ಕೊಪ್ಪಳ 18: ಗ್ರಾಮೀಣ ಭಾಗದಲ್ಲಿ ಆಶಾ ಕಾರ್ಯಕತರ್ೆಯರು ಮತ್ತು ಅಂಗನವಾಡಿ ಕಾರ್ಯಕತರ್ೆಯರು ಪ್ರತಿ ಮನೆಗೆ ತೆರಳಿ ಥರ್ಮಲ್ ಸ್ಕ್ಯಾನರ್ ಬಳಸಿ ಪ್ರತಿಯೊಬ್ಬರ ಆರೋಗ್ಯ ಪರೀಕ್ಷಿಸಲು ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಕನರ್ಾಟಕ ಸಕರ್ಾರದ ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ಪಾಟೀಲ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಕೋವಿಡ್-19 ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಕೈಗೊಂಡ ಕ್ರಮಗಳ ಕುರಿತು ನಡೆದ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಇದುವರೆಗೂ ಸೋಂಕಿಗೆ ಸಂಬಂಧಿಸಿದ ಯಾವ ಪ್ರಕರಣಗಳೂ ದಾಖಲಾಗಿಲ್ಲ. ಇದಕ್ಕೆ ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಇಲಾಖೆಯ ಮುನ್ನೆಚ್ಚರಿಕಾ ಕ್ರಮಗಳು ಅಭಿನಂದನಾರ್ಹವಾಗಿವೆ. ಹಾಗೆಯೇ ಸೋಂಕು ಪ್ರಕರಣ ಪತ್ತೆಯಾಗದ ಜಿಲ್ಲೆಯಲ್ಲಿಯೂ ಕೋವಿಡ್-19 ಸೋಂಕು ಪತ್ತೆ ಹಚ್ಚಲು ಎಲ್ಲರಿಗೂ ಕಡ್ಡಾಯವಾಗಿ ಪರೀಕ್ಷೆ ನಡೆಸುವಂತೆ ಸಕರ್ಾರ ಸೂಚಿಸಿರುವುದರಿಂದ ಗ್ರಾಮೀಣ ಭಾಗದಲ್ಲಿ ಆಶಾ ಕಾರ್ಯಕತರ್ೆಯರು ಮತ್ತು ಅಂಗನವಾಡಿ ಕಾರ್ಯಕತರ್ೆಯರು ಪ್ರತಿ ಮನೆಗೆ ತೆರಳಿ ಕುಟುಂಬ ಸದಸ್ಯರ ಆರೋಗ್ಯ ತಪಾಸಣೆ ಮಾಡಬೇಕು. ಆದ್ದರಿಂದ ಅವರಿಗೆ ಅವಶ್ಯವಾಗಿ ಬೇಕಾದ ಥರ್ಮಲ್ ಸ್ಕ್ಯಾನರ್ಗಳನ್ನು ಪ್ರತಿ ಪಂಚಾಯಿತಿಗೆ ಎರಡರಂತೆ ಒದಗಿಸಲು ಬೇಕಾದ ಅಗತ್ಯ ಪ್ರಮಾಣದ ಥರ್ಮಲ್ ಸ್ಕ್ಯಾನರ್ಗಳನ್ನು ಖರೀದಿಸಿ ಕಾರ್ಯಕತರ್ೆಯರಿಗೆ ಒದಗಿಸಿ. ಇದರಿಂದ ಆರೋಗ್ಯ ತಪಾಸಣೆಗೂ ಅನುಕೂಲವಾಗಿದೆ ಎಂದು ಅವರು ಹೇಳಿದರು.
