ಕೂಲಿಕಾರರಿಗೆ ನಿರಂತರ ಉದ್ಯೋಗ ಕಲ್ಪಿಸಿ: ವಡ್ಡರ
Provide continuous employment to laborers: Vaddara
ಲೋಕದರ್ಶನ ವರದಿ
ಇಂಡಿ 16: ತಾಲೂಕಿನ ಅಥರ್ಗಾ, ತೆನ್ನಹಳ್ಳಿ, ಶಿರಶ್ಯಾಡ ಹಾಗೂ ಸಂಗೋಗಿ ಗ್ರಾಮ ಪಂಚಾಯಿತಿಗಳಿಗೆ ವಿಜಯಪುರ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ ನೀಡಿ, ವಿ.ಬಿ.ಜಿ.-ರಾಮ್ಜಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳನ್ನು ಪರೀಶೀಲಿಸಿದರು. ಗ್ರಾಮೀಣ ಕೂಲಿಕಾರರಿಗೆ ಸ್ಥಳೀಯವಾಗಿಯೇ ನಿರಂತರ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಅಥರ್ಗಾ, ತೆನ್ನಹಳ್ಳಿ, ಸಂಗೋಗಿ ಹಾಗೂ ಶಿರಶ್ಯಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕೆರೆ ಪುನಶ್ಚೇತನ, ಕಂದಕ ನಿರ್ಮಾಣ ಹಾಗೂ ಕಾಲುವೆ ಪುನಶ್ಚೇತನ ಕಾಮಗಾರಿಗಳನ್ನು ಪರೀಶೀಲಿಸಿದರು.
ಅಥರ್ಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆ ಪುನಶ್ಚೇತನ ಕಾಮಗಾರಿ ಸ್ಥಳದಲ್ಲಿ 80 ಕೂಲಿಕಾರರು ಕಾರ್ಯನಿರ್ವಹಿಸುತ್ತಿರುವುದನ್ನು ಪರೀಶೀಲಿಸಿದ ಅವರು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿಕಾರರಿಗೆ ಉದ್ಯೋಗ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತೆನ್ನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಘನ ತ್ಯಾಜ್ಯ ವಿಲೇವಾರಿ ಘಟಕದ ಆವರಣದಲ್ಲಿ ನಡೆಯುತ್ತಿರುವ ಕಂದಕ ನಿರ್ಮಾಣ ಕಾಮಗಾರಿ ಸ್ಥಳದಲ್ಲಿಯೂ 80 ಕೂಲಿಕಾರರು ಕೆಲಸ ಮಾಡುತ್ತಿರುವುದನ್ನು ಪರೀಶೀಲಿಸಿದರು. 187 ಕೂಲಿಕಾರರೊಂದಿಗೆ ಸಂವಾದ ಸಂಗೋಗಿ ಹಾಗೂ ಶಿರಶ್ಯಾಡ ಗ್ರಾಮಗಳಲ್ಲಿ 187 ಕೂಲಿಕಾರರೊಂದಿಗೆ ಸಂವಾದ ನಡೆಸಿದ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಯೋಜನೆಯಡಿ ಪ್ರತಿದಿನ 382 ಕೂಲಿ ಹಾಗೂ ವರ್ಷದಲ್ಲಿ 125 ದಿನಗಳವರೆಗೆ ಉದ್ಯೋಗಾವಕಾಶ ಲಭ್ಯವಿದೆ.
ಅರ್ಹ ಫಲಾನುಭವಿಗಳು ವೈಯಕ್ತಿಕ ಕಾಮಗಾರಿಗಳ ಸೌಲಭ್ಯವನ್ನೂ ಪಡೆಯಬಹುದು ಎಂದು ತಿಳಿಸಿದರು. ಆರೋಗ್ಯ ತಪಾಸಣೆ, ವಿಮೆಗೆ ಒತ್ತು ಕೂಲಿಕಾರರ ಆರೋಗ್ಯದ ದೃಷ್ಟಿಯಿಂದ ಕಾಮಗಾರಿ ಸ್ಥಳಗಳಲ್ಲಿಯೇ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸುವಂತೆ ಹಾಗೂ ಅರ್ಹ ಎಲ್ಲ ಕೂಲಿಕಾರರಿಗೆ ಆರೋಗ್ಯ ವಿಮೆ ಮಾಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಇಂಡಿ ಕಾರ್ಯನಿರ್ವಾಹಕ ಅಧಿಕಾರಿ ಮಹಾದೇವಪ್ಪ ಏವೂರ, ಸಹಾಯಕ ನಿರ್ದೇಶಕ (ಗ್ರಾ.ಉ.) ಸಂಜಯ ಖಡಗೇಕರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಬಸವರಾಜ ಬಬಲಾದ, ಶಿವು ಪೂಜಾರಿ, ಸುಮಿತ್ರಾ ನಾಯಕ, ಮಹೇಶ ನಾಯಕ, ಅಶೋಕ ಹೊನವಾಡ, ಮುತ್ತಪ್ಪ ಜಾಡರ ಸೇರಿದಂತೆ ಗ್ರಾಪಂ ಮಾಜಿ ಸದಸ್ಯರು, ತಾಂತ್ರಿಕ ಹಾಗೂ ತಾಂತ್ರಿಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 