ಸೋನಂ ವಾಂಗ್ಚುಕ್ ಬೆಂಬಲಿಸಿ ಪ್ರತಿಭಟನೆ : ಶಿಕ್ಷಣ ಕ್ಷೇತ್ರದ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಬೇಕು ಎಂದು ಆಗ್ರಹ
Protest in support of Sonam Wangchuk: Demand for the Central Government to address issues in the edu
ಕೊಪ್ಪಳ 17: ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಹಾಗೂ ಶಿಕ್ಷಣ ಕ್ಷೇತ್ರದ ವಿವಿಧ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಬೇಕೆಂದು ಒತ್ತಾಯಿಸಿ, ಕರ್ನಾಟಕ ವಿದ್ಯಾರ್ಥಿ ಸಂಘಟನೆ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯ ಬಳಿಕ ಉಪ ತಹಶೀಲ್ದಾರ್ ಗವಿಸಿದ್ದಪ್ಪ ಮಣ್ಣೂರ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಮುಖ್ಯ ಸಂಚಾಲಕ ಬಸವರಾಜ ಶೀಲವಂತರ ಮಾತನಾಡಿ, ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಗಂಭೀರ ಸಮಸ್ಯೆಗಳ ಕುರಿತು ಸೋನಂ ವಾಂಗ್ಚುಕ್ ಶಾಂತಿಯುತವಾಗಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಕೇಂದ್ರ ಸರ್ಕಾರ ಸ್ಪಂದಿಸದಿರುವುದು ಸರಿಯಲ್ಲ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಬಾರದು. ಶಿಕ್ಷಣ ಕ್ಷೇತ್ರದ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಕಂಡುಹಿಡಿಯಬೇಕು ಎಂದು ಒತ್ತಾಯಿಸಿದರು.
ಯುವ ಮುಖಂಡ ಕಾಶಿಂ ನಾಗೇಶನಹಳ್ಳಿ ಮಾತನಾಡಿ, ದೇಶದ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳ ಧ್ವನಿಗೆ ಸ್ಪಂದಿಸಿ ಶಿಕ್ಷಣ ಕ್ಷೇತ್ರದ ಸಮಸ್ಯೆಗಳನ್ನು ಶೀಘ್ರ ಪರಿಹರಿಸಬೇಕು. ಸೋನಂ ವಾಂಗ್ಚುಕ್ ಅವರ ನ್ಯಾಯಸಮ್ಮತ ಬೇಡಿಕೆಗಳ ಕುರಿತು ಕೇಂದ್ರ ಸರ್ಕಾರ ವಿಳಂಬ ಮಾಡದೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 