ಗ್ರಾ.ಪಂ ನೌಕರರ ಪ್ರತಿಭಟನೆ: ಪಾದಯಾತ್ರೆ ಮೂಲಕ ಮನವಿ
Protest of Gram Panchayat employees: appeal through padayatra
ಜಮಖಂಡಿ 10: ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘಟನೆ ಸಹಯೋಗದಲ್ಲಿ ಗ್ರಾಮ ಪಂಚಾಯತ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ರಾಜ್ಯ ಸರಕಾರ ಈಡೆರಿಸಬೇಕೆಂದು ಒತ್ತಾಯಿಸಿ. ನಗರದ ಎ.ಜಿ, ದೇಸಾಯಿ ಸಕಲ್‌ದಿಂದ ತಾಲೂಕಾಡಳಿತ ಸೌಧದವರೆಗೆ ಪಾದಯಾತ್ರೆಯ ಮೂಲಕ ಪ್ರತಿಭಟನೆ ನಡೆಸಿ, ನಂತರ ತಹಶೀಲ್ದಾರ ಸದಾಶಿವ ಮಕ್ಕೋಜಿ ಅವರ ಮೂಲಕ ರಾಜ್ಯ ಸರಕಾರಕ್ಕೆ ಮನವಿಯನ್ನು ಸಲಿಸಿದರು.
ನಂತರ ಮಾತನಾಡಿದ ಅವರು, ಕಾರ್ಮಿಕ ವಿರೋಧಿ ನಾಲ್ಕು ಲೇಬರ್ ಕೋಡಗಳ ಜಾರಿ ವಿರೋಧಿಸಿ, ಕರಡು ಅಧಿಸೂಚನೆಯಲ್ಲಿ ರೂ 31 ಸಾವಿರ ರೂ,ಗಳನ್ನು ನಿಗದಿಪಡಿಸಿ ಅಂತಿಮಗೊಳಿಸಬೇಕು. ಪಿಂಚಣಿ, ಸೇವಾ ಹಿರಿತನ ಭತ್ಯೆ ಹೆಚ್ಚಳ, ಪಂಚಾಯತಿಗೆ ಒಂದು ಎಸ್.ಡಿ.ಎ. 2 ನೇ ಡಿಇಓ ನೇಮಕಾತಿ ಮತ್ತು ಆರೋಗ್ಯ ವಿಮೆ ಜಾರಿಯಾಗಬೇಕು, ಸ್ವಚ್ಛವಾಹಿನಿಯರ ಒಡಂಬಡಿಕೆ ರದ್ದು, ತರಬೇತಿ ಪಡೆದ ಎಲ್ಲರಿಗೂ ಕಡ್ಡಾಯ ಕೆಲಸ ರೂ 7500 ರೂ,ಗಳ ಗೌರವಧನ ನೀಡಬೇಕು,ಸಿಂಗಲ್ ಚಾಲಕರನ್ನು ಪರಿಗಣಿಸಿ 15 ಸಾವಿರ ರೂ,ಗಳ ಗೌರವಧನ ನೀಡಬೇಕೆಂದು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಅನೇಕ ಗ್ರಾಮ ಪಂವಚಾಯತ್ ನೌಕರರು ಇದ್ದರು,
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ 