ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹಿಸಿ ಪ್ರತಿಭಟನೆ
Protest demanding resolution of academic confusion among graduate students
ಧಾರವಾಡ 25: ರಾಜ್ಯದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಬಗೆಹರಿಸಲು ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದರುಗಡೆ ಎಐಡಿಎಸ್‌ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ ಮಾತನಾಡಿ ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು ಪಾಠಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನೆನೆಗುದಿಗೆ ಬಿದ್ದಿದೆ. ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸವುದು ಖಡ್ಡಾಯವಲ್ಲ, ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ, ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷರಾದ ಸಿಂಧೂ ಕೌದಿ, ಕಾರ್ಯದರ್ಶಿ ಸ್ಫೂರ್ತಿ ಚಿಕ್ಕಮಠ, ಕಾರ್ಯಕರ್ತರಾದ ಸಿದ್ದು, ರವಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 