ಬೆಳಗಾವಿ ಜುಲೈ 10: ನೆರೆಯ ಮಹಾರಷ್ಟ್ರದ ಮುಂಬಯಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ವಾಸವಾಗಿದ್ದ ನಿವಾಸದ ಮೇಲೆ ಕಿಡಿಗೇಡಿಗಳಿಂದ ನಡೆದ ಹಲ್ಲೆ ಖಂಡಿಸಿ ಡಾ. ಅಂಬೇಡ್ಕರ್ ಯುವ ಮಂಚ, ಡಾ. ಅಂಬೇಡ್ಕರ್ ಯುವ ಸೇನೆ, ಬುದ್ಧಿಸ್ಟ್ ಸೊಸೈಟಿ ಸೇರಿದಂತೆ ವಿವಿಧ ದಲಿತ ಸಂಘಟನೆಗಳ ನೂರಾರು ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಮಹಾರಾಷ್ಟ್ರ ಸಕರ್ಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಶುಕ್ರವಾರ ಬೆಳಿಗ್ಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ದಲಿತ ಸಂಘಟನೆಗಳ ಕಾರ್ಯಕರ್ತರು ಈ ಕುರಿತು ಜಿಲ್ಲಾಧಿಕಾರಿಗಳ ಮುಖಾಂತರ ಮಹಾರಾಷ್ಟ್ರ ಸರಕಾರಕ್ಕೆ ಮನವಿಯೊಂದನ್ನು ಸಲ್ಲಿಸಿ, ಮುಂಬಯಿ ನಗರದ ದಾದರ್ ಪ್ರದೇಶದಲ್ಲಿರುವ ಡಾ. ಬಾಬಾಸಾಹೇಬ್ ಅಂಬೇಡ್ಕರ್ ನಿವಾಸ ರಾಜಗೃಹದ ಮೇಲೆ ಕಿಡಿಗೇಡಿಗಳ ಹಲ್ಲೆ ಖಂಡಿಸಿ ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಅಲ್ಲದೆ ಕಿಡಿಗೇಡಿಗಳು ಮತ್ತು ಸಕರ್ಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆಯಲ್ಲಿ ಕೆಲವು ದಲಿತ ಸಂಘಟನೆಯ ಮುಖಂಡರು ಮಾತನಾಡಿ, ಡಾ. ಅಂಬೇಡ್ಕರ್ ನಿವಾಸದ ಮೇಲೆ ನಡೆಸಿದ ಹಲ್ಲೆ ಎಲ್ಲ ದಲಿತರ ಮನೆಗಳ ಮೇಲೆ, ಹೃದಯಗಳ ಮೇಲೆ ನಡೆಸಿದ ಹಲ್ಲೆಯಾಗಿದೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಸುಮ್ಮನೆ ಬಿಡುವುದಿಲ್ಲ. ಸಕರ್ಾರಗಳು ಅದಕ್ಕಿಂತ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಲ್ಲೇಶ ಚೌಗಲೆ ಸೇರಿದಂತೆ ಅನೇಕು ಮುಖಂಡರು ಪದಾಧಿಕಾರಿಗಳು ಉಪಸ್ಥಿತರಿದ್ದರು.