ಮಚ್ಛೆ-ಪೀರನವಾಡಿ ಪ.ಪಂ ಚುನಾವಣೆ ನಡೆಸಲು ಆಗ್ರಹಿಸಿ ಪ್ರತಿಭಟನೆ
Protest demanding holding of Machhe-Peeranawadi PP elections
ಬೆಳಗಾವಿ 19: ಮಚ್ಛೆ ಮತ್ತು ಪೀರನವಾಡಿ ಪಟ್ಟಣ ಪಂಚಾಯಿತಿಗಳ ಚುನಾವಣೆಯನ್ನು ನಡೆಸಬೇಕೆಂದು ಇಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಎದುರು ಆಮ್ ಆದ್ಮಿ ಪಕ್ಷದ ವತಿಯಿಂದ ಪ್ರತಿಭಟನೆಯನ್ನು ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
ಆಪ್ ಜಿಲ್ಲಾಧ್ಯಕ್ಷ ವಿಜಯ್ ಪಾಟೀಲ್ ಮಾತನಾಡಿ 2021ರಲ್ಲೇ ಮಚ್ಛೆ ಮತ್ತು ಪೀರನವಾಡಿ ಪಟ್ಟಣ ಪಂಚಾಯಿತಿ ಅವಧಿ ಮುಗಿದಿದ್ದು, ಅಲ್ಲಿ ಕೇವಲ ಅಧಿಕಾರಿಗಳ ದರ್ಬಾರ್ ನಡೆದಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದರಿಂದಾಗಿ ಸಾರ್ವಜನಿಕರ ಕೆಲಸ ಕಾರ್ಯಗಳು ಸರಿಯಾಗಿ ನಡೆಯುತ್ತಿಲ್ಲ. ಇದರಿಂದ ಜನರಿಗೆ ತೊಂದರೆಯಾಗುತ್ತಿದ್ದು, ತಕ್ಷಣ ಅಡಚಣೆಗಳನ್ನು ದೂರಗೊಳಿಸಿ, ಚುನಾವಣೆಯನ್ನು ನಡೆಸಬೇಕೆಂದು ಆಗ್ರಹಿಸಿದರು. ಆಮ್ ಆದ್ಮಿ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 