ಗದಗ, ಮುಂಡರಗಿ 05: ಮುಂಡರಗಿ ತಾಲ್ಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ವಸತಿ ಶಾಲೆ, ಅಂಗನವಾಡಿ ಕೇಂದ್ರ ಹಾಗೂ ಆರೋಗ್ಯ ಕೇಂದ್ರಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಿದ್ಧಲಿಂಗೇಶ್ವರ ಎಚ್.ಪಾಟೀಲ್ ಅನೀರಿಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲ್ಲೂಕಿನ ಶಿರನಹಳ್ಳಿಯ ಅಂಗನವಾಡಿ ಕೇಂದ್ರದ ಆಹಾರ ದಾಸ್ತಾನು ಕೊಠಡಿ ಪರಿಶೀಲಿಸಿದ ಅವರು, ಮಕ್ಕಳಿಗೆ ಸಮಯಕ್ಕೆ ಸರಿಯಾಗಿ ಗುಣಮಟ್ಟದ ಆಹಾರ ಪೂರೈಸಬೇಕು. ಆಹಾರ ಪೂರೈಕೆಯಲ್ಲಿ ವಿಳಂಬ ನೀತಿ ಅನುಸರಿಸಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.
ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ವಿಷಯಗಳ ಕುರಿತು ಸಂವಾದ ನಡೆಸಿ ಅವರ ಕುಂದು ಕೊರತೆಗಳನ್ನು ಆಲಿಸಿದರಲ್ಲದೇ, ಎಸ್ಎಸ್ಎಲ್ಸಿ ಪರೀಕ್ಷಾ ಪೂರ್ವ ಸಿದ್ಧತೆಯ ಕುರಿತು ಚಚರ್ಿಸಿ ಮಕ್ಕಳಿಗೆ ಆತ್ಮಸ್ಥೈರ್ಯ ತುಂಬಿದರು. ವಸತಿ ನಿಲಯಗಳಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದರು. ಡಂಬಳದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಸಾರ್ವಜನಿಕರಿಗೆ ಸೂಕ್ತ ವೈದ್ಯಕೀಯ ನೆರವು ಒದಗಿಸಬೇಕು. ಆರೋಗ್ಯ ಕೇಂದ್ರದಲ್ಲಿ ಸ್ವಚ್ಚತೆ ಕಾಯ್ದುಕೊಳ್ಳಬೇಕು ಎಂದು ಜಿಪಂ ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ್ ಸೂಚಿಸಿದರು.
ಇದೇ ವೇಳೆ ಜಿಪಂ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ ಶಿಂಗಟಾಲೂರು ಗ್ರಾಮದ ಭೀಮರಡ್ಡಿ ನೀರಲಗಿಯವರು ನಿಮರ್ಿಸಿರುವ ದಾಳಿಂಬೆ ತೋಟಕ್ಕೆ ಭೇಟಿ ನೀಡಿದರು. ಜಿಪಂ ಸದಸ್ಯೆ ಶೋಭಾ ಮೇಟಿ, ಮುಂಡರಗಿ ತಾಪಂ ಅಧ್ಯಕ್ಷೆ ರೇಣುಕಾ ಕೊರ್ಲಹಳ್ಳಿ, ತಾಪಂ ಸದಸ್ಯ ರುದ್ರಗೌಡ ಪಾಟೀಲ್ ಹಾಗೂ ಇತರರು ಇದ್ದರು.