ಜಮೀನಿನ ಮಾಲೀಕರಿಗೆ ನಿಯಮಾನುಸಾರ ಪರಿಹಾರ ಒದಗಿಸಿ: ಸುನೀಲ ಕುಮಾರ

ಕೊಪ್ಪಳ 22: ಕೊಪ್ಪಳ ತಾಲೂಕಿನ ಅಳವಂಡಿ-ಬೆಟಗೇರಿ ಏತನೀರಾವರಿ ಯೋಜನೆಯಡಿ ಭೂಸ್ವಾಧೀನಕ್ಕೆ ಒಳಗಾದ ವಿವಿಧ ಗ್ರಾಮಗಳ ಜಮೀನಿನ ಮಾಲೀಕರಿಗೆ ನಿಯಮಾನುಸಾರ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು (ಜುಲೈ.22) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಳವಂಡಿ-ಬೆಟಗೇರಿ ಏತನೀರಾವರಿ ಯೋಜನೆಯಡಿ ಭೂಸ್ವಾದೀನ ಪ್ರಕ್ರಿಯೆ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಹಾಗೂ ರೈತರೊಂದಿಗೆ ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.  

ಅಳವಂಡಿ-ಬೆಟಗೇರಿ ಏತನೀರಾವರಿ ಯೋಜನೆಯಡಿ ಸವರ್ಿಸ್ ರಸ್ತೆ ನಿಮರ್ಾಣಕ್ಕೆ ಭೂಸ್ವಾದೀನಕ್ಕೆ ಒಳಪಡುವ ಜಮೀನಿನ ರೈತರ ಆಕ್ಷೇಪಣೆ ಹಾಗೂ ನಿರ್ಮಾಣ ಕಾಮಗಾರಿಗೆ ಇರುವ ತೊಂದರೆಗಳನ್ನು ಸಂಬಂಧಿಸಿದ ಅಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಬೇಕು.  ಸವರ್ಿಸ್ ರಸ್ತೆ ನಿಮರ್ಾಣ ಕುರಿತಂತೆ ಇರುವ ರೈತರ ಆಕ್ಷೇಪಣೆಗಳನ್ನು ಮೊದಲು ಆಲಿಸಬೇಕು.  ರಸ್ತೆ ನಿಮರ್ಾಣದಿಂದ ಆ ಪ್ರದೇಶ ವ್ಯಾಪ್ತಿಯ ರೈತರಿಗೆ ಇರುವ ಅನುಕೂಲತೆಗಳ ಕುರಿತು ರೈತರಿಗೆ ತಿಳುವಳಿಕೆ ನೀಡಿ ಅವರ ಮನವೊಲಿಸಲು ಪ್ರಯತ್ನಿಸಬೇಕು.  ಭೂಸ್ವಾದೀನ ಪ್ರಕ್ರಿಯೆ ಕುರಿತಂತೆ ರೈತರಿಗೆ ನೋಟಿಸ್ ನೀಡುವಾಗ ಕಂದಾಯ ಇಲಾಖೆಯ ಸಿಬ್ಬಂದಿಯನ್ನು ಬಳಸಿಕೊಂಡು ನಿಧರ್ಿಷ್ಟ ಜಮೀನಿನ ಮಾಲೀಕರಿಗೆ ಮಾತ್ರ ನೋಟಿಸ್ ನೀಡಬೇಕು.  ಈ ಕುರಿತು ರೈತರಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಎಚ್ಚರವಹಿಸಿ.  ಕಾಮಗಾರಿಗಳಿಗೆ ನಿಗದಿಪಡಿಸಿದ ಜಮೀನಿನ ಪ್ರದೇಶವನ್ನು ಹೊರತುಪಡಿಸಿ ಇನ್ನುಳಿದ ಜಮೀನನ್ನು ಕಾಮಗಾರಿಗೆ ಸಂಬಂಧಿಸಿದ ಯಾವುದೇ ಸಾಮಾಗ್ರಿಗಳನ್ನು ಸಂಗ್ರಹಿಸಲು ಅಥವಾ ಕಾಮಗಾರಿ ವಾಹನಗಳ ಬಳಕೆಯಾಗದಂತೆ ನೋಡಿಕೊಳ್ಳಿ.  ಇದರಿಂದ ರೈತರು ಈಗಾಗಲೇ ಭಿತ್ತನೆ ಮಾಡಿದ ಪ್ರದೇಶಕ್ಕೆ ಉಂಟಾಗುವ ಹಾನಿಯನ್ನು ತಡೆಯಬಹುದು.  ಜೆಎಂಸಿ (ಜಂಟಿ ಮಾಪನ ವರದಿ) ಮಾಡಲು ಕೆಲ ರೈತರು ಅಡ್ಡಿ ಪಡಿಸುತ್ತಿರುವುದರಿಂದ ಅವರಿಗೆ ಬರಬೇಕಾದ ಪರಿಹಾರ ಮೊತ್ತ ನಿಧರ್ಿಷ್ಟಪಡಿಸುವಲ್ಲಿ ಹಾಗೂ ವಿತರಿಸುವಲ್ಲಿ ವಿಳಂಬವಾಗುತ್ತಿದೆ.  ಆದ್ದರಿಂದ ರೈತರು ನಿಯಮಾನುಸಾರ ಸವರ್ೆ ಮಾಡಲು ಅನುವು ಮಾಡಿಕೊಡಲು ಅಧಿಕಾರಿಗಳೊಂದಿಗೆ ಸಹಕರಿಸಿದರೆ ಸವರ್ೆ ಕಾರ್ಯವು ತ್ವರಿತವಾಗಿ ನಡೆದು ಕಾಮಗಾರಿ ಪೂರ್ಣಗೊಳ್ಳಲು ಅನುಕೂಲವಾಗಲಿದೆ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ರೈತರಿಗೆ ಮನವರಿಕೆ ಮಾಡಿದರು.

