ದಲಿತರು, ಶೋಷಿತರು ಹಾಗೂ ಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರಕ್ಕೆ ಆಗ್ರಹಿಸಿ ಆ. ೨೭ರಂದು ಪ್ರತಿಭಟನೆ
Protest on August 27 demanding solutions to the problems faced by Dalits, the oppressed, and workers
ಕೊಪ್ಪಳ, ಆ. ೨೪: ದೇಶಕ್ಕೆ ಸ್ವಾತಂತ್ರö್ಯ ಬಂದು ದಶಕಗಳು ಕಳೆದರೂ ದಲಿತರು, ಶೋಷಿತರು ಹಾಗೂ ಬಡ ಕಾರ್ಮಿಕರ ಸಮಸ್ಯೆಗಳು ಇಂದಿಗೂ ಬಗೆಹರಿದಿಲ್ಲ ಎಂದು ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ರಾಜ್ಯ ಸಮಿತಿ ಸಂಸ್ಥಾಪಕ ಅಧ್ಯಕ್ಷ ಯಲ್ಲಪ್ಪ ಕಟ್ಟಿಮನಿ ಹಾಗೂ ಜಿಲ್ಲಾಧ್ಯಕ್ಷ ರಮೇಶ್ ಅಂಗಡಿ ಕಾಟಾಪುರ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸೋಮವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತ ಹಾಗೂ ಶ್ರಮಿಕ ವರ್ಗಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಆ. ೨೭ರಂದು ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಆ. ೨೭ರಂದು ಬೆಳಗ್ಗೆ ೧೦.೩೦ಕ್ಕೆ ಕೊಪ್ಪಳದ ಡಾ. ಬಾಬು ಜಗಜೀವನರಾಮ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
ಎರಡು ಪ್ರಕರಣಗಳ ಸಿಬಿಐ ತನಿಖೆಗೆ ಆಗ್ರಹ
ಇತ್ತೀಚೆಗೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದಲ್ಲಿ ನಡೆದ ಮಾದಿಗ ಸಮುದಾಯದ ಯುವ ಮುಖಂಡ ಭೂಮಾನಂದ ಅವರ ಹತ್ಯೆ ಹಾಗೂ ಸಿರವಾರ ತಾಲೂಕಿನ ಹೊಕಾಣ ಗ್ರಾಮದಲ್ಲಿ ಕುಮಾರಿ ಅಶ್ವಿನಿ ಎಂಬ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.
ಎರಡೂ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವುದರ ಜೊತೆಗೆ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ನಿರಾಶ್ರಿತರಿಗೆ ನಿವೇಶನ ನೀಡಲು ಒತ್ತಾಯ
ಕೊಪ್ಪಳ ಜಿಲ್ಲೆಯಲ್ಲಿ ನಿರಾಶ್ರಿತರ ಸಂಖ್ಯೆ ಸುಮಾರು ೨ ಲಕ್ಷಕ್ಕೂ ಅಧಿಕ ಇದ್ದು, ಸರ್ಕಾರ ಘೋಷಿಸಿರುವ ೫೦ ಸಾವಿರ ನಿವೇಶನಗಳ ಬದಲಿಗೆ ಅರ್ಹ ಎಲ್ಲ ನಿರಾಶ್ರಿತರಿಗೆ ಕನಿಷ್ಠ ೨ ಲಕ್ಷ ನಿವೇಶನಗಳನ್ನು ಗುರುತಿಸಿ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು.
ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಭಕ್ತರಿಗೆ ಉತ್ತಮ ವಸತಿ, ಶುದ್ಧ ಕುಡಿಯುವ ನೀರು ಹಾಗೂ ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಮನವಿ ಮಾಡಿದರು.
ದಲಿತ, ಕಾರ್ಮಿಕ ಕುಟುಂಬಗಳಿಗೆ ನಿವೇಶನ ಮತ್ತು ಹಕ್ಕುಪತ್ರ
ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಜಾಪುರ ಸೀಮೆಯ ಸರ್ವೆ ನಂ. ೭೦ರಲ್ಲಿನ ೫.೧೮ ಎಕರೆ ಹಾಗೂ ಜಂಗಮರ ಕಲ್ಗುಡಿ ಸೀಮೆಯ ಸರ್ವೆ ನಂ. ೭೫ರಲ್ಲಿನ ೧.೧೧ ಎಕರೆ ಜಮೀನನ್ನು ಸರ್ವೆ ಮಾಡಿ ದಲಿತ ಹಾಗೂ ಕೂಲಿಕಾರ್ಮಿಕರ ಕುಟುಂಬಗಳಿಗೆ ನಿವೇಶನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.
