ಗದಗ 03: ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ತಮ್ಮ ಮನೆಯ ಮಕ್ಕಳಿಗೆ ಗುಣಮಟ್ಟದ ಪೋಷಣಾ ಸೌಲಭ್ಯಗಳನ್ನು ಒದಗಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ.ಸಲಗರೆ ನುಡಿದರು.
ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನರ್ಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಫೆ. 28ರಂದು ನಡೆದ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಪ್ರಾಮಾಣಿಕ ಗುಣಮಟ್ಟದ ಪೋಷಣೆ ಕುರಿತ ಒಂದು ದಿನದ ತರಬೇತಿ ಕಾಯರ್ಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಮಕ್ಕಳೇ ನಾಲಿನ ಪ್ರಜೆಗಳಾಗಿದ್ದು, ಕುಟುಂಬದಿಂದ ಬೇರ್ಪಟ್ಟ ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು. ಹೀಗಾಗಿ ಮಕ್ಕಳಿಗೆ ನೀಡುವ ಮಕ್ಕಳ ಪಾಲನಾ ಸಂಸ್ಥೆಯ ಕನಿಷ್ಠ ಸೌಲಭ್ಯಗಳು ಬಹುಮುಖ್ಯವಾಗಿವೆ ಎಂದು ಎಸ್.ಜಿ.ಸಲಗರೆ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿದರ್ೇಶಕಿ ಎಚ್.ಎಚ್ ಕುಕನೂರ ಇವರು ಅಧ್ಯಕ್ಷತೆ ವಹಿಸಿ ಮಾತನಾಡಿ ಕಾಯ್ದೆಗಳ ಪ್ರಕಾರ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಮಕ್ಕಳಿಗೆ ಲಭ್ಯವಿರುವ ಪ್ರತಿಯೊಂದು ಸೌಲಭ್ಯಗಳನ್ನು ಒದಗಿಸಬೇಕು. ಇದರಿಂದ ಮಗುವಿನ ಉತ್ಕ್ರಷ್ಟ ಬೆಳವಣಿಗೆಗೆ ಹೊಂದಲು ಸಹಾಯವಾಗುತ್ತದೆ. ಮಕ್ಕಳ ಪಾಲನಾ ಸಂಸ್ಥೆಗಳಿಗೆ ಮಕ್ಕಳ ಕಲ್ಯಾಣ ಸಮಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದವರು ಭೇಟಿ ನೀಡಿದಾಗ ಅವರಿಗೆ ಸಹಕಾರ ನೀಡಬೇಕು. ತರಬೇತಿಯಲ್ಲಿ ಪಡೆದ ವಿಚಾರಗಳಿಂದ ಮಕ್ಕಳ ಪಾಲನಾ ಸಂಸ್ಥೆಯ ಪದಾಧಿಕಾರಿಗಳು ಕಾರ್ಯಪ್ರವೃತ್ತರಾಗಿ ಉತ್ತಮ ಕೆಲಸ ಮಾಡಬೇಕು ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶೈಲಾ ಕುರಹಟ್ಟಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಗುಣಮಟ್ಟದ 58 ಸೌಲಭ್ಯಗಳನ್ನು ಕಡ್ಡಾಯವಾಗಿ ಮಕ್ಕಳಿಗೆ ಒದಗಿಸಬೇಕು ಅಂದಾಗ ಮಾತ್ರ ಇಂತಹ ತರಬೇತಿ ಕಾರ್ಯಕ್ರಮಕ್ಕೆ ಅರ್ಥ ಬರುತ್ತದೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದವರು ಸಂಸ್ಥೆಗಳಿಗೆ ಭೇಟಿ ನೀಡಿದಾಗ ಅವರಿಗೆ ಎಲ್ಲ ರೀತಿಯ ಸಹಕಾರ ನೀಡಬೇಕು ಎಂದರು.
ಕನರ್ಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಸಂಯೋಜಕಿ ಗೀತಾ ಬಂಗಾರಿ ಕಾರ್ಯಗಾರವನ್ಮ್ನ ಉದ್ದೇಶಿಸಿ ಮಾತನಾಡಿದರು. ಕನರ್ಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಸಚಿವ ಸುರೇಶ ನಾಡಗೌಡರ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ಕೆ.ಆರ್ ನಾಯ್ಕರ್, ಸದಸ್ಯರಾದ ಮಂಜುನಾಥ ಬಮ್ಮನಕಟ್ಟಿ, ಅನ್ನಪೂರ್ಣ ಗಾಣಗೇರ, ಸಂಪನ್ಮೂಲ ವ್ಯಕ್ತಿಗಳಾದ ಹರೀಶ ಜೋಗಿ, ಸುಚಿತ್ರಾ ವಾಡಕರ, ಗುರುರಾಜ ಇಟಗಿ, ಪ್ರಕಾಶ ವಾಲಿ, ಲೀಗಲ್. ವಜ್ರೇಶ್ವರಿ ಧರ್ಮದಾಸ ಪ್ರಾಥರ್ಿಸಿದರು. ಮಲ್ಲಪ್ಪ ಹೊಸಳ್ಳಿ ನಿರೂಪಿಸಿದರು. ಅನುಪಮಾ ಹಿರೇಗೌಡರ ವಂದಿಸಿದರು. ಹಾಗೂ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.