ಅನ್ನದಾತರಿಗೆ ಪರಿಹಾರ ಕೊಡಿ: ಕೊಪ್ಪಳದಲ್ಲಿ ಬಿಜೆಪಿಯಿಂದ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ
Provide relief to food donors: BJP protests in different ways in Koppal
ಕೊಪ್ಪಳ 21: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬಾಳೆ, ಎಲೆ ಸೇರಿ ವಿವಿಧ ತೋಟಗಾರಿಕೆ ಬೆಳೆ ಬೆಳೆದು ಮಳೆ ಹಾಗೂ ಗಾಳಿಯಿಂದ ನಷ್ಟ ಹೊಂದಿದ ರೈತರಿಗೆ ಕೂಡಲೇ ಪರಿಹಾರ ವಿತರಿಸುವಂತೆ ಒತ್ತಾಯಿಸಿ, ಕೊಪ್ಪಳ ಬಿಜೆಪಿ ಗ್ರಾಮೀಣ ಮಂಡಲ ವತಿಯಿಂದ ಗುರುವಾರ ನಗರದಲ್ಲಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿ, ಗಮನ ಸೆಳೆಯಿತು. ಪ್ರಧಾನಿ ನರೇಂದ್ರ ಮೋದಿ ಅವರ ಮನವಿಯಂತೆ ದೇಶದಲ್ಲಿ ಹೆಚ್ಚುತ್ತಿರುವ ಇಂಧನ ಬಳಕೆ, ಪೆಟ್ರೋಲ್-ಡೀಸೆಲ್ ಮೇಲಿನ ಅವಲಂಬನೆ ಕಡಿಮೆ ಮಾಡುವ ಅಗತ್ಯತೆ ಹಾಗೂ ಪರಿಸರ ಸಂರಕ್ಷಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬಿಜೆಪಿ ನಾಯಕರು ಸೈಕಲ್ ಹಾಗೂ ಎಲೆಕ್ಟ್ರಿಕಲ್ ಬೈಕ್ಗಳಲ್ಲಿ ತೆರಳಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಅಶೋಕ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಮುಖಂಡರು, ಅಲ್ಲಿಂದ ಡಿಸಿ ಕಚೇರಿಯವರೆಗೆ ಸೈಕಲ್ ಹಾಗೂ ಎಲೆಕ್ಟ್ರೀಕ್ ಬೈಕ್ ಮುಖಾಂತರ ಡಿಸಿ ಕಚೇರಿಯವರೆಗೆ ತೆರಳಿ ನಾಗರಿಕರಲ್ಲಿ ಪರಿಸರ ಜಾಗೃತಿ ಮೂಡಿಸಿದರು. ನಂತರ ರೈತರೊಂದಿಗೆ ಬಿಜೆಪಿ ನಾಯಕರು, ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಈ ವೇಳೆ ವಿಪ ಸದಸ್ಯೆ ಹೇಮಲತಾ ನಾಯಕ್, ಕೊಪ್ಪಳ ಲೋಕಸಭಾ ಕ್ಷೇತ್ರದ ನಿಕಟಪೂರ್ವ ಅಭ್ಯರ್ಥಿ ಬಸವರಾಜ ಕ್ಯಾವಟರ್ ಸೇರಿ ಇನ್ನಿತರ ನಾಯಕರನ್ನು ಪೊಲೀಸರು ತಡೆದರು. ಬಳಿಕ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಧರಣಿ ಕುಳಿತ ಬಿಜೆಪಿ ನಾಯಕರು, ಸರಕಾರದ ವಿಳಂಭ ದೋರಣೆ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೆ, ಬೇಜವಾಬ್ದಾರಿ ಮೆರೆಯುತ್ತಿರುವ ಸ್ಥಳೀಯ ಶಾಸಕ ರಾಘವೇಂದ್ರ ಹಿಟ್ನಾಳ್ ಎಂದು ಘೋಷಣೆ ಕೂಗಿ ಆಡಳಿತ ವ್ಯವಸ್ಥೆಯ ಕಾರ್ಯ ವೈಖರಿ ಖಂಡಿಸಿದರು. ಕೊನೆಗೆ ಸ್ಥಳಕ್ಕಾಗಮಿಸಿದ ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ ಅವರಿಗೆ ಮನವಿ ಸಲ್ಲಿಸಲಾಯಿತು.ಈ ವೇಳೆ ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ ಮಾತನಾಡಿ, ಒಂದು ಎಕರೆ ಬಾಳೆ ಬೆಳೆ ಬೆಳೆಯಲು ರೈತರು ಲಕ್ಷಾಂತರ ರೂಪಾಯಿ ಸಾಲ ಮಾಡಿ ಹೂಡಿಕೆ ಮಾಡಿದ್ದರೂ, ಅಕಾಲಿಕ ಮಳೆ ಮತ್ತು ಗಾಳಿಯಿಂದ ಕೈಗೆ ಬಂದ ಬೆಳೆ ಸಂಪೂರ್ಣ ಹಾನಿಗೊಳಗಾಗಿದೆ. ಇದರಿಂದ ರೈತರ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿ ಬದುಕಿನ ಮೇಲೆಯೇ ಆತಂಕ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹೀಗಾಗಿ ತಕ್ಷಣವೇ ಸಮಗ್ರ ಬೆಳೆ ಹಾನಿ ಸಮೀಕ್ಷೆ ನಡೆಸಿ ನ್ಯಾಯಯುತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಮುಖಂಡ ಬಸವರಾಜ ಕ್ಯಾವಟರ್ ಮಾತನಾಡಿ, ರಾಜ್ಯದಲ್ಲಿ ರೈತರ ಪರಿಸ್ಥಿತಿ ಚಿಂತಾಜನಕವಾಗಿದೆ. ಅದರಲ್ಲಿಯೂ ಕೊಪ್ಪಳ ತಾಲೂಕಿನಲ್ಲಿ ಮುಂಗಾರು ಪೂರ್ವ ಮಳೆಗೆ ತೋಟಗಾರಿಕೆ ಬೆಳೆಗಳು ನೆಲಕಚ್ಚಿವೆ.ಸಾಲ ಸೂಲ ಮಾಡಿ, ಬಾಳೆ, ಎಲೆ ಸೇರಿ ವಿವಿಧ ಬೆಳೆ ಬೆಳೆದಿದ್ದ ರೈತರ ಪರಿಸ್ಥಿತಿ ಕಷ್ಟ ನೋಡಲಾಗುತ್ತಿಲ್ಲ.ಈ ವಿಚಾರದಲ್ಲಿ ಮುತುವರ್ಜಿ ವಹಿಸಿ, ಸರಕಾರದ ಗಮನಕ್ಕೆ ತಂದು ರೈತರಿಗೆ ಪರಿಹಾರ ಕೊಡಿಸಬೇಕಾದ ಶಾಸಕ ಹಿಟ್ನಾಳ್ ತಮ್ಮ ಜವಾಬ್ದಾರಿ ಮೆರೆಯುತ್ತಿಲ್ಲ. ರೈತರು ದೇಶದ ಅನ್ನದಾತರು. ರೈತ ಉಳಿದರೆ ದೇಶ ಉಳಿಯುತ್ತದೆ ಎಂಬ ನಿಟ್ಟಿನಲ್ಲಿ ಸರಕಾರ ರೈತರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸಬೇಕು.
ಕೇವಲ ಭರವಸೆಗಳಲ್ಲ, ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಹಣ ಜಮಾ ಮಾಡುವ ಕೆಲಸವಾಗಬೇಕು ಎಂದು ಆಗ್ರಹಿಸಿದರು.ಅಲ್ಲದೆ, ಇನ್ನೇನು ಮುಂಗಾರು ಆರಂಭವಾಗಲಿದ್ದು, ರಸಗೊಬ್ಬರ ವಿತರಣೆ ಸಮರ್ಕವಾಗಿ ನಡೆಯಬೇಕು. ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿರುವ ರೀ ಜಗಳ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತವನ್ನು ಇದೇ ವೇಳೆ ಒತ್ತಾಯಿಸಿದರು. ಈ ವೇಳೆ ಗ್ರಾಮೀಣ ಮಂಡಲ ಅಧ್ಯಕ್ಷ ವೀರೇಶ ಸಜ್ಜನ್, ಚಂದ್ರಶೇಖರ ಪಾಟೀಲ್ ಹಲಗೇರಿ, ಮಹಾಂತೇಶ್ ಪಾಟೀಲ್ ಮೈ ನಲ್ಲಿ, ಪಕೀರ್ಪ ಆರೇರ್, ಗಣೇಶ್ ಹೋರಟತ್ನಾಳ, ಪ್ರದೀಪ್ ಹಿಟ್ನಾಳ್, ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಅಶೋಕ್ ಗುಳದಳ್ಳಿ, ತಾಲೂಕು ಅಧ್ಯಕ್ಷ ವೀರೇಶ್ ಕಸನಖಂಡಿ, ಜಿಲ್ಲಾ ಕಾರ್ಯದರ್ಶಿ ಸುನಿಲ್ ಹೆಸರೂರ್, ಪ್ರಭುಗೌಡ ಪಾಟೀಲ್, ಮಹೇಶ್ ಅಂಗಡಿ, ಅಂದಪ್ಪ ಯಲ್ಲಮ್ಮನವರ,
ಗುರ್ಪ ಗೋಡೆಕಾರ್, ಮಹಿಳಾ ನಗರ ಘಟಕದ ಅಧ್ಯಕ್ಷರು ಜಯಶ್ರೀ ಆರೇರ್, ಗ್ರಾಮೀಣ ಮಂಡಲ ಮಹಿಳಾ ಅಧ್ಯಕ್ಷರಾದ ಅನುರಾಧ ಬಿಸನಳ್ಳಿ, ಬಸವರೆಡ್ಡಿ ಬೈರಾಪುರ್, ರಾಜು ಬಾಕ್ಲೆ, ಗವಿರಾಜ್ ಗೊರವರ , ರಮೇಶ್ ಕವಲೂರು, ದೇವಪ್ಪ ಹ್ಯಾಟಿ, ಚನ್ನಬಸವ ಗಾಳಿ, ದೇವರಾಜ್ ಹಲಸಮುದ್ರ, ಮಹಾಲಕ್ಷ್ಮಿ ಕಂದಾರಿ, ಉಮೇಶ್ ಕುದ್ರೇಕರ್, ರಾಜ್ಯ ಕಾರ್ಯಕಾರಣಿ ಸದಸ್ಯರಾದ ಶೋಭಾ ನಗರಿ, ಮಾರುತಿ ಹಡಪದ, ನೀಲಕಂಠಯ್ಯ ಹಿರೇಮಠ, ದೀಪಕ್ ಹಿರೇಮಠ, ನಾಗರಾಜ್ ದೊಡ್ಡಮನಿ, ವಿಜಯಪಾಟೀಲ್ ಹಲಗೇರಿ, ಶರಣಯ್ಯ ಮುಂದರಗಿಮಠ, ಶರಣಪ್ಪ ಮಡಿವಾಳರ, ಚಂದ್ರು ಗೋಸಿ, ರಮೇಶ್ ಕರಡಿ, ಖಜಾ ಹುಸೇನ್, ಬಿಜೆಪಿಯ ಮುಖಂಡರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಮಹಿಳಾ ಮುಖಂಡರು ಹಾಗೂ ಕಾರ್ಯಕರ್ತ ಮಿತ್ರರು ಉಪಸ್ಥಿತರಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 