ಬೆಳಗಾವಿ: ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯ ಎಲ್ಲ ಕಾರ್ಯಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ರೈತರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಒದಗಿಸಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ರಾಮಚಂದ್ರನ್.ಆರ್ ಅವರು ಸೂಚಿಸಿದರು.
ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ (ಜು.18) ಹಮ್ಮಿಕೊಂಡಿದ್ದ 2018-19ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಮತ್ತು ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಗಳ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗುಣಮಟ್ಟದ ಹನಿ ನೀರಾವರಿ ಪರಿಕರಗಳನ್ನು ನೊಂದಾಯಿತ ಸಂಸ್ಥೆಗಳಿಂದ ರೈತರಿಗೆ ಒದಗಿಸಬೇಕೆಂದು ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ತೋಟಗಾರಿಕೆ ಇಲಾಖೆಯಲ್ಲಿ ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯು ಒಂದು ಬಹು ಮುಖ್ಯವಾದ ಯೋಜನೆಯಾಗಿದ್ದು, ಈ ಯೋಜನೆಯು ತೋಟಗಾರಿಕೆ ಅಭಿವೃದ್ಧಿ ಕೊನೆಯಿಂದ ಕೊನೆಯವರೆಗೆ ಅನುಷ್ಠಾನದ ಉದ್ದೇಶ ಹೊಂದಿದೆ ಎಂದು ಹೇಳಿದರು.
ಈಗಾಗಲೇ ಜಿಲ್ಲೆಯ ಸಹಸ್ರಾರು ರೈತರು ಹಾಗೂ ತೋಟಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ಸಾರ್ವಜನಿಕರ ವಲಯದ ಹಾಗೂ ಖಾಸಗಿ ಸಂಘ ಸಂಸ್ಥೆಗಳು ಕೊಯ್ಲೋತ್ತರ ಮಾರುಕಟ್ಟೆ ಅಥವಾ ಸಂಸ್ಕರಣೆ ಪ್ರಯೋಜನೆಗಳನ್ನು ಪಡೆದುಕೊಂಡಿರುತ್ತವೆ. ಈ ಯೋಜನೆಯಡಿ ರೈತರು ಪ್ರದೇಶ ವಿಸ್ತರಣೆಯಡಿ ಹಣ್ಣಿನ ಬೆಳೆಗಳು, ತರಕಾರಿ ಬೆಳೆಗಳನ್ನು ಬೆಳೆಯಬಹುದಾಗಿದ್ದು, ಸಣ್ಣ ಮತ್ತು ಅತೀ ಸಣ್ಣ ರೈತರು ನೀರಿನ ಮೂಲಗಳ ನಿಮರ್ಾಣಕ್ಕಾಗಿ ಕೃಷಿ ಹೊಂಡ ಮತ್ತು ಸಮುದಾಯ ಕೃಷಿ ಹೊಂಡಗಳನ್ನು ನಿಮರ್ಾಣ ಮಾಡಿಕೊಂಡು ಬೆಳೆಗಳನ್ನು ಬೆಳೆಯಬಹುದಾಗಿದೆ ಎಂದರು.
ಸಂರಕ್ಷಿತ ಬೇಸಾಯದಡಿ ಹಸಿರು ಮನೆಯಲ್ಲಿ ಬಹು ಬೇಡಿಕೆಯ ವಾಣಿಜ್ಯ ಬೆಳೆಗಳನ್ನು ಸಹ ಬೆಳೆಯಬಹುದಾಗಿದ್ದು ಕೊಯ್ಲೋತ್ತರ ನಿರ್ವಹಣೆಗಾಗಿ ಪ್ಯಾಕ್ ಹೌಸ್, ಸಮಗ್ರ ಪ್ಯಾಕ್ ಹೌಸ್, ಪ್ರಾಥಮಿಕ ಸಂಸ್ಕರಣಾ ಘಟಕಗಳು, ಬಾಳೆ ಮಾಗಿಸುವ ಘಟಕ, ಶೀತಲ ಘಟಕ, ಗ್ರಾಮೀಣ ಮಾರುಕಟ್ಟೆ ಮತ್ತು ರಿಟೇಲ್ ಮಾರುಕಟ್ಟೆಗಳನ್ನು ಸಹ ಈ ಯೋಜನೆಗಳಲ್ಲಿ ಉಪಯೋಗ ಪಡೆದುಕೊಳ್ಳಬಹುದಾಗಿದ್ದು, ಗುಣಮಟ್ಟದ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಈ ಯೋಜನೆಯು ಅತೀ ಉಪಯೋಗಕರವಾಗಿದೆ. ಯೋಜನೆಗಳನ್ನು ಅನುಷ್ಠಾನಗೊಳಿಸಲು ಹನಿ ನೀರಾವರಿಯ ಅವಶ್ಯಕವಾಗಿದ್ದು ರೈತರು ಹನಿ ನೀರಾವರಿ ತಾಂತ್ರಿಕತೆಗಳನ್ನು ಅಳವಡಿಸಿಕೊಂಡು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಕವಾಗಿದೆ ಎಂದು ಹೇಳಿದರು.
ಜಂಟಿ ಕೃಷಿ ನಿದರ್ೇಶಕರು, ಜಿಲ್ಲಾ ಮಾರುಕಟ್ಟೆ ಅಧಿಕಾರಿಗಳು, ಲೀಡ್ ಬ್ಯಾಂಕ್ ಅಧಿಕಾರಿಗಳು, ಸಹಕಾರ ಇಲಾಖೆಯ ಉಪನಿಬಂಧಕರು, ತೋಟಗಾರಿಕೆ ಮಹಾವಿದ್ಯಾಲಯದ ಡೀನ್, ಹನಿ ನೀರಾವರಿ ಸಂಘದ ಅಧ್ಯಕ್ಷರು ಹಾಗೂ ಇನ್ನಿತರರು ಸಭೆಯಲ್ಲಿ ಉಪಸ್ಥಿತರಿದ್ದರು.