ಕೂಲಿ ಕಾರ್ಮಿಕರಿಗೆ ಕೆಲಸ ನೀಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

ಕೂಲಿ ಕಾರ್ಮಿಕರಿಗೆ ಕೆಲಸ ನೀಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ  Protest in front of the Deputy Commissioner's office demanding work for manual laborers

ಧಾರವಾಡ 4: ಲೋಕೂರು ಗ್ರಾಮದ ಕೂಲಿ ಕಾರ್ಮಿಕರಿಗೆ ಕೆಲಸ ನೀಡಬೇಕು ಎಂದು ಒತ್ತಾಯಿಸಿ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಬಳಿಕ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಯಿತು.  ಮನವಿ ಸ್ವೀಕರಿಸಿದ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳು, ಕೂಲಿ ಕಾರ್ಮಿಕರಿಗೆ ತಕ್ಷಣವೇ ಕೆಲಸ ಒದಗಿಸುವಂತೆ ಪಿಡಿಒ ಅವರಿಗೆ ನಿರ್ದೇಶನ ನೀಡಿದರು.  

ಬರಗಾಲದ ಪರಿಸ್ಥಿತಿಯಲ್ಲಿ ಜಿಲ್ಲೆಯ ಎಲ್ಲ ಗ್ರಾಮೀಣ ಕೂಲಿ ಕಾರ್ಮಿಕರಿಗೆ ನಿರಂತರವಾಗಿ ಉದ್ಯೋಗ ಕಲ್ಪಿಸಬೇಕು ಎಂದು ಎಐಕೆಕೆಎಂಎಸ್ ಜಿಲ್ಲಾ ಸಮಿತಿ ಹೋರಾಟ ನಡೆಸುತ್ತಿದೆ. ಯಾವುದೇ ಗ್ರಾಮದಲ್ಲಿ ಕೆಲಸ ನೀಡದಿದ್ದಲ್ಲಿ 7411516670 ಹಾಗೂ 8553363832 ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾ ಕಾರ್ಯದರ್ಶಿ ಶರಣು ಗೋನವರ ತಿಳಿಸಿದ್ದಾರೆ.  ಪ್ರತಿಭಟನೆ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷೆ ದೀಪಾ ದಾರವಾಡ, ಕಾರ್ಯದರ್ಶಿ ಶರಣು ಗೋನವರ, ಸದಸ್ಯರಾದ ಸಂಗಪ್ಪ, ಬಸವರಾಜಪ್ಪ, ಸಾವಕ್ಕ, ಸರಸ್ವತಮ್ಮ, ಲಕ್ಷ್ಮೀ, ಗಿರಿ ದವ್ವ ಹಾಗೂ ನಿಂಗಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.