ನೀಟ್-2026 ಪರೀಕ್ಷೆ ಅಕ್ರಮ ಖಂಡಿಸಿ ವಿಜಯಪುರದಲ್ಲಿ ಪ್ರತಿಭಟನೆ
Protest in Vijayapura condemning irregularities in the NEET-2026 exam
ವಿಜಯಪುರ, ಜು.17: ಹಿ2026 ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ ಪರಿಸರವಾದಿ ಸೋನಂ ವಾಂಗ್ಚುಕ್ ಅವರು ದೆಹಲಿಯ ಜಂತರ್ ಮಂತರ್ನಲ್ಲಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ವಿಜಯಪುರ ನಗರದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.
ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಸೋನಂ ವಾಂಗ್ಚುಕ್ ಅವರ ಉಪವಾಸ ಸತ್ಯಾಗ್ರಹಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಗತಿಪರ ಮುಖಂಡ ಅನಿಲ್ ಹೊಸಮನಿ, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟಾಗಿದೆ. ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಕಾಪಾಡಲು ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಎಐಡಿವೈಒ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಮಾತನಾಡಿ, ನೀಟ್ ಪರೀಕ್ಷೆ ಕುರಿತ ವಿವಾದಕ್ಕೆ ನೈತಿಕ ಹೊಣೆ ಹೊತ್ತು ಸಂಬಂಧಿತ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ದಲಿತ ಮುಖಂಡ ಚನ್ನು ಕಟ್ಟಿಮನಿ, ಪ್ರಗತಿಪರ ಮುಖಂಡ ಚಂದ್ರಶೇಖರ ಗಂಟೆಪ್ಪಗೋಳ, ನಿವೃತ್ತ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ ಲೇಂಡಿ, ಬೌದ್ಧ ವಿಹಾರ ನಿರ್ಮಾಣ ಸಮಿತಿ ಅಧ್ಯಕ್ಷ ರಾಜಶೇಖರ ಯಡಹಳ್ಳಿ, ಅಹಿಂದ ಮುಖಂಡ ಎಸ್.ಎಂ. ಪಾಟೀಲ ಗಣಿಹಾರ ಸೇರಿದಂತೆ ಹಲವು ಮುಖಂಡರು ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಯಾವುದೇ ರಾಜಿ ಮಾಡಿಕೊಳ್ಳಬಾರದು. ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 