ಲೋಕೋಪಯೋಗಿ ಇಲಾಖೆಗೆ ಮರಳು ಗಣಿಗಾರಿಕೆಗೆ ಪರವಾನಿಗೆ : ಎಚ್.ಡಿ.ರಾಜೇಶ್
Public Works Department granted permission for sand mining: H.D. Rajesh
ಲೋಕದರ್ಶನ ವರದಿ
ಕಂಪ್ಲಿ 25: ತಾಲ್ಲೂಕಿನಲ್ಲಿ ಸರ್ಕಾರಿ ಕಾಮಗಾರಿಗಳಿಗೆ ಮರಳಿನ ಅಗತ್ಯವಿರುವ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಗೆ ಮರಳು ಗಣಿಗಾರಿಕೆಗೆ ಅನುಮತೀನೀಡಲಾಗಿದೆ ಎಂದು ಬಳ್ಳಾರಿ ಉಪವಿಭಾಗದ ಸಹಾಯಕ ಆಯುಕ್ತರಾದ ಎಚ್.ಡಿ.ರಾಜೇಶ್ ತಿಳಿಸಿದರು.ಆವರು ಪಟ್ಟಣದ ವಿವಿಧ ಕಾರ್ಯಗಳ ನಿಮಿತ್ತ ಆಗಮಿಸಿದ ಸಂದರ್ಭದಲ್ಲಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ತಾಲ್ಲೂಕಿನಲ್ಲಿ ಅಧಿಕೃತ ಮರಳು ಬ್ಲಾಕ್ ಇಲ್ಲದೇ ಇರುವುದರಿಂದ ಸರ್ಕಾರಿ ಕಾಮಗಾರಿಗಳಿಗೆ ಹಾಗೂ ಸಾರ್ವಜನಿಕರ ಕಟ್ಟಡ ನಿರ್ಮಾಣಗಳಿಗೆ ತಿವ್ರವಾದ ತೊಂದರೆಯಾಗಿರುವ ಹಿನ್ನೆಲ್ಲೆಯಲ್ಲಿ ತುಂಗಭದ್ರಾ ನದಿ ತೀರದಲ್ಲಿ ಮರಳು ಲಭ್ಯವಿರುವ ಸ್ಥಳವನ್ನು ಕಂದಾಯ ಇಲಾಖೆಯಿಂದ ಗುರುತಿಸಲಾಗಿದ್ದು,ಅದನ್ನು ಇಂದುಪರೀಶೀಲನೆ ಮಾಡಿದ್ದು, ತಾಲ್ಲೂಕಿನ ಸಣಾಪುರ ಗ್ರಾ.ಪಂ.ವ್ಯಾಪ್ತಿಯ ಅರಳಿಹಳ್ಳಿ ತಾಂಡದ ಸಮೀಪದಲ್ಲಿ ನದಿ ತೀರದಲ್ಲಿ ಮರಳು ಗಣಿಗಾರಿಕೆಗೆ ಪರವಾನಿಗೆಯನ್ನು ಲೋಕೋಪಯೋಗಿ ಇಲಾಖೆಗೆ ನೀಡಲಾಗಿದೆ ಎಂದು ತಿಳಿಸಿದರು.
