ಈರುಳ್ಳಿಗೆ ಬೆಂಬಲ ಬೆಲೆ ಒದಗಿಸುವಂತೆ ಒತ್ತಾಯಿಸಿ ಅ 08 ರಂದು ಪ್ರತಿಭಟನೆ
Protest on October 8th demanding support price for onions
ಈರುಳ್ಳಿಗೆ ಬೆಂಬಲ ಬೆಲೆ ಒದಗಿಸುವಂತೆ ಒತ್ತಾಯಿಸಿ ಅ 08 ರಂದು ಪ್ರತಿಭಟನೆ
ಗದಗ 06:ಜಿಲ್ಲೆಯಲ್ಲಿ ವಿಶೇಷವಾಗಿ ಈರುಳ್ಳಿ ಬೆಳೆದ ರೈತರು 50-60 ಸಾವಿರ ಖರ್ಚು ಮಾಡಿ ಬೆಳೆದಂತಹ ಈರುಳ್ಳಿ ಬೆಳೆಗೆ ಕೇವಲ 30-40 ಸಾವಿರ ಬೆಲೆ ಸಿಗುತ್ತಿದ್ದು, ಆವರ್ತನಿಧಿಯನ್ನ ಕೂಡಲೇ ಮುಖ್ಯಮಂತ್ರಿಗಳು ಗದಗ ಜಿಲ್ಲಾಧಿಕಾರಿಗಳಿಗೆ ನೀಡಬೇಕು.ಈಗಾಗಲೇ ಗದಗ ಜಿಲ್ಲೆಯ ಬಹುತೇಕ ಗ್ರಾಮಗಳ ರೈತರನ್ನ ಸಂಪರ್ಕಿಸಿದ್ದು, ಎಲ್ಲರಿಂದಲೂ ಪ್ರತಿಭಟನೆಗೆ ಸಹಕಾರ ಬಂದಿದ್ದು, ಅಕ್ಟೋಬರ್-08 ರಂದು ಬೆಳಿಗ್ಗೆ 11ಕ್ಕೆ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿ ವರೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತಪರ ಹೋರಾಟಗಾರ ವೆಂಕಟೇಶ ಕುಲಕರ್ಣಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈರುಳ್ಳಿಗೆ 3500-4000 ಸಾವಿರ ರೂ. ಬೆಂಬಲ ಬೆಲೆ ಒದಗಿಸಬೇಕು.ಸರಕಾರ ಕೂಡಲೇ ಖರೀದಿ ಕೇಂದ್ರ ಪ್ರಾರಂಭಿಸಬೇಕಿದೆ. ಈ ಪ್ರತಿಭಟನೆಯಲ್ಲಿ ಅಧಿಕ ಸಂಖ್ಯೆಯಲ್ಲಿ ರೈತರು ಪಾಲ್ಗೊಳ್ಳುವಂತೆ ವಿನಂತಿಸಿದರು. ಇದೇ ವೇಳೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗದಗ ಜಿಲ್ಲಾಧ್ಯಕ್ಷ ಶಂಕರಗೌಡ ಜಯನಗೌಡ್ರ ಮಾತನಾಡಿ ಈರುಳ್ಳಿಗೆ ಬೆಂಬಲ ಬೆಲೆ ಒದಗಿಸುವಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರಿಗೆ ಮನವಿ ಸಲ್ಲಿಸಿದ್ದು ಯಾವುದೇ ಪ್ರಯೋಜನವಾಗಿಲ್ಲ.ಆದ್ದರಿಂದ ಪ್ರತಿಭಟನೆ ಅನಿವಾರ್ಯವಾಗಿದ್ದು,ಈರುಳ್ಳಿ ಹಾಗೂ ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭಿಸದೆ ಹೋದಲ್ಲಿ ಪ್ರತಿಭಟನೆ ಮಾಡುತ್ತೇವೆಂದರು. ಅತಿವೃಷ್ಠಿ-ಅನಾವೃಷ್ಠಿ ಯಲ್ಲಿ ರೈತರು ಕಳೆದುಕೊಂಡ ಬೆಳೆಯ ಬಗ್ಗೆ ಸರಿಯಾದ ಸಮೀಕ್ಷೆ ಆಗಿಲ್ಲ.ಅದಕ್ಕಾಗಿ ಸರಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದು, 8 ದಿನಗಳ ಕಾಲ ಜಿಲ್ಲಾಧಿಕಾರಿಗಳಿಗೆ ಅವಕಾಶ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದಾಗಿ ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ರೈತ ಮುಖಂಡರಾದ ವಿಜಯ ಕೊಲಕಾರ, ಯಲ್ಲಪ್ಪ ಶಲವಡಿ, ಬಸವಂತಪ್ಪ, ಮಲ್ಲಪ್ಪ ಮುಂಡವಾಡ, ಚನ್ನಪ್ಪ ಮುರುಡಿ, ಬಸವರಾಜ ಕೊಪ್ಪದ ಸೇರಿದಂತೆ ಅನೇಕರಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 