ನದಿ ಜೋಡಣೆ ಕೈಬಿಡಲು ಆಗ್ರಹಿಸಿ ಕಾರವಾರದಲ್ಲಿ ಪ್ರತಿಭಟನೆ
Protest in Karwar demanding the scrapping of the river interlinking project
ಕಾರವಾರ 03: (ವರದಾ) ಹಾಗೂ ನದಿ ಜೋಡಣೆ ಯೋಜನೆಗಳನ್ನು ಕೈಬಿಡುವಂತೆ ಆಗ್ರಹಿಸಿ ಮಾಜಿ ಶಾಸಕಿ ರೂಪಾಲಿ ನಾಯ್ಕ ಹಾಗೂ ಪರಿಸರವಾದಿ ಅನಂತ ಹೆಗಡೆ ಆಶೀಸರ ನೇತೃತ್ವದಲ್ಲಿ ಕಾರವಾರದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ವಿವಿಧ ತಾಲೂಕುಗಳ ರೈತರು, ಸಾರ್ವಜನಿಕರು, ಪರಿಸರ ಹೋರಾಟಗಾರರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡರು. ಯೋಜನೆಯಿಂದ ಗಂಗಾವಳಿ ನದಿಯ ನೀರಿನ ಹರಿವು ಕಡಿಮೆಯಾಗುವುದರ ಜೊತೆಗೆ ಗೋಕರ್ಣ, ಸೀಬರ್ಡ, ಕಾರವಾರ ಹಾಗೂ ಬಿಣಗಾ ಕೈಗಾರಿಕಾ ಪ್ರದೇಶಕ್ಕೆ ನೀರಿನ ಕೊರತೆ ಉಂಟಾಗುವ ಆತಂಕವಿದೆ ಎಂದು ಪ್ರತಿಭಟನಾಕಾರರು ಹೇಳಿದರು.
ಪರಿಸರವಾದಿ ಅನಂತ ಹೆಗಡೆ ಆಶೀಸರ ಮಾತನಾಡಿ, ನದಿ ಜೋಡಣೆ ಯೋಜನೆಗಾಗಿ ಅಣೆಕಟ್ಟು, ಕಾಲುವೆ, ಸುರಂಗ, ಪೈಪ್ಲೈನ್, ಪಂಪ್ಹೌಸ್ ಸೇರಿದಂತೆ ಬೃಹತ್ ಕಾಮಗಾರಿಗಳಿಂದ ಪಶ್ಚಿಮಘಟ್ಟದಲ್ಲಿ ಅರಣ್ಯ ನಾಶ ಹಾಗೂ ಪರಿಸರ ಹಾನಿಯಾಗುವ ಸಾಧ್ಯತೆ ಇದೆ ಎಂದರು. ಪ್ರತಿಭಟನಾಕಾರರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರ ಮೂಲಕ ಮನವಿ ಸಲ್ಲಿಸಿ, ಯೋಜನೆಗಳನ್ನು ಸಂಪೂರ್ಣವಾಗಿ ಕೈಬಿಡಬೇಕು, ಯೋಜನೆಯ ಡಿಪಿಆರ್ ತಯಾರಿಕೆ ಆದೇಶ ರದ್ದುಪಡಿಸಿ, ಎಲ್ಲ ಸಮೀಕ್ಷಾ ಕಾರ್ಯಗಳನ್ನು ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿ ಮಾತನಾಡಿ, ಕೆಡಿಪಿ ಸಭೆಯಲ್ಲಿ ನದಿ ಜೋಡಣೆ ಯೋಜನೆಗೆ ವಿರೋಧಿಸಿ ನಿರ್ಣಯ ಕೈಗೊಂಡಿದ್ದು, ಅದನ್ನು ಎನ್ಜಿಟಿಗೆ ಈಗಾಗಲೇ ಕಳುಹಿಸಲಾಗಿದೆ ಎಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 