ಗ್ರಾಮೀಣ ಕ್ಷೇತ್ರಕ್ಕೆ ಸೌಕರ್ಯ ಒದಗಿಸುವುದೇ ನಮ್ಮ ಮೊದಲ ಪ್ರಾಸಶ್ತ್ಯ: ಸಚಿವ ಜಾರಕಿಹೊಳಿ
Providing facilities to the rural sector is our first priority: Minister Jarkiholi
ಯಮಕನಮರಡಿ 18: ಗ್ರಾಮೀಣ ಭಾಗದ ಜನರಿಗೆ ಉತ್ತಮ ರಸ್ತೆ ಹಾಗೂ ಮೂಲಸೌಕರ್ಯ ಒದಗಿಸುವುದು ನಮ್ಮ ಆದ್ಯತೆಯಾಗಿದೆ. ಈ ನೂತನ ಸೇತುವೆ ನಿರ್ಮಾಣದಿಂದಾಗಿ ಹೊಸ ವಂಟಮೂರಿ ಹಾಗೂ ಮಳ್ಳೊಳ್ಳಿ ಭಾಗದ ಸಾರ್ವಜನಿಕರ ಮತ್ತು ರೈತರ ಬಹುದಿನಗಳ ಸಂಚಾರ ಸಮಸ್ಯೆ ನಿವಾರಣೆಯಾಗಲಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಅಭಿಪ್ರಾಯಪಟ್ಟರು.ಯಮಕನಮರಡಿ ಮತಕ್ಷೇತ್ರದ ಹೊಸ ವಂಟಮೂರಿ ಗ್ರಾಮದಲ್ಲಿ ಕೆಆರಿ್ಡಎಲ್ ಯೋಜನೆಯಡಿ ಒಟ್ಟು 1 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ವಂಟಮೂರಿ- ಮಳ್ಳೊಳ್ಳಿ ಸಂಪರ್ಕ ಕಲ್ಪಿಸುವ ನೂತನ ಸೇತುವೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಹೊಸ ವಂಟಮೂರಿ ಗ್ರಾಮದ ಜನತೆ ಪ್ರೀತಿ, ವಿಶ್ವಾಸ ಹಾಗೂ ರಾಜಕೀಯವಾಗಿ ನಮ್ಮನ್ನು ಎಂದೂ ಕೈ ಬಿಟ್ಟಿಲ್ಲ. ನಿಮ್ಮ ಋಣ ನಮ್ಮ ಮೇಲಿದೆ. ಹೊಸ ವಂಟಮೂರಿ ಗ್ರಾಮದ ಸಾರ್ವಜನಿಕರು ಪ್ರತಿ ಬಾರಿಯೂ ನಮ್ಮನ್ನು ಆಶೀರ್ವದಿಸಿದ್ದಾರೆ. ಆದ್ದರಿಂದ ಈ ಭಾಗಕ್ಕೆ ಅವಶ್ಯವಿರುವ 90ಅ ಕೆಲಸಗಳನ್ನು ಮಾಡಿ ಕೊಟ್ಟಿದ್ದೇವೆ ಎಂದು ತಿಳಿಸಿದರು.10 ಲಕ್ಷ ರೂ. ವೆಚ್ಚದ ಬೀದಿ ದೀಪ ಅಳವಡಿಕೆ: ಇದೇ ಸಂದರ್ಭದಲ್ಲಿ ಹೊಸ ವಂಟಮೂರಿ ಗ್ರಾಮದಿಂದ ಹಾಲಬಾಂವಿ ಐಟಿಬಿಪಿ (ಋಃಕ) ವರೆಗೆ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕಾಗಿ ಅಂದಾಜು 10 ಲಕ್ಷ ರೂಪಾಯಿ ವೆಚ್ಚದ ಬೀದಿ ದೀಪ ಅಳವಡಿಕೆ ಕಾಮಗಾರಿಗೂ ಸಚಿವ ಸತೀಶ್ ಜಾರಕಿಹೊಳಿ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬೆಳಗಾವಿಯ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಋಃಕ) 44ನೇ ಬೆಟಾಲಿಯನ್ನ ಮುಖ್ಯಸ್ಥ ಎಸ್. ಜುನಜಾ, ಬೆಳಗಾವಿ ಜಿಲ್ಲಾಧಿಕಾರಿ ಮೊಹಮದ್ ರೋಶನ್, ಪೊಲೀಸ್ ಆಯುಕ್ತ ಭೂಷಣ್ ಗುಲಾಬರಾವ್ ಬೊರಸೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಹುಕ್ಕೇರಿ ತಾಪಂ ಇಒ ಪಿ.ಆರ್. ಮಲ್ಲಾಡದ ಸೇರಿದಂತೆ ನೀರಾವರಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ಮುಖಂಡರಾದ ದಯಾನಂದ ಪಾಟೀಲ್, ರಾಜು ದರಗಶೆಟ್ಟಿ, ಕಿರಣ ರಜಪೂತ, ಮಲಗೌಡ ಪಾಟೀಲ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 