ಕೇರಳದ ವಯನಾಡಿಗೆ ವಿಶೇಷ ಪ್ಯಾಕೇಜ್ ನೀಡಲು ಆಗ್ರಹಿಸಿ ಪ್ರತಿಭಟನೆ
Protest demanding special package for Kerala's Wayanad
ನವದೆಹಲಿ 14: ಭೀಕರ ಭೂಕುಸಿತಕ್ಕೆ ತತ್ತರಿಸಿರುವ ಕೇರಳದ ವಯನಾಡು ಜಿಲ್ಲೆಯ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಪರಿಹಾರ ಪ್ಯಾಕೇಜ್ ನೀಡುತ್ತಿಲ್ಲ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.
ಸಂಸತ್ತಿನ ಆವರಣದಲ್ಲಿ ಕೇರಳದ ಸಂಸದರೊಂದಿಗೆ ವಯನಾಡು ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಪ್ರಿಯಾಂಕಾ ಗಾಂಧಿ ಪ್ರತಿಭಟನೇ ನಡೆಸಿದ್ದಾರೆ.
ವಯನಾಡಿನ ವಿನಾಶವನ್ನು ಇಡೀ ದೇಶವೇ ನೋಡಿದೆ. ಹರಿಯಾಣದಲ್ಲೂ ಇದಕ್ಕೆ ಸಮಾನವಾದ ವಿಪತ್ತು ಸಂಭವಿಸಿದೆ. ರಾಜಕೀಯದಿಂದಾಗಿ ಎರಡೂ ಕಡೆಗಳಿಗೂ ಕೇಂದ್ರ ಸರ್ಕಾರವು ನೆರವು ನೀಡುತ್ತಿಲ್ಲ ಎಂದು ಅವರು ಟೀಕಿಸಿದ್ದಾರೆ.
ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಕೇರಳದ ಸಂಸದರು ಆರೋಪ ಮಾಡಿದ್ದಾರೆ. ಕೇರಳ ಭಾರತದಲ್ಲಿದೆ, 'ವಯನಾಡ್‌ಗೆ ನ್ಯಾಯ ದೊರಕಿಸಿ' ಎಂದು ಘೋಷಣೆಗಳನ್ನು ಕೂಗಿದ್ದಾರೆ.
ವಯನಾಡಿಗೆ ವಿಶೇಷ ಪ್ಯಾಕೇಜ್ ನೀಡಲು ಕೇಂದ್ರವು ನಿರಾಕರಿಸುತ್ತಿರುವುದು ತುಂಬಾ ನಿರಾಸೆಯನ್ನುಂಟು ಮಾಡಿದೆ. ನಾವು ಕೇಂದ್ರ ಗೃಹ ಸಚಿವರನ್ನು ಭೇಟಿಯಾಗಿದ್ದೇವೆ. ಪ್ರಧಾನ ಮಂತ್ರಿಗೂ ಪತ್ರ ಬರೆದಿದ್ದೇವೆ. ನೈಸರ್ಗಿಕ ವಿಪತ್ತು ಎಂದು ಘೋಷಿಸಿ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಿದ್ದೇವೆ ಎಂದು ಪ್ರಿಯಾಂಕಾ ತಿಳಿಸಿದ್ದಾರೆ.
ನೈಸರ್ಗಿಕ ವಿಕೋಪದ, ನೋವಿನ ಸಂದರ್ಭದಲ್ಲಿ ತಾರತಮ್ಯ ತೋರಬಾರದು. ರಾಜಕೀಯವನ್ನು ಬದಿಗಿಟ್ಟು ನೆರವನ್ನು ನೀಡಬೇಕಾದ ಸಮಯ ಇದಾಗಿದೆ. ಪ್ರಧಾನಿ ಮೋದಿ ದೇಶದ ಪ್ರತಿಯೊಬ್ಬ ನಾಗರಿಕನ ರಕ್ಷಕನಾಗಬೇಕು ಎಂದು ಅವರು ಹೇಳಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 