ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ
Protests across the state demanding appointment of guest lecturers in government first-grade college
ಬಳ್ಳಾರಿ 22: ಕರ್ನಾಟಕ ರಾಜ್ಯದಲ್ಲಿ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಸಹಿತ ಇಲ್ಲಿಯವರೆಗೆ ಅತಿಥಿ ಉಪನ್ಯಾಸಕರ ನೇಮಕಾತಿ ಆಗದೆ ಇರುವ ಕಾರಣ ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯ ತರಗತಿಗಳು ನಡೆಯುತ್ತಿಲ್ಲ, ರಾಜ್ಯದ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರಿಂದ ಅವಲಂಬಿತವಾಗಿರುವ ಕಾರಣ ಹಲವಾರು ಸರ್ಕಾರಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇದರಿಂದ ಬಹಳಷ್ಟು ತೊಂದರೆಯಾಗುತ್ತಿದೆ, ಬಡ, ಕೂಲಿ ಕಾರ್ಮಿಕರ ಮಕ್ಕಳು ಸರಕಾರಿ ಕ್ಯಾಂಪಸ್‌ಗಳಲ್ಲಿ ಅಧ್ಯಯನ ಮಾಡುವ ಉದ್ದೇಶದಿಂದ ದಾಖಲಾತಿ ಮಾಡಿರುತ್ತಾರೆ, ಆದರೆ ಪ್ರತಿ ವರ್ಷ ಈ ರೀತಿಯ ವ್ಯವಸ್ಥೆಯಿಂದ ವಿದ್ಯಾರ್ಥಿಗಳ ಶಿಕ್ಷಣದಲ್ಲಿ ಹಿಂದುಳಿಯುತ್ತಿದ್ದಾರೆ,
ಖಾಸಗಿ ಕಾಲೇಜುಗಳಲ್ಲಿ ಸರಿಯಾಗಿ ತರಗತಿಗಳು ನಡೆದು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನ ಪಡೆದುಕೊಳ್ಳಲು ಅನುಕೂಲವಾಗುತ್ತದೆ ಆದರೆ ಶೇಕಡ 50ರಷ್ಟು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿರುವ ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಸರ್ಕಾರ ಅನ್ಯಾಯ ಮಾಡಿದಂತಾಗಿದೆ. ಕೂಡಲೇ ರಾಜ್ಯ ಸರ್ಕಾರ ಈ ಕುರಿತು ಗಂಭೀರವಾಗಿ ಪರಿಗಣಿಸಿ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಹುಡುಕಿಕೊಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸರ್ಕಾರಕ್ಕೆ ಆಗ್ರಹಿಸುತ್ತದೆ ಎಂದು ಜಿಲ್ಲಾ ಸಂಚಾಲಕರಾದ ಕೆ.ದೀಲೀಪ್ ಕುಮಾರ್ ಮಾತನಾಡಿದರು. ಮಾನ್ಯ ಜಿಲ್ಲಾಧಿಕಾರಿಗಳು, ಬಳ್ಳಾರಿ ಜಿಲ್ಲೆ ರವರ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ರವರಿಗೆ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಭಾಗ ಸಂಘಟನಾ ಕಾರ್ಯದರ್ಶಿಯಾದ ನಾಗರಾಜ ಬಟಗೇರಾ, ಶಿವಾನಿ, ಸಾಗರ್, ಭರತ್, ದರ್ಶನ್, ಕೃಷ್ಣ, ಶ್ರೀನಿವಾಸ್, ಪವನ್ ಕುಮಾರ್, ಶೃಷ್ಠಿ, ಐಶ್ವರ್ಯ, ವನಜಾಕ್ಷಿ, ಗೀತಾ, ಕಾವೇರಿ ಮುಂತಾದ ಅಭಾವಿಪ ಕಾರ್ಯಕರ್ತರು ಭಾಗವಹಿಸಿದ್ದರು.
ಬೇಡಿಕೆಗಳು:
* ಪ್ರತಿ ವರ್ಷ ನೇಮಕಾತಿ ಸಂದರ್ಭದಲ್ಲಿ ಈ ರೀತಿ ಗೊಂದಲವಾಗುತ್ತಿದ್ದು ಸರ್ಕಾರ ಶಾಶ್ವತ ಪರಿಹಾರ ಹುಡುಕಬೇಕು.ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಖಾಲಿ ಇರುವ ಎಲ್ಲಾ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಮಾಡಬೇಕು.
* ಸರ್ಕಾರಿ ಕಾಲೇಜುಗಳ ಮೂಲಭೂತ ಸೌಲಭ್ಯಕ್ಕೆ ಹೆಚ್ಚಿನ ಅನುದಾನ ನೀಡಬೇಕು.
* ಪ್ರಯೋಗಾಲಯ ಸಲಕರಣೆಗಳು, ಕಂಪ್ಯೂಟರ್, ಇನ್ನಿತರ ಸಲಕರಣೆಗಳನ್ನು ಒದಗಿಸಬೇಕು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 