ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮ ಜವಾಬ್ದಾರಿ: ಶಾಸಕ ಪಠಾಣ
Providing basic amenities is our responsibility: MLA Pathan
ಶಿಗ್ಗಾವಿ 21: ಕ್ಷೇತ್ರದ ಜನರಿಗೆ ಬೇಕಾಗುವ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮ ಜವಾಬ್ದಾರಿಯಾಗಿದೆ ಅಲ್ಲದೇ ಶಾಸಕನಾದವನು ರಾಜನಲ್ಲ ಜನರ ಸೇವಕ ಎಂದು ಶಾಸಕ ಯಾಸೀರ ಅಹ್ಮದಖಾನ ಪಠಾಣ ಹೇಳಿದರು. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮುಖ್ಯಮಂತ್ರಿ ವಿಶೇಷ ಅನುಧಾನದಡಿಯಲ್ಲಿ ಚಿಕ್ಕಮಣಕಟ್ಟಿ 40 ಲಕ್ಷ,ಹಿರೆಮಣಕಟ್ಟಿ 140 ಲಕ್ಷ,ಕಡಹಳ್ಳಿ 30 ಲಕ್ಷ,ತಿಮ್ಮಾಪೂರ 167 ಲಕ್ಷ,ನೀರಲಗಿ 35 ಲಕ್ಷ ಮತ್ತು ಮುತ್ತಳ್ಳಿ 120 ಲಕ್ಷ ಒಟ್ಟು 5 ಕೋಟಿ 32 ಲಕ್ಷ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮತ್ತು ಕಡಹಳ್ಳಿ 26, ತಿಮ್ಮಾಫೂರ 24, ನೀರಲಗಿ ಗ್ರಾಮದಲ್ಲಿ 34 ಒಟ್ಟು 84 ಫಲಾನುಭವಿಗಳಿಗೆ ಕಂದಾಯ ಗ್ರಾಮ ಹಕ್ಕುಪತ್ರ ವಿತರಿಸಿ ಮಾತನಾಡಿದ ಅವರು 12 ನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣನವರು ನುಡಿದ ಹಾಗೆ ಕಾಯಕವೇ ಕೈಲಾಸ ತತ್ವದಂತೆ ನಾವು ಮಾಡುವ ಕೆಲಸ ಕಾರ್ಯಗಳಲ್ಲಿ ಕೈಲಾಸವನ್ನು ಕಾಣಬೇಕಾಗಿದೆ ಎಂದರು. ಈ ಸಂದರ್ಭದಲ್ಲಿ ಗುಡ್ಡಪ್ಪ ಜಲದಿ, ಎಸ್.ಎಫ್.ಮಣಕಟ್ಟಿ, ಮಹಿಳಾ ಜಿಲ್ಲಾದ್ಯಕ್ಷೆ ವಸಂತಾ ಬಾಗೂರ, ಅಣ್ಣಪ್ಪ ಲಮಾಣಿ ಸೇರಿದಂತೆ ಗ್ರಾಮಸ್ಥರು ಹಾಗೂ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 