ಕಾವೇರಿ ನೀರು ಬಿಡುಗಡೆ ಆದೇಶ ಮರುಪರೀಶೀಲನೆಗೆ ಆಗ್ರಹಿಸಿ ಪ್ರತಿಭಟನೆ
Protest demanding reconsideration of the order to release Cauvery water
ರಾಣೆಬೆನ್ನೂರು, ಆ.4: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ನೀಡಿರುವ ಆದೇಶವನ್ನು ಮರುಪರೀಶೀಲಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಎಚ್. ಶಿವರಾಮೇಗೌಡ ಬಣ) ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ತಹಶೀಲ್ದಾರ್ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ, ಕಾವೇರಿ ನೀರು ಬಿಡುಗಡೆ ಆದೇಶವನ್ನು ಮರುಪರೀಶೀಲಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಗಣೇಶ್ ಗೋಣಿಬಸಮ್ಮನವರ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವು ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸದೆ ಹೊರಡಿಸಲಾಗಿದೆ ಎಂದು ಆರೋಪಿಸಿದರು. 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ನೀಡಿರುವ ಆದೇಶವು ಅವೈಜ್ಞಾನಿಕವಾಗಿದ್ದು, ತಕ್ಷಣವೇ ಮರುಪರೀಶೀಲನೆಗೊಳಪಡಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದು, ಜಲಾಶಯಗಳ ನೀರಿನ ಲಭ್ಯತೆ ಮತ್ತು ರಾಜ್ಯದ ಕುಡಿಯುವ ನೀರಿನ ಅಗತ್ಯಕ್ಕೆ ಆದ್ಯತೆ ನೀಡಬೇಕು. ಇಂತಹ ಸಂದರ್ಭದಲ್ಲಿ ನೀರು ಬಿಡುಗಡೆ ಮಾಡುವ ನಿರ್ಧಾರ ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಮುಂದಿನ ದಿನಗಳಲ್ಲಿ ರಾಜ್ಯದ ನೀರಿನ ಪರಿಸ್ಥಿತಿಯನ್ನು ಸಮಗ್ರವಾಗಿ ಪರೀಶೀಲಿಸಿ, ನ್ಯಾಯಸಮ್ಮತ ಹಾಗೂ ವೈಜ್ಞಾನಿಕ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಅವರು, ರಾಜ್ಯದ ಹಕ್ಕುಗಳ ರಕ್ಷಣೆಗೆ ಕರವೇ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಕರವೇ ಮುಖಂಡರಾದ ಯಾನೋಪ್ ಖಾನ್, ಕರೀಂ ಖಾನ್, ಸುನೀಲ್ ಎಸ್., ಶಿವಕುಮಾರ ಗೋರವರ, ಕಿರಣ್ ಡಾಂಬಳ್ಳಿ, ಪ್ರೇಮಾ ನಾರಾಯಣಸ್ವಾಮಿ, ಸುನಂದ ಹಿರೇಬಿದರಿ, ನಾಗಮ್ಮ ಪೂಜಾರ್, ನಾಗರಾಜ ಸಂಶಿ, ಹಜರತ್ ಅಲಿ, ಅಬು ಸುಲೇ ರಾಜ್ ಜಾನ್ ಸೇರಿದಂತೆ ವಿವಿಧ ತಾಲೂಕುಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 