವರು ತಿಳಿಸಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 