ಗ್ರಾಮೀಣ ಜನರಿಗೆ ಸುರಕ್ಷಿತ ಹಾಗೂ ಗುಣಮಟ್ಟದ ನೀರು ಪೂರೈಕೆ ಮಾಡಿ

Provide safe and quality water to rural people

ಗ್ರಾಮೀಣ ಜನರಿಗೆ ಸುರಕ್ಷಿತ ಹಾಗೂ ಗುಣಮಟ್ಟದ ನೀರು ಪೂರೈಕೆ ಮಾಡಿ

ಕಾರವಾರ, ಫೆ.03 :- ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಕಾರವಾರ ಇವರ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಗಳನ್ನು ಉತ್ತಮ ಅನುಷ್ಠಾನಕ್ಕಾಗಿ ಘಂಖಊ ಕಾರ್ಯಾಚರಣೆ ಮತ್ತು ನಿರ್ವಹಣೆ ಕುರಿತು ಒಂದು ದಿನದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ (ಆಡಳಿತ) ನಾಗೇಶ್ ರಾಯ್ಕರ್  ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗ್ರಾಮೀಣ ಜನರಿಗೆ 2030 ಒಳಗೆ ಸುರಕ್ಷಿತವಾದ ಮತ್ತು ಗುಣಮಟ್ಟದ ನೀರನ್ನು ಪೂರೈಕೆ ಮಾಡಬೇಕು, ನೀರನ್ನು ಹಿತ ಮಿತವಾಗಿ ಬಳಸುವುದು ಅತಿ ಮುಖ್ಯವಾಗಿದೆ ಹಾಗೂ ಜೆಜೆಎಂ ಮತ್ತು ಎಸ್‌.ಬಿ.ಎಂ ಯೋಜನೆಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮರ​‍್ಕವಾಗಿ ಅನುಷ್ಠಾನ ಮಾಡುವ ಜವಾಬ್ದಾರಿ ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು, ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ ಎಂದು ಕಾರ್ಯಕ್ರಮದಲ್ಲಿ ಸೂಚಿಸಿದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಉಪಕಾರ್ಯದರ್ಶಿ (ಆಡಳಿತ) ಜಾಫರ್‌ಶರೀಫ್ ಸುತಾರ ರವರು ರಾಜ್ಯ ಕಛೇರಿಯಿಂದ ವೀಡಿಯೋ ಸಂವಾದದ ಮೂಲಕ ಒಂದು ದಿನದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಜಲ ಜೀವನ ಮಿಷನ್ ಯೋಜನೆಯ ಸಮರ​‍್ಕವಾದ ಅನುಷ್ಠಾನ ಕುರಿತು ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಸಹಾಯಕ ಕಾರ್ಯದರ್ಶಿ ಆಡಳಿತ ಅಧಿಕಾರಿ ಸುನೀಲ್ ನಾಯ್ಕ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರವರು, ಜೂನಿಯರ್ ಇಂಜಿನಿಯರ್ ರವರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು, ಆರ್ ಡಬ್ಲ್ಯೂ ಎಸ್ ವಿಭಾಗದ ಎಲ್ಲಾ  ಎಇಎಸ್ /ಜೆಇಎಸ್ ಜಿಲ್ಲಾ ಎಎಒ ಆಕಒ ಮತ್ತು ಕಒಗ ಘಂಖಊ ಸಮಾಲೋಚಕರು, ಆಖಿಖಗ ಜಿಲ್ಲಾ ಸಮಾಲೋಚಕರು, ಜಿಲ್ಲಾ ಹಾಗೂ ತಾಲ್ಲೂಕು ಲ್ಯಾಬ್ ಸಂಯೋಜಕರು ಮತ್ತು ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಪೋಟೊ ಲಗುತ್ತಿಸಿದೆ.ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್‌: ಆನ್‌ಲೈನ್ ಅರ್ಜಿ ಆಹ್ವಾನಕಾರವಾರ, ಫೆ.03 :- ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಸ್ಟೇಟ್‌ಮೆಂಟ್ ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು.ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು.ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು.ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ, ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್ ಎಂಟು ಅಥವಾ ಹೆಚ್ಚು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಇಬ್ಬರು ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್‌ಗೆ ಬಸ್ ಪಾಸ್ ಪಡೆಯಲು ಅವಕಾಶವಿದೆ.