ಶಳ್ಳಗಿ ಕೂಲಿ ಕಾರ್ಮಿಕರಿಗೆ ಜಾಬ್ಕಾರ್ಡ್ ವಿತರಿಸದಿರುವುದಕ್ಕೆ ಪ್ರತಿಭಟನೆ
Protest over non-issuance of job cards to wage laborers in Shallagi
ತಾಳಿಕೋಟಿ ಸೆ.11: ತಾಲ್ಲೂಕಿನ ಬಂಟನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಳಗಿ ಗ್ರಾಮದ ಅರ್ಹ ಕೂಲಿ ಕಾರ್ಮಿಕರಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ (ಎಂ.ಜಿ.ಎನ್ಆರಿ್ಜಎ) ಜಾಬ್ಕಾರ್ಡ್ ವಿತರಿಸಿ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ಕೃಷಿ ಕೂಲಿಕಾರರ ಹಾಗೂ ಗ್ರಾಮೀಣ ಕಾರ್ಮಿಕರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಕೂಲಿ ಕಾರ್ಮಿಕರು ಗುರುವಾರ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಸಂಚಾಲಕ ರಮೇಶ ಸಾಸಬಾಳ ಮಾತನಾಡಿ, ಬಂಟನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಳಗಿ ಗ್ರಾಮದ ಕೂಲಿ ಕಾರ್ಮಿಕರು ಜಾಬ್ಕಾರ್ಡ್ ಪಡೆಯಲು ಎಲ್ಲ ರೀತಿಯಲ್ಲೂ ಅರ್ಹರಾಗಿದ್ದರೂ ಅವರಿಗೆ ಜಾಬ್ಕಾರ್ಡ್ ವಿತರಿಸಿಲ್ಲ. ಅಲ್ಲದೆ ಉದ್ಯೋಗವನ್ನೂ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದರು. ಈ ಕುರಿತು ಮಾಹಿತಿ ಕೇಳಲು ಕಚೇರಿಗೆ ಬಂದ ಕೂಲಿ ಕಾರ್ಮಿಕ ಮಹಿಳೆಯೊಂದಿಗೆ ಸಿಬ್ಬಂದಿ ಸರಿಯಾಗಿ ವರ್ತಿಸಿಲ್ಲ. ಸಮಸ್ಯೆ ಬಗೆಹರಿಸುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಅವರು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 