ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ಆಕ್ಷೇಪಣೆ ಸಲ್ಲಿಸಲು ಅವಕಾಶ: ಸಿಡಿಪಿಓ
Provisional selection list for Anganwadi workers and helpers published; opportunity to submit object
ಲೋಕದರ್ಶನ ವರದಿ
ಕಾಗವಾಡ ೨೪: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ ೧೩ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ೧೯ ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗಾಗಿ ಈ ಹಿಂದೆ ಆಫ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಸದರಿ ಹುದ್ದೆಗಳಿಗೆ ಸಂಬAಧಿಸಿದ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಿ, ಪಟ್ಟಿಯನ್ನು ಕಾಗವಾಡ ಶಿಶು ಅಭಿವೃದ್ಧಿ ಯೋಜನಾ ಕಛೇರಿ, ತಹಶೀಲ್ದಾರರ ಕಛೇರಿ, ತಾಲೂಕ ಪಂಚಾಯತ ಕಛೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಸಂಬAಧ ಪಟ್ಟ ಆಯಾ ಗ್ರಾಮಗಳ ಅಂಗನವಾಡಿ ಕೇಂದ್ರ, ಶಾಲೆ, ಗ್ರಾಮ, ಪಟ್ಟಣ ಪಂಚಾಯತಗಳ ಸೂಚನಾ ಫಲಕಗಳ ಮೇಲೆ ಪ್ರಕಟಿಸಲಾಗಿದೆ.
ಈ ಬಗ್ಗೆ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ೩೧ ಆಗಸ್ಟ್ ೨೦೨೬ರ ಸಂಜೆ ೫.೩೦ ರ ಒಳಗಾಗಿ ಸೂಕ್ತ ದಾಖಲಾತಿಗಳೊಂದಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಗಣೇಶವಾಡಿ ರಸ್ತೆ, ಕಾಗವಾಡ ಇಲ್ಲಿಗೆ ಆಕ್ಷೇಪಣೆ ಸಲ್ಲಿಸಬಹುದು. ತದನಂತರದ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಕಾಗವಾಡ, ದೂರವಾಣಿ: ೦೮೩೩೯-೨೬೪೯೭೭ ಇವರನ್ನು ರಜಾ ದಿನಗಳನ್ನು ಹೊರತುಪಡಿಸಿ, ಕಛೇರಿ ವೇಳೆಯಲ್ಲಿ ಸಂರ್ಪಕಿಸಬಹುದೆAದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಂಜೀವಕುಮಾರ ಸದಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 