ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ  Protest in Bengaluru demanding implementation of minimum wage

ಕಂಪ್ಲಿ  01: ಕನಿಷ್ಠ ವೇತನವನ್ನು ಹೆಚ್ಚಿಸಿ ಹೊಸದಾಗಿ ಜಾರಿಗೆ ತರಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಜೂನ್ 9ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ‘ಬೆಂಗಳೂರು ಚಲೋ’ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಆರ್‌. ಎಸ್‌. ಬಸವರಾಜ ಹೇಳಿದರು.  

ಪಟ್ಟಣದ ಐತಿಹಾಸಿಕ ಸೋಮಪ್ಪ ದೇವಸ್ಥಾನದ ಆವರಣದಲ್ಲಿ ಬುಧವಾರ ನಡೆದ ಸಂಘಟನಾ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ವೇತನದಲ್ಲಿ ಸ್ವಲ್ಪ ಮಟ್ಟಿನ ಹೆಚ್ಚಳ ಮಾಡಿರುವುದು ಸ್ವಾಗತಾರ್ಹವಾದರೂ, ಸರ್ಕಾರಿ ಆದೇಶದಂತೆ ಕನಿಷ್ಠ ವೇತನವನ್ನು ಸಂಪೂರ್ಣವಾಗಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.  

ಗ್ರಾಮ ಪಂಚಾಯಿತಿ ನೌಕರರು ಕಳೆದ ಹಲವು ವರ್ಷಗಳಿಂದ ಕರವಸೂಲಿಗಾರರು, ಗುಮಾಸ್ತರು, ಕ್ಲರ್ಕ, ಡಾಟಾ ಎಂಟ್ರಿ ಆಪರೇಟರ್, ವಾಟವರ್ಾ್ಯುನ್, ಪಂಪ್ ಆಪರೇಟರ್, ಜವಾನರು, ಸ್ವಚ್ಛತಾಗಾರರು ಹಾಗೂ ಓಲೆಚರಂಡಿ ಕ್ಲೀನಿಂಗ್ ಸಿಬ್ಬಂದಿಯಾಗಿ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಅವರು ಹೇಳಿದರು.  

ಈ ನೌಕರರಿಗೆ ಸರ್ಕಾರದಿಂದ ನ್ಯಾಯಸಮ್ಮತ ವೇತನ ನೀಡಬೇಕು ಹಾಗೂ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು. ಪಿಂಚಣಿ ಸೌಲಭ್ಯ, ಸೇವಾ ಹಿರಿತನ ಭತ್ಯೆ, ಪಿಎಫ್, ಎಸ್ಡಿಎ, 2ನೇ ಡಿಒ ಸೇರಿದಂತೆ ಆರೋಗ್ಯ ವಿಮೆ ಜಾರಿಗೆ ತರಬೇಕೆಂದು ಅವರು ಒತ್ತಾಯಿಸಿದರು.  

ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಹೆಚ್ಚುವರಿ ಗೌರವಧನ ನೀಡಬೇಕು ಎಂದು ಅವರು ಹೇಳಿದರು. 15 ಸಾವಿರ ರೂ. ಗೌರವಧನ ಹಾಗೂ ಸಿಂಗಲ್ ಚಾರ್ಜರ್ ಸಿಬ್ಬಂದಿಗೆ 7,500 ರೂ. ಗೌರವಧನ ನೀಡಬೇಕೆಂದು ಅವರು ಆಗ್ರಹಿಸಿದರು.  

ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಬೆಂಗಳೂರು ಚಲೋ ಮೂಲಕ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಸಂಘದ ಪದಾಧಿಕಾರಿಗಳು ತಿಳಿಸಿದರು. ಈ ಹೋರಾಟದಲ್ಲಿ ರಾಜ್ಯಾದ್ಯಂತ 500ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ನೌಕರರು ಭಾಗವಹಿಸಲಿದ್ದಾರೆ ಎಂದು ತಿಳಿಸಲಾಯಿತು.  

ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ಆರ್‌. ಎಸ್‌. ಬಸವರಾಜ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೀರಸೇನರೆಡ್ಡಿ, ತಾಲೂಕು ಅಧ್ಯಕ್ಷ ಜಡೆಪ್ಪಸ್ವಾಮಿ, ಉಪಾಧ್ಯಕ್ಷ ಎಚ್‌. ಗಾದಿಲಿಂಗಪ್ಪ, ಪ್ರಧಾನ ಕಾರ್ಯದರ್ಶಿ ಚಾಂದ್ಬಾಷಾ ಸೇರಿದಂತೆ ಹಲವು ಪದಾಧಿಕಾರಿಗಳು ಮತ್ತು ನೌಕರರು ಭಾಗವಹಿಸಿದ್ದರು.