ಅಳವಂಡಿ-ಬೆಟಗೇರಿ ಏತನೀರಾವರಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರು, ತಮಗೆ ಯಾವುದೇ ಮಾಹಿತಿ ನೀಡದೇ ಗುತ್ತಿಗೆದಾರರು ನಮ್ಮ ಜಮೀನುಗಳಲ್ಲಿ ಕಾಮಗಾರಿಯನ್ನು ಆರಂಭಿಸುತ್ತಾರೆ ಎಂದು ಕಾಮಗಾರಿ ಸಂದರ್ಭದಲ್ಲಿ ತಾವು ಎದುರಿಸುತ್ತಿರುವ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ಇದೇ ಸಂದರ್ಭದಲ್ಲಿ ತಂದರು.  ಇದಕ್ಕೆ ಸ್ಪಂಧಿಸಿದ ಜಿಲ್ಲಾಧಿಕಾರಿಗಳು ಕಾಮಗಾರಿ ನಡೆಯುವ ಜಮೀನಿನ ಮಾಲೀಕರಿಗೆ ಸೂಕ್ತ ಮಾಹಿತಿ ನೀಡಿ ನಂತರ ಕಾಮಗಾರಿಗಳನ್ನು ಕೈಗೊಳ್ಳುವಂತೆ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.    

ಸಭೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ನೇಹಾ ಜೈನ್, ಉಪ ವಿಭಾಗಾಧಿಕಾರಿ ಸಿ.ಡಿ. ಗೀತಾ, ಕೊಪ್ಪಳ ತಹಶೀಲ್ದಾರ ಜೆ.ಬಿ ಮಜಗಿ, ನೀರಾವರಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ ನಾಗಭೂಷಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ರೈತರು ಸಭೆಯಲ್ಲಿ ಉಪಸ್ಥಿತರಿದ್ದರು.