ಅನರ್ಹರನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ
ಲೋಕದರ್ಶನ ವರದಿ
ರಾಯಬಾಗ 26: ತಾಲೂಕಿನ ಭಿರಡಿ ಗ್ರಾಮದಲ್ಲಿ 2005ರಲ್ಲಿ ಕೃಷ್ಣಾ ನದಿ ಪ್ರವಾಹದ ಸಂತ್ರಸ್ತರಿಗಾಗಿ ನಿರ್ಮಿಸಿದ ಮನೆಗಳಲ್ಲಿ ಅನರ್ಹ ಕುಟುಂಬದವರು ಅನಧಿಕೃತವಾಗಿ ವಾಸವಾಗಿದ್ದು, ಅವರನ್ನು ಕೂಡಲೇ ತೆರವುಗೊಳಿಸಬೇಕೆಂದು ಒತ್ತಾಯಿಸಿ ಅರ್ಹ ಪಲಾನುಭವಿಗಳು ಹಾಗೂ ಗ್ರಾಮಸ್ಥರು ಸರಕಾರ ನೀಡಿದ ದಾಖಲೆಗಳನ್ನು ಹಿಡಿದುಕೊಂಡು ಭಿರಡಿ ಗ್ರಾಮ ಪಂಚಾಯತಿಗೆ ಬೀಗ್ ಜಡಿದು ಬುಧವಾರದಂದು ಪ್ರತಿಭಟನೆ ನಡೆಸಿದರು.
2005ರಲ್ಲಿ ಕೃಷ್ಣಾ ನದಿಯ ಪ್ರವಾಹದಲ್ಲಿ ಮನೆಗಳು ಮುಳುಗಡೆಯಾದ ಸಂತ್ರಸ್ತರಿಗೆ ಭಿರಡಿ ಗ್ರಾಮದ ರಿ.ಸನಂ.21 ರಲ್ಲಿ ಸುಮಾರು ನಾಲ್ಕು ಎಕರೆ ಜಾಗದಲ್ಲಿ 132 ಅರ್ಹ ಪಲಾನುಭವಿಗಳಿಗೆ ಸರಕಾರ ಮನೆ ನಿರ್ಮಿಸಿಕೊಟ್ಟಿತ್ತು. ಮನೆಗಳನ್ನು ಅರ್ಹ ಪಲಾನುಭಾವಿಗಳಿಗೆ ವಿತರಿಸುವ ಮುಂಚೆಯ ಆ ಮನೆಗಳಲ್ಲಿ ಅನಧಿಕೃತವಾಗಿ ಬೇರೆ ಕುಟುಂಬಗಳು ವಾಸವಾಗಿದ್ದಾರೆ. ಅಧಿಕೃತವಾಗಿ ಮಂಜೂರಾದ ಅರ್ಹ ಪಲಾನುಭವಿಗಳಿಗೆ ಈ ಮನೆಗಳನ್ನು ಹಂಚುವುದರ ಬಗ್ಗೆ ಕಳೆದ ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತಾ ಬಂದರು ಕೂಡಾ ಸಂಬಂಧಿಸಿದ ಗ್ರಾಮ ಪಂಚಾಯತಿಯವರು, ತಾಲೂಕಾ ಪಂಚಾಯತಿಯವರು ಮತ್ತು ತಹಶೀಲ್ದಾರರು ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾ.ಪಂ. ಇಒ ಪ್ರಕಾಶ ವಡ್ಡರ ಹಾಗೂ ಉಪತಹಶೀಲ್ದಾರ ಪರಮಾನಂದ ಮಂಗಸೂಳಿ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು. 2005ರ ಗ್ರಾಮ ಪಂಚಾಯತಿ ಪಟ್ಟಿಯ ಪ್ರಕಾರ ಮಂಜೂರಾದ ಮನೆಗಳನ್ನು ಅರ್ಹ ಪಲಾನುಭವಿಗಳಿಗೆ ನೀಡಬೇಕೆಂದು ಗ್ರಾಮಸ್ಥರು ಪಟ್ಟು ಹಿಡಿದರು.
ಉಪತಹಶೀಲ್ದಾರ ಪರಮಾನಂದ ಮಂಗಸೂಳೆ ಅವರು, ನಾಳೆಯಿಂದಲೇ 2005ರಲ್ಲಿ ಸರಕಾರದಿಂದ ಸಂತ್ರಸ್ತರಿಗಾಗಿ ಮಂಜೂರಾದ ಈ ಮನೆಗಳಲ್ಲಿ ಯಾರು ಇದ್ದಾರೆ ಎಂದು ದಾಖಲೆಗಳನ್ನು ಪರಿಶೀಲಿಸಿ ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಯನ್ನು ಬಗೆಹರಿಸುತ್ತೇನೆಂದು ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
ಪ್ರತಿಭಟನೆಯಲ್ಲಿ ಚಿದಾನಂದ ತೇಲಿ, ಬಸವರಾಜ ತಿಗಡಿ, ವಸಂತ ಘೇನಾನಿ, ಶಂಕರ ಪಾಟೀಲ, ಲಕ್ಷ್ಮೀಬಾಯಿ ತೇಲಿ, ಶಾರವ್ವ ನಾವ್ಹಿ, ಮಂಗಲ ಬಿಸನಕೊಪ್ಪ, ಕಸ್ತೂರಿ ಬನಹಟ್ಟಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 