ಲೋಕೋಪಯೋಗಿ ಇಲಾಖೆಯವರು ಸರ್ಕಾರದ ಮಾರ್ಗ ಸೂಚಿಯಂತೆ ಮರಳು ಗಣಿಗಾರಿಕೆಯನ್ನು ನಡೆಸಲಿದ್ದು, ಸರ್ಕಾರಿ ಕಾಮಗಾರಿಗಳಿಗೆ ಮರಳನ್ನು ಒದಗಿಸಲಿದ್ದಾರೆ. ಜೊತೆಗೆ ಖಾಸಗಿಯವರಿಗೂ ಸಹಿತ ಸರ್ಕಾರದ ಮಾರ್ಗ ಸೂಚಿಯಂತೆ ಮರಳನ್ನು ನೀಡಲಿದ್ದಾರೆ .ಇನ್ನು ಪುರಸಭೆ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಪುರಸಭೆ ಮುಖ್ಯಾಧಿಕಾರಿಗಳಿಗೆ ಸೂಚಿಸಿದರಲ್ಲದೆ, ಬೀದಿ ದೀಪಗಳನ್ನು ಸರ್ಮಪಕವಾಗಿ ನಿರ್ವಹಿಸುವಂತೆ ಸೂಚಿಸಿದರಲ್ಲದೆ, ಕಳೆದ ಎರಡು ತಿಂಗಳ ಹಿಂದೆ ಹೊಡೆದಿರುವ ನೀರು ಸರಬರಾಜು ರೈಸಿಂಗ್ ಪೈಪ್ ಲೈನನ್ನು ಇನ್ನು ಎರಡು ಮೂರು ದಿನಗಳಲ್ಲಿ ಸರಿಪಡಿಸಬೇಕು. ಕುರುಗೋಡು ರಸ್ತೆಯಲ್ಲಿನ ದ್ವಿಪತ ರಸ್ತೆಗೆ ಅಳವಡಿಸಲಾಗಿರುವ ಜೋಡಿ ಬೀದಿ ದೀಪಗಳು ಉರಿಯುತ್ತಿಲ್ಲವೆನ್ನುವ ದೂರುಗಳು ಬಂದಿದ್ದು, ಅವುಗಳನ್ನು ಗುತ್ತಿಗೆದಾರರನ್ನು ಕರೆಸಿ ಸರಿಪಡಿಸಬೇಕು.
ಅದನ್ನು ಪುರಸಭೆಗೆ ಹಸ್ತಾಂತರಿಸಿಕೊಳ್ಳಬೇಕು. ಜೊತೆಗೆ ಲೋಕೋಪಯೋಗಿ ಇಲಾಖೆಯಿಂದ ಬೀದಿ ದೀಪಗಳನ್ನು ಕೂಡಲೇ ಸರಿಪಡಿಸುವಂತೆ ಸೂಚಿಸಿದರು.ಐತಿಹಾಸಿಕ ಸೋಮಪ್ಪನ ಕೆರೆ ದಂಡೆಯ ಮುಖ್ಯರಸ್ತೆಯ ಪಕ್ಕದಲ್ಲಿ ಅತೀಕ್ರಮಣಗೊಂಡಿದ್ದು,ಆದನ್ನು ತೆರವುಗೊಳಿಸಬೇಕು. ಪಟ್ಟಣದ ಮುಖ್ಯರಸ್ತೆಯಲ್ಲಿ ಪಾದಾಚಾರಿ ರಸ್ತೆಯನ್ನು ಅತೀಕ್ರಮಿಸಿರುವುದನ್ನು ಶೀಘ್ರವಾಗಿ ತೆರವುಗೊಳಿಸಬೇಕು ಹಾಗೂ ಸಣಾಪುರ ರಸ್ತೆಯ ಎರಡು ಬದಿಯಲ್ಲಿ ಅತೀಕ್ರಮಿಸಿರುವ ರಸ್ತೆಯನ್ನು ಶೀಘ್ರವಾಗಿ ತೆರವುಗೊಳಿಸದಿದ್ದರೆ, ಸ್ವತಃ ತಾವೆ ಇನ್ನೊಂದು ವಾರದಲ್ಲಿ ಪಟ್ಟಣಕ್ಕೆ ಆಗಮಿಸಿ ಅತೀಕ್ರಮಣಗೊಂಡ ರಸ್ತೆಯನ್ನು ತೆರವುಗೊಳಿಸಲಾಗುವುದು ಎಂದು ಪುರಸಭೆ ಅಧಿಕಾರಿಗಳನ್ನು ಎಚ್ಚರಿಸಿದರು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 