ಟನ್ ಕಬ್ಬಿಗೆ 3,500 ಬೆಲೆ ನಿಗದಿಗೊಳಿಸಿ ಒತ್ತಾಯಿಸಿ ಪ್ರತಿಭಟನೆ
Protest demanding fixing of sugarcane price at Rs. 3,500 per ton
ಜಮಖಂಡಿ 04: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕಬ್ಬು ಬೆಳೆಗಾರರ ವಿವಿಧ ಸಂಘಟನೆಗಳಿಂದ ಪ್ರಸಕ್ತ ಹಂಗಾಮಿಗೆ ಟನ್ ಕಬ್ಬಿಗೆ 3,500 ಬೆಲೆ ನಿಗದಿಗೊಳಿಸಿ ಸಕ್ಕರೆ ಕಾರ್ಖಾನೆ ಪ್ರಾರಂಬಿಸಬೇಕು ಎಂದು ಒತ್ತಾಯಿಸಿ. ತಾಲ್ಲೂಕಿನ ಚಿಕ್ಕಲಕಿ ಕ್ರಾಸ್ ನಲ್ಲಿ ವಿಜಯಪೂರ-ಜಮಖಂಡಿ ರಾಜ್ಯ ಹೆದ್ದಾರಿ ಬಂದ ಮಾಡಿ ರೈತರು ಪ್ರತಿಭಟನೆ ನಡೆಸಿದರು.
ಜಿಲ್ಲೆಯ ಜಮಖಂಡಿ, ಮುಧೋಳ, ಬೀಳಗಿ ಹಾಗೂ ವಿಜಯಪುರ ಜಿಲ್ಲೆಯ ಬಬಲೇಶ್ವರ ಅನೇಕ ರೈತರು ಪ್ರತಿಭಟನೆಯಲ್ಲಿ ಭಾವಹಿಸಿ. ರೈತರ ಸಮಸ್ಯೆಗಳಿಗೆ ಸ್ಪಂದಿಸದೆ ಇರುವ ಮುಖ್ಯಮಂತ್ರಿ, ಸಕ್ಕರೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರ ವಿರುದ್ಧ ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರು ಮತ್ತು ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿದರು. ಹಸಿರು ಟವಲು ಮತ್ತು ಬಾರಕೋಲಗಳನ್ನು ಪ್ರದರ್ಶಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರವು ಸಕ್ಕರೆ ಕಾರ್ಖಾನೆ ಮಾಲೀಕರ ಗುಲಾಮರಂತೆ ವರ್ತಿಸುತ್ತಿದೆ ಹೊರತು, ರೈತರ ಹಿತ ಕಾಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜನಪ್ರತಿನಿಧಿಗಳು ಸ್ವಂತ ಸಕ್ಕರೆ ಕಾರ್ಖಾನೆಗಳನ್ನು ಹೊಂದಿದ್ದು ಕಬ್ಬು ಬೆಳೆಗಾರರ ಕಷ್ಟ, ಅವರ ಕಷ್ಟ ಗೊತ್ತಾಗುತ್ತಿಲ್ಲ ಎಂದು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
3500 ಬೆಲೆ ಘೋಷಣೆ ಮಾಡಿ ಸಕ್ಕರೆ ಕಾರ್ಖಾನೆ ಪ್ರಾರಂಭ ಮಾಡಬೇಕು, ಗೊಬ್ಬರ, ಪೊಟ್ರೋಲ್ , ಡಿಸೈಲ್, ಬಂಗಾರ ಸೇರಿದಂತೆ ಪ್ರತಿಯೊಂದು ವಸ್ತುವಿನ ಬೆಲೆ ದುಪ್ಪಟ್ಟಾಗಿದೆ, ಆದರೆ ರೈತ ಬೆಳೆಯುವ ಬೆಳೆಗಳ ದರ ಮಾತ್ರ ಇದ್ದಷ್ಟೆ ಇದೆ, ಈ ಬಗ್ಗೆ ಯಾವ ಸರ್ಕಾರಗಳು ಕ್ರಮ ತೆಗೆದುಕೊಳ್ಳುತ್ತಿಲ್ಲ, ಕೂಡಲೇ ಸರ್ಕಾರ ಮಧ್ಯ ಪ್ರವೇಶ ಮಾಡಿ ಸಮಸ್ಯೆಯನ್ನು ಇತ್ಯರ್ಥ ಮಾಡಬೇಕು ಎಂದು ಒತ್ತಾಯಿಸಿದರು.
ಪಕ್ಕದ ಮಹಾರಾಷ್ಟ್ರದಲ್ಲಿ ಟನ್ ಕಬ್ಬಿಗೆ 3,600 ಬೆಲೆ ಕೊಡುತ್ತಿದ್ದು, ಅವರಿಗೆ ಸಾಧ್ಯವಾಗಿರುವಾಗ ಕರ್ನಾಟಕದ ಸಕ್ಕರೆ ಕಾರ್ಖಾನೆಯವರಿಗೆ ಏನಾಗಿದೆ. ಒಂದು ಟನ್ ಕಬ್ಬಿನಿಂದ ಲಕ್ಷಾಂತರ ಹಣವನ್ನು ಲಾಭ ಮಾಡಿಕೊಳ್ಳುವರು, ಸರ್ಕಾರದ ಬೊಕ್ಕಸಕ್ಕೆ ತೆರಿಗೆ ಸೇರುವುದು. ಆದರೆ ರೈತ ಮಾತ್ರ ತನ್ನ ಕಷ್ಟಕ್ಕೆ ತಕ್ಕಂತೆ ಬೆಲೆ ದೊರೆಯದೆ ಕಷ್ಟದಲ್ಲಿ ಬೀದಿಗೆ ಬರಬೇಕಾಗಿದೆ ಎಂದರು.
ದೇಶದಲ್ಲಿ ಶೇ75 ರೈತರಿದ್ದು ನಮ್ಮ ಮತದ ಶಕ್ತಿಯಿಂದ ಶಾಸಕರು, ಸಚಿವರು, ಪ್ರಧಾನಿಯಾಗುತ್ತಿದ್ದು ಮತ್ತು ಸರ್ಕಾರವು ಅಸ್ತಿತ್ವಕ್ಕೆ ಬರುತ್ತದೆ. ಆದರೆ ದೇಶಕ್ಕೆ ಅನ್ನ ಹಾಕುವ ರೈತರ ಬಗ್ಗೆ ಯಾರಿಗೂ ಕಾಳಜಿ ಇಲ್ಲ. ಚುನಾವಣೆ ಪ್ರಣಾಳಿಕೆಯಲ್ಲಿ ಮಾತ್ರ ರೈತರ ಪರವಾದ ದೊಡ್ಡ ಭರವಸೆ ತೋರಿಸಿ, ಅಧಿಕಾರ ಬಂದ ಮೇಲೆ ರೈತರು ಇವರ ಕಣ್ಣಿಗೆ ಕಾಣುವುದಿಲ್ಲ ಎಂದು ದೂರಿದರು.
ಜಮಖಂಡಿ ವಕೀಲ ಸಂಘದಿಂದ ಪ್ರತಿಭಟನೆಗೆ ಬೆಂಬಲ ನೀಡಿ ವಕೀಲರು ಕೋರ್ಟ್ ನಿಂದ ಹೊರಗೂಳಿದು, ವಕೀಲ ಸಂಘದ ಉಪಾಧ್ಯಕ್ಷ ಶ್ರೈಶೈಲ ಕಾಳೆ, ಸಿ.ಆರ್. ಸುತಾರ, ಆರ್.ಕೆ ಪಾಟೀಲ್, ಸಂಗಮೇಶ ಅಂಬಲಿ, ಕಿರಣ ಕೌಟಕೊಪ್ಪ ಸೇರಿದಂತೆ ವಕೀಲರು ಪ್ರತಿಭಟನೆಯಲ್ಲಿ ಪಾಲ್ಗೊಂಡರು, ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ರೈತ ಮುಖಂಡ ಬಸವರಾಜ ಸಿಂಧೂರ, ಪ್ರದೀಪ ಮೆಟಗುಡ, ರೈತ ಸಂಘದ ಶ್ರೀಶೈಲ ಭೂಮಾರ, ಕಲ್ಲು ಬಿರಾದಾರ, ರಾಜು ನದಾಪ, ಸುರೇಶ ಹಂಚಿನಾಳ, ಸಿದ್ದಪ್ಪ ಬನಜನವರ, ಬಸವರಾಜ ನ್ಯಾಮಗೌಡ, ಸಂಗಪ್ಪ ನ್ಯಾಮಗೌಡ, ಶಿವಶಂಕರ ಪಾಟೀಲ, ಮುತ್ತು ಹೊಸಮನಿ ಸೇರಿದಂತೆ ನೂರಾರು ರೈತರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 