ಬೆಳಗಾವಿ 17: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಪ್ ಇಂಡಿಯಾ ವತಿಯಿಂದ ಪ್ರತಿಭಟಿಸಿದರು.
ಮುಸ್ಲಿಂಮರ 2ಬಿ ಮೀಸಲಾತಿಯನ್ನು ಪುನರ್ ಸ್ಥಾಪಿಸಿ ಶೇಕಡಾ 8ಕ್ಕೆ ಎರಿಸಬೇಕು, ಕಾಂತರಾಜ್ ಆಯೋಗದ ವರದಿಯನ್ನು ಸಾರ್ವಜನಿಕಗೊಳಿಸಿ ಮತ್ತು ಜಾರಿಗೊಳಿಸಿ, ವಕ್ಸ್ ಅಸ್ತಿಗಳು ಮತ್ತು ಭೂಮಿಗಳನ್ನು ಸಂರಕ್ಷಣೆಗೊಳಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಿರುವ ಎಸ್‌ಸಿಪಿ, ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗೆ ಸೇರಿದಂತೆ ಬೇರೆ ಯಾವುದೇ ಯೋಜನೆಗಳಿಗೆ ಬಳಸಬಾರದು.
2025-26ನೇ ಸಾಲಿನ ಬಜೆಟ್‌ನಲ್ಲಿ, ಅಲ್ಪಸಂಖ್ಯಾತರ ಕಲ್ಯಾಣಕ್ಕೆ 10 ಸಾವಿರ ಕೋಟಿ ಮೀಸಲಿಡಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಅಬ್ದುಲ್ ಮಜೀದ್, ಆರ್. ಭಾಸ್ಕರ್ ಪ್ರಸಾದ್, ಅಫ್ಸರ್ ಕೂಡ್ಲಿಪೇಟೆ, ಅಂಗಡಿ ಚಂದ್ರು ಸೇರಿದಂತೆ ಇತರರು ಇದ್ದರು.