ವಿಕಸಿತ ಭಾರತ ಗ್ರಾಮೀಣ ಯೋಜನೆ ಕುರಿತು ಜನಜಾಗೃತಿ ಕಾರ್ಯಕ್ರಮ

 ವಿಕಸಿತ ಭಾರತ ಗ್ರಾಮೀಣ ಯೋಜನೆ ಕುರಿತು ಜನಜಾಗೃತಿ ಕಾರ್ಯಕ್ರಮ  Public Awareness Program on the Viksit Bharat Rural Scheme

ಲೋಕದರ್ಶನ ವರದಿ 

ರಟ್ಟೀಹಳ್ಳಿ, ಜು.16: ತಾಲ್ಲೂಕಿನ ಮಾಸೂರು ಗ್ರಾಮದಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) (ಗಿಃಉಖಂಒಉ) ಯೋಜನೆ ಕುರಿತು ಜನಜಾಗೃತಿ ಮತ್ತು ಅರಿವು ಕಾರ್ಯಕ್ರಮ ಹಾಗೂ ಸಾಮಾಜಿಕ ಪರಿಶೋಧನಾ ಗ್ರಾಮಸಭೆ ನಡೆಯಿತು.  ತಾಲ್ಲೂಕು ಐಇಸಿ ಸಂಯೋಜಕ ಕುಮಾರಯ್ಯ ಚಿಕ್ಕಮಠ ಮಾತನಾಡಿ, ಈ ಯೋಜನೆಯಡಿ ಪ್ರತಿ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ 125 ದಿನಗಳ ಉದ್ಯೋಗ ಖಾತರಿ ನೀಡಲಾಗುತ್ತದೆ. ಗಂಡು-ಹೆಣ್ಣು ಎಂಬ ಭೇದವಿಲ್ಲದೆ ಸಮಾನ ಕೆಲಸಕ್ಕೆ ಸಮಾನ ಕೂಲಿ ನೀಡಲಾಗುತ್ತದೆ ಎಂದು ತಿಳಿಸಿದರು.  

ಪ್ರಸ್ತುತ ದಿನಗೂಲಿ ?382 ಆಗಿದ್ದು, 125 ದಿನಗಳ ಪೂರ್ಣ ಉದ್ಯೋಗ ಪಡೆದ ಕುಟುಂಬಕ್ಕೆ ?47,750 ಕೂಲಿ ದೊರೆಯಲಿದೆ. ಯೋಜನೆಯಡಿ ಒಟ್ಟು 318 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಅವುಗಳಲ್ಲಿ ಜಲ ಸಂರಕ್ಷಣೆಗೆ ಸಂಬಂಧಿಸಿದ 107 ಕಾಮಗಾರಿಗಳು, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ 90 ಕಾಮಗಾರಿಗಳು, ಜೀವನೋಪಾಯಕ್ಕೆ ಸಂಬಂಧಿಸಿದ 86 ಕಾಮಗಾರಿಗಳು ಹಾಗೂ ತೀವ್ರ ಹವಾಮಾನ ಘಟನೆಗಳ ಶಮನಕ್ಕಾಗಿ 35 ಕಾಮಗಾರಿಗಳು ಸೇರಿವೆ ಎಂದು ಹೇಳಿದರು.  

ಕೃಷಿ ಹಂಗಾಮಿನಲ್ಲಿ ಕೃಷಿ ಕಾರ್ಮಿಕರ ಲಭ್ಯತೆಯನ್ನು ಖಚಿತಪಡಿಸಲು 60 ದಿನಗಳ ವಿರಾಮ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದರು.  ಸಾಮಾಜಿಕ ಪರಿಶೋಧನಾ ವ್ಯವಸ್ಥಾಪಕ ಗೀರೀಶ್ ಪಾಟೀಲ ಮಾತನಾಡಿ, ಈ ಹಿಂದಿನ ನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿಗಳ ವರದಿಯನ್ನು ಗ್ರಾಮಸಭೆಯಲ್ಲಿ ಮಂಡಿಸಲಾಗುತ್ತಿದೆ. ಗ್ರಾಮಸ್ಥರು ತಮ್ಮ ಅಭಿಪ್ರಾಯ ಮತ್ತು ಸಲಹೆಗಳನ್ನು ಮುಕ್ತವಾಗಿ ವ್ಯಕ್ತಪಡಿಸಬಹುದು ಎಂದು ತಿಳಿಸಿದರು. ಗ್ರಾಮೀಣ ಕೂಲಿ ಕಾರ್ಮಿಕರು ಯೋಜನೆಯ ಸೌಲಭ್ಯಗಳನ್ನು ಸಮರ​‍್ಕವಾಗಿ ಬಳಸಿಕೊಂಡು ಸಾಮಾಜಿಕ ಹಾಗೂ ಆರ್ಥಿಕವಾಗಿ ಸಬಲರಾಗಬೇಕು ಎಂದು ಕರೆ ನೀಡಿದರು.  

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಕೆ.ಎನ್‌. ಹರಿಯಾಳ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಮತಾ ಜಗಲಪ್ಪನವರ, ಸಂಪನ್ಮೂಲ ವ್ಯಕ್ತಿಗಳಾದ ದೇವರಾಜ್, ಶಿವಶಂಕರ್, ಲಿಂಗರಾಜ್, ಗ್ರಾಮ ಪಂಚಾಯಿತಿ ಸಿಬ್ಬಂದಿಗಳಾದ ಸುಚಿತ್ರಾ ಆರ್‌., ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹನುಮಂತಪ್ಪ ನಾಡಗೌಡ, ಪ್ರದೀಪ್ ಜೋಗೆರ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.