ಅದೇ ರೀತಿ ಗಂಗಾವತಿಯ ಗಾಳೆಮ್ಮಗುಡಿ ಕ್ಯಾಂಪ್ನಲ್ಲಿ ದಶಕಗಳಿಂದ ವಾಸಿಸುತ್ತಿರುವ ದಲಿತ ಹಾಗೂ ಕಾರ್ಮಿಕ ಕುಟುಂಬಗಳಿಗೆ ಅವರು ವಾಸಿಸುತ್ತಿರುವ ಜಾಗದ ಹಕ್ಕುಪತ್ರಗಳನ್ನು ವಿತರಿಸಬೇಕು ಎಂದು ಒತ್ತಾಯಿಸಿದರು.
ಪೊಲೀಸ್ ಇಲಾಖೆಯ ವಿರುದ್ಧವೂ ಅಸಮಾಧಾನ
ಕೊಪ್ಪಳ ಜಿಲ್ಲೆಯ ಕನಕಗಿರಿ ಪೊಲೀಸ್ ಠಾಣೆಯ ಪಿಐ ವಿ. ನಾರಾಯಣ ಅವರ ಅಮಾನತು ಆದೇಶವನ್ನು ಯಾವುದೇ ಸೂಕ್ತ ತನಿಖೆಯಿಲ್ಲದೆ ಹೊರಡಿಸಲಾಗಿದೆ ಎಂದು ಆರೋಪಿಸಿದ ಅವರು, ಆ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆಯಿಂದ ಎಸ್ಸಿ/ಎಸ್ಟಿ ಕುಂದುಕೊರತೆ ಹಾಗೂ ಕಾನೂನು ಜಾಗೃತಿ ಸಭೆಗಳನ್ನು ಗ್ರಾಮೀಣ ಮಟ್ಟದಲ್ಲಿಯೇ ನಡೆಸಬೇಕು. ತಾಲೂಕುಗಳಲ್ಲಿ ಅಕ್ರಮ-ಸಕ್ರಮ ಸಮಿತಿ ಸಭೆಗಳನ್ನು ನಿರಂತರವಾಗಿ ನಡೆಸಬೇಕು ಎಂದು ಒತ್ತಾಯಿಸಿದರು.
ಕಾರಟಗಿ ತಾಲೂಕಿನಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಡಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಖಾಸಗಿ ಆಸ್ತಿಗಳ ನೋಂದಣಿ ಪ್ರಕ್ರಿಯೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಹೇಳಿದರು.
ವಿವಿಧ ಸಂಘಟನೆಗಳಿಗೆ ಪ್ರತಿಭಟನೆಗೆ ಬೆಂಬಲ ನೀಡಲು ಕರೆ
ಈ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ನಡೆಯಲಿರುವ ಹೋರಾಟಕ್ಕೆ ವಿವಿಧ ಸಂಘ-ಸAಸ್ಥೆಗಳು, ಪ್ರಗತಿಪರರು, ಕಾರ್ಮಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಂಬಲ ನೀಡಬೇಕು ಎಂದು ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಯಲ್ಲಪ್ಪ ಕಟ್ಟಿಮನಿ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ರಮೇಶ್ ಅಂಗಡಿ ಕಾಟಾಪುರ, ಜಿಲ್ಲಾ ಉಪಾಧ್ಯಕ್ಷ ರಾದ ತಾಯೆಪ್ಪ ಗುಂಡೂರು, ಕೃಷ್ಣಪ್ಪ ಸಂಗಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಂಕೋಬ ಮೈಲಾಪುರ, ಜಿಲ್ಲಾ ಸಹ ಕಾರ್ಯದರ್ಶಿ ನೀಲಪ್ಪ ಧನಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಈರೀಗೇರ, ಮಂಜುನಾಥ ಬಡಿಗೇರ, ಗಾಳೆಪ್ಪ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 