ಪ್ರಜಾಸೇವಾ ಆಂದೋಲನ
Public Service Movement
ಲೋಕದರ್ಶನ ವರದಿ
ಪ್ರಜಾಸೇವಾ ಆಂದೋಲನ
ಕಾಗವಾಡ 12 : ನಿಮ್ಮ ಮನೆ ಬಾಗಿಲಿಗೆ ಸರ್ಕಾರದ ಎಂಬ ಘೋಷವಾಕ್ಯದೊಂದಿಗೆ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ ಗ್ರಾಮದಲ್ಲಿ ಪ್ರಜಾಸೇವಾ ಆಂದೋಲನ ಹಮ್ಮಿಕೊಳ್ಳಲಾಯಿತು.
ತಾಲೂಕಾಡಳಿತ ಹಾಗೂ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಶನಿವಾರ ನಡೆದ ಕಾರ್ಯಕ್ರಮಕ್ಕೆ ತಹಶೀಲ್ದಾರ್ ರವೀಂದ್ರ ಹಾದಿಮನಿ ಚಾಲನೆ ನೀಡಿದರು. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಮುಂದೆ ನೇರವಾಗಿ ಸಲ್ಲಿಸಿದರೆ, ಅವುಗಳಿಗೆ ಶೀಘ್ರ ಪರಿಹಾರ ಕಲ್ಪಿಸಲು ತಾಲೂಕಾಡಳಿತ ಸದಾ ಸಿದ್ಧವಿದೆ. ಈ ಅವಕಾಶವನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ನಿರಂತರ ವಿದ್ಯುತ್ ಕಡಿತ ಖಂಡಿಸಿ ರೈತರು ಹೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪ್ರಭಾಕರ ಸತ್ತಿ ಮಾತನಾಡಿ, ರಾಜ್ಯದಲ್ಲಿ ಮಳೆಯ ಕೊರತೆಯಿಂದ ಜಲಾಶಯಗಳು ಭರ್ತಿಯಾಗದ ಕಾರಣ ವಿದ್ಯುತ್ ಸಮಸ್ಯೆ ಉಂಟಾಗಿದೆ. ಸದ್ಯ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರುತ್ತಿದ್ದು, ಮುಂದಿನ ದಿನಗಳಲ್ಲಿ ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಹೆಸ್ಕಾಂ ಅಧಿಕಾರಿ ಮಹೇಶ್ ಜಕ್ಕಣ್ಣವರ, ತಹಶೀಲ್ದಾರ್ ರಶ್ಮಿ ಜಕಾತೆ, ಸಿಡಿಪಿಒ ಸಂಜೀವಕುಮಾರ್, ಪಿಎಸ್‌ಐ ರಾಘವೇಂದ್ರ ಖೋತ, ಗ್ರಾಮ ಆಡಳಿತಾಧಿಕಾರಿ ಕೆ.ಕೆ. ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 