ಉಪಗ್ರಹ ಆಧಾರಿತ ವಿದ್ಯುನ್ಮಾನ ವಾಹಿನಿಗಳ ವರದಿಗಾರರು ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ ಪ್ರತಿ ತಾಲ್ಲೂಕಿಗೆ ಓರ್ವ ಕ್ಯಾಮರಾಮ್ಯಾನ್ ಹಾಗೂ ಓರ್ವ ವರದಿಗಾರರು ಬಸ್ ಪಾಸ್ ಪಡೆಯಬಹುದಾಗಿದೆ.  ದಿನಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ನೀಡುವ ನೇಮಕಾತಿ ಪತ್ರ ಹಾಗೂ ಶಿಫಾರಸ್ಸು ಆಧರಿಸಿ ಅರ್ಹ ಪತ್ರಕರಿಗೆ ಬಸ್ ಪಾಸ್‌ಗಳನ್ನು ನೀಡಲಾಗುವುದು.ಆಸಕ್ತ ಹಾಗೂ ಅರ್ಹ ಪತ್ರಕರ್ತರು ತಮ್ಮ ಸಮೀಪದ ಗ್ರಾಮ ಒನ್,ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ತೆರಳಿ ಸೇವಾಸಿಂಧು ಪೋರ್ಟಲ್ ನಲ್ಲಿ ಆನ್‌ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು.ಅಪ್‌ಲೋಡ್ ಮಾಡಿದ ದಾಖಲೆಗಳು ಹಾಗೂ ಆನ್‌ಲೈನ್ ಅರ್ಜಿಯ ಮುದ್ರಿತ ಪ್ರತಿಯನ್ನು ತಮ್ಮ ಜಿಲ್ಲೆಯ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸ್ವಯಂ ದೃಢೀಕರಿಸಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ. ಜಿಲ್ಲೆಯ ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ ಕಾರವಾರ,ಫೆ.3 :-ರಾಷ್ಟ್ರೀಯ ಆರೋ​‍್ಯಗ ಅಭಿಯಾನ ಅಡಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿರುವ ಐ.ಸಿ.ಯು. ವೈದ್ಯಾಧಿಕಾರಿಗಳ ಒಟ್ಟು 26 ಹುದ್ದೆಗಳು ಖಾಲಿ ಇದ್ದು. ಮಾಸಿಕ ಸಂಚಿತ ವೇತನ ರೂ.50,000 ಇರುತ್ತದೆ. ತಾಲೂಕು ಆಸ್ಪತ್ರೆ ಶಿರಸಿ, ಭಟ್ಕಳ ಹಾಗೂ ಕ್ರಿಮ್ಸ್‌ ಕಾರವಾರ ಆಸ್ಪತ್ರೆಗಳಲ್ಲಿ ಖಾಲಿ ಇರುವ 6 ಎಸ್‌.ಎನ್‌.ಸಿ.ಯು. ವೈದ್ಯಾಧಿಕಾರಿಗಳ ಹುದ್ದೆಗಳು ಖಾಲಿ ಇದ್ದು, ಮಾಸಿಕ ಸಂಚಿತ ವೇತನ ರೂ.55,000/- ಇರುತ್ತದೆ.  ಆಸಕ್ತ ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿ ಕರ್ನಾಟಕ ಮೆಡಿಕಲ್ ಕೌನ್ಸಿಲ್‌ನಲ್ಲಿ ನೋಂದಣಿ ಹೊಂದಿದ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಕಚೇರಿ ವೇಳೆಯಲ್ಲಿ ಜಿಲ್ಲಾ ಆರೋ​‍್ಯಗ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರ್‌.ಸಿ ಹೆಚ್‌.ಅಧಿಕಾರಿಗಳ ಕಚೇರಿಯಲ್ಲಿ ಮೂಲ ದಾಖಲಾತಿಯೊಂದಿಗೆ ಹಾಜರಾಗಲು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ :9449843124 ನ್ನು ಸಂಪರ್ಕಿಸುವಂತೆ ಜಿಲ್ಲಾ ಆರೋ​‍್ಯಗ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುಮಟಾ : ವಿದ್ಯುತ್ ವ್ಯತ್ಯಯಕಾರವಾರ,ಫೆ.3 :- ಹೆಸ್ಕಾಂ ಕುಮಟಾ ಉಪವಿಭಾಗದ ಮಿರ್ಜಾನ್ ದುಂಡಕುಳಿ ಹತ್ತಿರ ಕುಮಟಾ ಗೋಕರ್ಣ 33ಕೆ.ವಿ ಹೊಸ ಲಿಂಕ್ ಲೈನ್ ಮಾರ್ಗದ ಜಂಗಲ್ ಕಟ್ಟಿಂಗ್ ಕಾರ್ಯ ಇರುವುದರಿಂದ  ಗ್ರಾಮೀಣ ಶಾಖೆಯ ವ್ಯಾಪ್ತಿಯ 11 ಕೆ.ವಿ ಮಿರ್ಜಾನ್ ಫೀಡರಿನ ಭಾಗಗಳಲ್ಲಿ ಮಾ.5 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 3 ಗಂಟೆ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸುವಂತೆ ಹೆಸ್ಕಾಂ ಕುಮಟಾ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರು(ವಿ)  ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.