ಕಾರ್ಮಿಕ ಸಂಘಟನೆಗಳಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
Protest for fulfillment of various demands by trade unions
ಹೂವಿನಹಡಗಲಿ 10: ಕಾರ್ಮಿಕ ವಲಯದ ಮೇಲೆ ಹಿಡಿತಸಾಧಿಸುವ ಹಾಗೂ ಕಾರ್ಮಿಕರನ್ನು ಕಾರ್ಪೊರೇಟ್ ಕಂಪನಿಗಳ ಸೇವಕರನ್ನಾಗಿ ಮಾಡುವ ಉದ್ದೇಶದಿಂದ ದೇಶದಲ್ಲಿ ವಿವಿಧ ಸಂಹಿತೆಗಳನ್ನು ಜಾರಿಗೆ ತರಲಾಗಿದೆ. ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಎಐಟಿಯುಸಿ ತಾಲೂಕು ಘಟಕದಿಂದ ಪಟ್ಟಣದ ಶಾಸ್ತ್ರಿ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಎಐಟಿಯುಸಿ ತಾಲ್ಲೂಕು ಮಹಿಳಾ ಅದ್ಯಕ್ಷೆ ಬಿ.ಜಯಲಕ್ಷ್ಮಿ ಮಾತನಾಡಿ ಕಾಯಂ ಕೆಲಸ ಜತೆಗೆ ಕೆಲಸದ ಅವಧಿಯನ್ನು ಎಂಟು ಗಂಟೆಗೆ ಸೀಮಿತಗೊಳಿಸಬೇಕು. ಕಾರ್ಮಿಕರನ್ನು ಕಾರ್ಪೊರೇಟ್ ಕಂಪನಿಗಳು ವಿವಿಧ ಸಂಹಿತೆಗಳನ್ನು ಜಾರಿಗೆ ತರಲಾಗುತ್ತಿದ್ದು, ಅವುಗಳನ್ನು ಕೂಡಲೇ ಕೈ ಬಿಡಬೇಕು. ದರ ಏರಿಕೆಗೆ ಅನುಗುಣವಾಗಿ ವೇತನ ನಿಗದಿ ಮಾಡಬೇಕೆಂದು ಒತ್ತಾಯಿಸಿದರು.
ಸಂಘದ ಉಪಾಧ್ಯಕ್ಷ ಜಂಗ್ಲಿಸಾಬ್, ಪ್ರಧಾನ ಕಾರ್ಯದರ್ಶಿ ಬಸವರಾಜ ಸಂಶಿ, ಸಹಕಾರ್ಯದರ್ಶಿ ಚಂದ್ರಮ್ಮ, ಸದಸ್ಯರಾದ ಶಿಲ್ಪಾ, ಸವಿತಾ, ಮಂಜುಳಾ, ನಾಗರತ್ನ ಇತರರಿದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 