ಜನರಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಿ: ಭೀಮಾಶಂಕರ ಕನ್ನೂರ
Provide clean drinking water to the people: Bhimashankar Kannur
ಇಂಡಿ 17: ತಾಲೂಕ ಪಂಚಾಯತ್ ಕಾರ್ಯಾಲಯ ಇಂಡಿಯಲ್ಲಿ ಸಭಾ ಭವನದಲ್ಲಿ ಜಿಲ್ಲಾ ಪಂಚಾಯತ್ ವಿಜಯಪುರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ವಿಜಯಪುರ ಇವರ ಸಹಯೋಗದಲ್ಲಿ ಜಲ ಜೀವನ ಮಿಷನ್ ಹಾಗೂ ಸ್ವಚ್ಚ ಭಾರತ ಮಿಷನ್ (ಗ್ರಾ) ಯೋಜನೆಗಳ ಉತ್ತಮ ಅನುಷ್ಠಾನಕ್ಕಾಗಿ ಕರ್ನಾಟಕ ಸುಸ್ಥಿರ ಗ್ರಾಮೀಣ ನೀರು ಸರಬರಾಜು ಕಾರ್ಯಕ್ರಮ ಅಡಿಯಲ್ಲಿ ಕಾರ್ಯಾಚರಣೆ ಮತ್ತು ನಿರ್ವಹಣೆ ಕುರಿತು ತಾಲೂಕ ಮಟ್ಟದ ತರಬೇತಿ ಕಾರ್ಯಗಾರವನ್ನು ಜರುಗಿಸಲಾಯಿತು.
ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಈ ಕಾರ್ಯಾಗಾರ ಅಧ್ಯಕ್ಷ ಸ್ಥಾನವಹಿಸಿದ ಡಾ.ಭೀಮಾಶಂಕರ ಕನ್ನೂರ ಅವರು ಸಸಿಗೆ ನೀರು ಹಾಕುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಭೀಮಾಶಂಕರ ಕನ್ನೂರ ಅವರು ಗ್ರಾಮೀಣ ಜನ ವಸತಿಗಳಿಗೆ ಸುರಕ್ಷಿತ ಕುಡಿಯುವ ನೀರಿನ ಪೂರೈಕೆಯನ್ನು ಸುಸ್ಥಿರಗೊಳಿಸಲು ಮತ್ತು ನೀರಿನ ಸರಬರಾಜು ಯೋಜನೆಗಳ ಸಮರ್ಕ ಕುರಿತು ಸುರಕ್ಷಿತ ಕುಡಿಯುವ ನೀರಿನ ಪೂರೈಕೆ, ಕಾರ್ಯಕ್ಷಮತೆ, ವಿಶ್ವಾಸಾರ್ಹತೆ ಮತ್ತು ಸುಸ್ಥಿರ ಕಾರ್ಯಾಚರಣೆ ಕುರಿತು ಮಾಹಿತಿ ನೀಡಿದರು.ಎಲ್ಲ ಗ್ರಾಮ ಪಂಚಾಯತಿಯ ಅಧ್ಯಕ್ಷರ ಹಾಗೂ ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಕಾರ್ಯಗಾರ ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.
ಸಂಪನ್ಮೂಲ ವ್ಯಕ್ತಿಗಳಾದ ರಾಜೇಶ ಗಾಯಕವಾಡ, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಡಗಲಿ, ಅನೀಲ ಕುಮಾರ ಕಿಣಗಿ, ಸಹಾಯಕ ಅಭಿಯಂತರರು, ಗ್ರಾ ಕು ನೀ ್ಘ ನ್ಯ ಇಲಾಖೆ, ಉಪ ವಿಭಾಗ ಇಂಡಿ ಹಾಗೂ ಅಂಬರೀಶ ಮೇಲಿನಮನಿ ಸಹಾಯಕ ಅಭಿಯಂತರರು ಗ್ರಾಕುನೀ ್ಘ ಇಲಾಖೆ, ಉಪ ವಿಭಾಗ, ಬ.ಬಾಗೇವಾಡಿ ರವರು ಕಾರ್ಯಚರಣೆ ಮತ್ತು ನಿರ್ವಹಣೆ ಕುರಿತು ತರಬೇತಿಯನ್ನು ನೀಡಿದರು.
ಅದೇ ರೀತಿ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಸಮಿತಿ ಕುರಿತು ವಿಜಯ ಬಡಿಗೇರ ಸಾಮಾಜಿಕ ಸಲಹೆಗಾರ ರು ಆಖಿಖಗ ಖಆಘಖಆ ವಿಜಯಪುರ, ಕಾರ್ಯಾಚರಣೆ ಮತ್ತು ನಿರ್ವಹಣೆ ನೀತಿ ್ಘ ಬಜೆಟ್ ಕುರಿತು ಗೀತಾ ಮಹಾರ ಅರ್ಥಿಕ ಸಲಹೆಗಾರರು ಆಖಿಖಗ ಖಆಘಖಆ ವಿಜಯಪುರ, ಸೇವದರ್ಶಕ ಕುರಿತು ಸಚಿನ ಎಮ ಶಿಂಪಿ ರವರು ಹಾಗೂ ಶ್ರೀನಿವಾಸ ಶ್ರೀಕರ ರವರು ಕರ್ನಾಟಕ ಸುಸ್ಥಿರ ಗ್ರಾಮೀಣ ನೀರು ಸರಬರಾಜು ಕುರಿತು ಎಲ್ಲಾ ವಿಷಯಗಳ ಕುರಿತು ತರಬೇತಿ ನೀಡಿದರು.
ಸಹಾಯಕ ನಿರ್ದೇಶಕರು (ಪಂ ರಾ) ಪ್ರಕಾಶ ರಾಠೋಡ, ಯೋಜನಾಧಿಕಾರಿ ನಂದೀಪ ರಾಠೋಡ, ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಅಧ್ಯಕ್ಷರು ಮತ್ತು ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 