ಬಿಎಲ್‌ಓ ಗಳಿಗೆ ಅಗತ್ಯ ದಾಖಲೆ ಹಾಗೂ ಸಹಕಾರ ನೀಡಿ
Provide the necessary documents and cooperation to the BLOs
ತಾಳಿಕೋಟಿ 03 : ನಿಮ್ಮ ಮನೆಗೆ ಆಗಮಿಸುವ ಬಿಎಲ್‌ಓ ಅಧಿಕಾರಿಗಳಿಗೆ ಅಗತ್ಯ ದಾಖಲೆಗಳನ್ನು ಒದಗಿಸಿ ಅವರಿಗೆ ಸಂಪೂರ್ಣ ಸಹಕಾರ ನೀಡಿ ಎಂದು ಭಾಜಪ ಮುಖಂಡ ಮಾನಸಿಂಗ್ ಕೊಕಟನೂರ ಹೇಳಿದರು. ಪಟ್ಟಣದ ಅನಂತಪುರ ಪೇಟೆಯ ಬೂತ್ ಸಂಖ್ಯೆ 27ರಲ್ಲಿ ಬಿಎಲ್‌ಓ ಅಧಿಕಾರಿಗಳ ಜೊತೆ ಮತದಾರರ ಮನೆ ಮನೆಗೆ ತೆರಳಿ ಮಾಹಿತಿ ನೀಡಿ ಅವರು ಗುರುವಾರ ಮಾತನಾಡಿದರು. ರಾಜ್ಯಾದ್ಯಂತ ಜೂನ್ 30 ರಿಂದ ಜುಲೈ 29 ರವರೆಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ಮನೆ ಮನೆ ಸಮೀಕ್ಷೆ ನಡೆಯುತ್ತಿದೆ ಪ್ರತಿ ಬೂತ್‌ಗೆ ನಿಯುಕ್ತರಾದ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಓ) ಗಳಿಗೆ ಅಗತ್ಯ ದಾಖಲೆ ಹಾಗೂ ಮಾಹಿತಿಯನ್ನು ಸಲ್ಲಿಸಿ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಹಾಗೂ ವಿವರಗಳು ನಿಖರವಾಗಿ ದಾಖಲಾಗಿರುವದನ್ನು ಖಚಿತಪಡಿಸಿಕೊಳ್ಳಬೇಕು. ಬಲಿಷ್ಠ ಪ್ರಜಾಪ್ರಭುತ್ವದ ಅಡಿಪಾಯ ನಿಖರ ಮತದಾರರ ಪಟ್ಟಿಯಲ್ಲಿದೆ. ಆದ್ದರಿಂದ ಈ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸೋಣ ಎಂದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 