ಕೋವಿಡ್-19 ನಿಯಂತ್ರಣದಲ್ಲಿ ಕೇಂದ್ರ ಹಾಗೂ ರಾಜ್ಯ ಸಕರ್ಾರಗಳು ರೂಪಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ. ಜಿಲ್ಲೆಯಲ್ಲಿ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಮಾರ್ಪಡಿಸಿರುವುದರಿಂದ ಸಾಮಾನ್ಯ ಖಾಯಿಲೆಗಳಿಗೆ ಚಿಕಿತ್ಸೆ ನೀಡಲು ಪಯರ್ಾಯವಾಗಿ ವ್ಯವಸ್ಥೆ ಮಾಡಲಾಗಿರುವ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಸಿಗುವಂತೆ ವ್ಯವಸ್ಥೆ ಮಾಡಿ. ಅವರಿಗೆ ಬೇಕಾದ ಔಷಧ ಮತ್ತು ಇತರ ವೈದ್ಯಕೀಯ ಸೌಲಭ್ಯಗಳನ್ನು ಸೂಕ್ತ ರೀತಿಯಲ್ಲಿ ಒದಗಿಸಿ. ಜಿಲ್ಲೆಯಲ್ಲಿನ ಸಕರ್ಾರಿ ವೈದ್ಯರನ್ನು ಕೋವಿಡ್ ಚಿಕಿತ್ಸೆಗೆಂದು ನಿಯೋಜಿಸಿರುವದರಿಂದ ಪಯರ್ಾಯ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಾಗಬಹುದು. ಆದ್ದರಿಂದ ಅಂತಹ ಆಸ್ಪತ್ರೆಗಳಲ್ಲಿ ಅಗತ್ಯ ಸಂಖ್ಯೆಯ ವೈದ್ಯರನ್ನು ಪಾಳಿ ಪ್ರಕಾರ ನಿಯೋಜಿಸಿ ರೋಗಿಗಳಿಗೆ ತೊಂದರೆ ಆಗದಂತೆ ಕ್ರಮವಹಿಸಿ. ಕೋವಿಡ್ ಸೋಂಕಿತರು ಪತ್ತೆಯಾದಲ್ಲಿ ಅವರ ಚಿಕಿತ್ಸೆಗೆ ಬೇಕಾದ ಎಲ್ಲಾ ವೈದ್ಯಕೀಯ ಸೌಲಭ್ಯಗಳನ್ನು ಸಿದ್ಧವಾಗಿಟ್ಟುಕೊಳ್ಳಿ. ಅಗತ್ಯವಿದ್ದಲ್ಲಿ ವೈದ್ಯರನ್ನು ನೇಮಕ ಮಾಡಿಕೊಳ್ಳಿ. ಕೋವಿಡ್ ಚಿಕಿತ್ಸೆಗೆ ವೈದ್ಯರಿಗೆ ತಜ್ಞರಿಂದ ಸೂಕ್ತ ತರಬೇತಿಯನ್ನು ಕೊಡಿಸಿ. ವೆಂಟಿಲೇಟರ್ಗಳ ನಿರ್ವಹಣೆ ಕುರಿತು ಅಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗೆ ಅಗತ್ಯ ಮಾರ್ಗದರ್ಶನಗಳನ್ನು ನೀಡಿ ಚಿಕಿತ್ಸೆಗೆ ಸಿದ್ಧಗೊಳಿಸಿ. ಪಿಪಿಇ ಕಿಟ್, ಮಾಸ್ಕ್ ಸೇರಿದಂತೆ ಚಿಕಿತ್ಸೆ ಹಾಗೂ ವೈದ್ಯರ ಸುರಕ್ಷತೆಗಾಗಿ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸಲಕರಣೆಗಳನ್ನು ಖರೀದಿಸಿ ಎಂದು ಅವರು ಹೇಳಿದರು.
ಜಿಲ್ಲೆಯ ತೋಟಗಾರಿಕೆ ಬೆಳೆಗಳನ್ನು ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಗೆ ರಫ್ತು ಮಾಡಲು ಕ್ರಮ ಕೈಗೊಂಡು ರೈತರಿಗೆ ಅನುಕೂಲ ಮಾಡಿಕೊಡಿ. ಜಿಲ್ಲೆಯ ಗಡಿ ಭಾಗಗಳಲ್ಲಿ ಸ್ಯಾನಿಟೈಸರ್ ಟನಲ್ಗಳನ್ನು ಸ್ಥಾಪಿಸಿ ಬೇರೆ ಜಿಲ್ಲೆ, ರಾಜ್ಯಗಳಿಂದ ಬರುವ ಸರಕು ಸಾಗಣೆ ವಾಹನಗಳ ಚಾಲಕರು ಮತ್ತಿತರರ ಆರೋಗ್ಯ ತಪಾಸಣೆಗೆ ಕ್ರಮ ಕೈಗೊಳ್ಳಿ. ಎಲ್ಲಾ ಚೆಕ್ಪೋಸ್ಟ್ಗಳಲ್ಲಿಯೂ ನಿಯಮ ಮೀರಿ ಯಾವ ವಾಹನಗಳನ್ನೂ ಬಿಡಬೇಡಿ. ವೈದ್ಯಕೀಯ ಚಿಕಿತ್ಸೆ ಸೇರಿದಂತೆ ತುತರ್ು ವಿಷಯಗಳಿಗಾಗಿ ಜಿಲ್ಲೆಯ ಗಡಿ ದಾಟಿ ಹೋಗಬೇಕಾದಾಗ ಅವರ ವಸ್ತುಸ್ಥಿತಿಯನ್ನು ಪರಿಶೀಲಿಸಿ ಪಾಸ್ ನೀಡಿ. ಏಪ್ರಿಲ್ 20ರ ನಂತರ ಲಾಕ್ಡೌನ್ ಕುರಿತು ಹೊಸ ನಿಯಮಾವಳಿಗಳು ಬರುವ ಸಾಧ್ಯತೆ ಇದ್ದು, ಅವುಗಳ ಆಧಾರದಲ್ಲಿ ವಲಸೆ ಕಾಮರ್ಿಕರನ್ನು ಅವರ ರಾಜ್ಯಗಳಿಗೆ ಕಳುಹಿಸಿಕೊಡುವ ಬಗ್ಗೆ, ಜಿಲ್ಲೆಯಲ್ಲಿ ಲಾಕ್ಡೌನ್ ನಿಯಮಗಳಲ್ಲಿ ಯಾವ ವಿಷಯಗಳಲ್ಲಿ ವಿನಾಯಿತಿ ನೀಡಲು ಸಾಧ್ಯ ಎಂಬುದನ್ನು ಪರಿಶೀಲಿಸಿ ನಿರ್ಧರಿಸೋಣ. ಅಲ್ಲಿಯವರೆಗೂ ಎಲ್ಲ ಜನಪ್ರತಿನಿಧಿಗಳು, ಜಿಲ್ಲಾಡಳಿತ ಪರಸ್ಪರ ಹೊಂದಾಣಿಕೆಯಿಂದ ಇಂತಹ ಕಠಿಣ ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಸಾಧ್ಯವಿದ್ದಷ್ಟು ಅನುಕೂಲವಾಗುವಂತೆ ಕಾರ್ಯನಿರ್ವಹಿಸಿ ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಮಾತನಾಡಿ, ಕೋವಿಡ್-19 ಸೋಂಕಿನ ಕುರಿತಂತೆ ಇದುವರೆಗೂ 263 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅವರಲ್ಲಿ 4 ಜನರು ವಿದೇಶ ಪ್ರಯಾಣದ ಹಿನ್ನೆಲೆಯುಳ್ಳವರು, 25 ಜನ ತಬ್ಲಿಗಿ ಜಮಾತ್ಗೆ ಸಂಬಂಧಿಸಿದವರು, ರಾಜಸ್ಥಾನಕ್ಕೆ ತೆರಳಿದ್ದ ಕಾರಟಗಿಯ 8 ಜನರ ಸ್ಯಾಂಪಲ್ಗಳು ಸೇರಿದಂತೆ 263 ಜನರ ಸ್ಯಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಆ ಎಲ್ಲ ಸ್ಯಾಂಪಲ್ಗಳೂ ನೆಗೆಟಿವ್ ಎಂದು ವರದಿ ಬಂದಿವೆ. ಇನ್ನೂ ನಾಲ್ಕು ಸ್ಯಾಂಪಲ್ಗಳ ವರದಿ ಬರುವುದು ಬಾಕಿ ಇದೆ. ಜಿಲ್ಲೆಯಲ್ಲಿ ಪ್ರತಿ ಒಂದು ಲಕ್ಷ ಜನರಿಗೆ 19 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿಲಾಗಿದೆ. ಸ್ಯಾಂಪಲ್ಗಳ ಪರೀಕ್ಷೆ ಪ್ರಮಾಣದಲ್ಲಿ ಜಿಲ್ಲೆಯು ರಾಜ್ಯದಲ್ಲಿ 13 ನೇ ಸ್ಥಾನದಲ್ಲಿದೆ. ಸಕರ್ಾರ ನೀಡಿದ ಸೂಚನೆಯಂತೆ ಏಪ್ರಿಲ್ 19 ರವರೆಗೆ ದಿನನಿತ್ಯ 100 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ಅದರ ನಂತರ ನಿತ್ಯ 50 ರಂತೆ ಸ್ಯಾಂಪಲ್ಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಕೋವಿಡ್-19 ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಕೈಗೊಂಡ ಎಲ್ಲ ಮುನ್ನೆಚ್ಚರಿಕಾ ಕ್ರಮಗಳ ಕುರಿತು ವಿವರಣೆ ನೀಡಿದರು.
ಸಭೆಯಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ ಅಧ್ಯಕ್ಷ ಹೆಚ್.ವಿಶ್ವನಾಥರೆಡ್ಡಿ, ಸಂಸದ ಕರಡಿ ಸಂಗಣ್ಣ, ಶಾಸಕರಾದ ಅಮರೇಗೌಡ ಪಾಟೀಲ ಬಯ್ಯಾಪುರ, ಕೆ.ರಾಘವೇಂದ್ರ ಹಿಟ್ನಾಳ, ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ್ ಹಾಗೂ ಬಸವರಾಜ ದಢೇಸೂಗೂರು, ರಾಜ್ಯ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುಕರ್ಿ, ವೆಂಕಟರಾವ್ ನಾಡಗೌಡ, ಜಿ.ಪಂ. ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ರಘುನಂದನ್ ಮೂತರ್ಿ, ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ, ಉಪವಿಭಾಗಾಧಿಕಾರಿ ಸಿ.ಡಿ. ಗೀತಾ, ಜಂಟಿ ಕೃಷಿ ನಿದರ್ೇಶಕಿ ಶಬಾನಾ ಎಂ. ಶೇಖ್, ಡಿವೈಎಸ್ಪಿ ವೆಂಕಟಪ್ಪ ನಾಯಕ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಲಿಂಗರಾಜು, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಹಾಂತೇಶ ಪಾಟೀಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.