ಸಂಸ್ಕಾರಯುತ ಶಿಕ್ಷಣ ನೀಡಿ: ಶಿವಶರಣಾನಂದ ಶ್ರೀಗಳು
Provide a cultured education: Shivasharanananda Shri
ಲೋಕದರ್ಶನ ವರದಿ
ಇಂಡಿ 07 : ಸಂಸ್ಕಾರ ಶಿಕ್ಷಣವು ಕೇವಲ ಪುಸ್ತಕದ ಜ್ಞಾನವಲ್ಲದೆ, ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯಗಳು, ಶಿಸ್ತು, ಸಂಸ್ಕೃತಿ ಮತ್ತು ಮಾನವೀಯ ಗುಣಗಳನ್ನು ಬೆಳೆಸುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸುವ, ಗುರು-ಹಿರಿಯರ ಗೌರವ ಮತ್ತು ಸಮಾಜದ ಬಗೆಗಿನ ಜವಾಬ್ದಾರಿಯನ್ನು ಕಲಿಸುವ ಶಿಕ್ಷಣ ನೀಡಲು ಶಿಕ್ಷಕರು ಮುಂದಾಗಬೇಕು ಎಂದು ಚಿಕ್ಕಾಲಗುಂಡಿ ಮಲ್ಲಿಕಾರ್ಜುನ ಮಠದ ಶಿವಶರಣಾನಂದ ಮಾಹಾಸ್ವಾಮಿಗಳು ಹೇಳಿದರು.ಅವರು ಇಂಡಿ ತಾಲ್ಲೂಕಿನ ತಡವಲಗಾ ಗ್ರಾಮದ ಜೈ ಹುನುಮಾನ ಕೊಚಿಂಗ್ ಕ್ಲಾಸಿನ್ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿದರು.
ಕನಕನಾಳ ಮಠದ ಗೀರೀಶಾನಂದ ಮಹಾರಾಜರು ಮಾತನಾಡಿದ ಅವರು ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಸಂಸ್ಕಾರದ ಪಠ್ಯದ ಜತೆಗೆ ಸ್ಪರ್ಧಾತ್ಮಕ ವಿಷಯಾಧಾರಿತ ಶಿಕ್ಷಣ ನೀಡಿದಾಗ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವನೆ ಮೂಡಲು ಸಾಧ್ಯ ಎಂದು ಹೇಳಿದರು.ಕನ್ನೆರೀ ಶಾಖಾ ಮಠದ ಪೂಜ್ಯರು ಮಾತನಾಡಿ ಕ್ಯಾಂಪಸ್ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಸಮಾರಂಭವನ್ನು ಶಿಕ್ಷಕರು ಮಕ್ಕಳಿಗೆ ಆಟದೊಂದಿಗೆ ಪಾಠ ಕಲಿಸುವ ಪ್ರವೃತ್ತಿ ಮೈಗೂಡಿಸಿಕೊಂಡು ಬೋಧಿಸಿದಾಗ ತಮಗೂ ಶಿಕ್ಷಣದ ಮಹತ್ವ ತಿಳಿಯುವುದರ ಜತೆಗೆ ಸರಳ ಬೋಧನೆಗೆ ಸಹಕಾರಿಯಾಗಲಿದೆ.
ಪಾಲಕರು ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ತಮ್ಮ ನಿತ್ಯ ಬದುಕಿನ ಕೆಲ ಸಮಯ ಮೀಸಲಿಡುವುದು ಅವಶ್ಯ ಎಂದರು.ತಡವಲಗಾ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ತಮ್ಮಣ್ಣ ಪೂಜಾರಿ ಮಾತನಾಡಿ ಕಳೆದ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಇಂಡಿ ತಾಲೂಕಿಗೆ ಪ್ರಥಮ ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ತಡವಲಗಾ ಗ್ರಾಮದ ವಿದ್ಯಾರ್ಥಿನಿಯರು ಪಡೆಯುವುದರ ಮೂಲಕ ನಮ್ಮ ಊರಿನ ಕಿರ್ತಿ ತಂದಿದ್ದಾರೆ. ಅವರಿಗೆ ತುಂಬಾ ಧನ್ಯವಾದಗಳು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಬಾಬುಸಾಹುಕಾರ ಮೇತ್ರಿ ಪ್ರಥಮ ದರ್ಜೆಯ ಗುತ್ತಿಗೆದಾರರಾದ ಚಂದ್ರಶೇಖರ ರೂಗಿ ಡಾ. ಸಿಎಂ ಹೂಗಾರ ಸತೀಶ್ ಜಿಗಜಿಣಗಿ ರವಿ ಹೋಸಮನಿ ರ್ಯಾವಣ್ಣ ಎಳಮೇಲಿ ಶಿವಶಂಕರ ಹಿಳ್ಳಿ ಧರೇಪ್ಪ ಮೇತ್ರಿ ಬಸವರಾಜ ಗಬ್ಬೂರ ಬಸವರಾಜ ತಾರಾಪೂರ ಕಾಂತಪ್ಪ ಹತ್ತೂರ ಉಮೇಶ ತೇರಿ ಬಸವರಾಜ ಬಗಲಿ ದುಂಡಪ್ಪ ಕುಂಬಾರ ರಾಕೇಶ್ ವಾಲಿಕಾರ ಮಹೇಶ್ ಬಜೆಂತ್ರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ಜರುಗಿದ ಸಾಂಸ್ಕೃತಿಕ ಕಾರ್ಯಕ್ರಮ ಜನಮನ ಸೆಳೆಯಿತು.ಶಿಕ್ಷಕರಾದ ಡಿಸಿ ತೇಲಿ ಸ್ವಾಗತಿಸಿದರು. ಎನ್‌ಸಿ ಕುಂಬಾರ ನಿರೂಪಿಸಿದರು ಐಎಸ್ ರೂಗಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 