ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಾರ್ವಜನಿಕರು ಸ್ವಯಂ ಮಾಹಿತಿ ದಾಖಲಿಸಲು ಅವಕಾಶ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಾರ್ವಜನಿಕರು ಸ್ವಯಂ ಮಾಹಿತಿ ದಾಖಲಿಸಲು ಅವಕಾಶ  Public allowed to self-register for social and educational survey

ಕಾರವಾರ 27 : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ  ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸಲು  ಈಗಾಗಲೇ  ರಾಜ್ಯದ್ಯಂತ ಸಮೀಕ್ಷೆ ಕಾರ್ಯ ಆರಂಭಗೊಂಡಿದ್ದು, ಈ ಸಮೀಕ್ಷೆಯು ಅಕ್ಟೊಬರ್ 7 ರ ವರೆಗೂ ನಡೆಯಲಿದೆ. ಈಗಾಗಲೇ ಗುರುತಿಸಲಾಗಿರುವ ಎಲ್ಲಾ ಮನೆಗಳಿಗೆ ಗಣತಿದಾರರು ಭೇಟಿ ನೀಡಿ, ಗಣತಿ ಕಾರ್ಯ ನಡೆಸುತ್ತಿದ್ದು, ಸಾರ್ವಜನಿಕರೂ ಕೂಡಾ ಸ್ವಯಂ ಆಗಿ  ತಮ್ಮ ಮನೆಯ ಗಣತಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಸೌಲಭ್ಯ ವನ್ನು ಸಿದ್ದಪಡಿಸಲಾಗಿದೆ. ಸಾರ್ವಜನಿಕರು  ನಲ್ಲಿಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮೂಲಕ ಮಾಡಲು ಅವಕಾಶ ಕಲ್ಪಿಸಲಾಗಿದೆ. 

ಸಾರ್ವಜನಿಕರು ಈ ಲಿಂಕ್ ನ್ನು ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ  ಪುಟದಲ್ಲಿ ನಾಗರಿಕ ಎಂಬುದನ್ನು ಆಯ್ಕೆ ಮಾಡಿದಲ್ಲಿ ಲಾಗಿನ್ ನಲ್ಲಿ ಮುಂದುವರೆಯಲು ಕೋರಲಾಗುತ್ತದೆ. ನಂತರದಲ್ಲಿ ತಮ್ಮ ಮೊಬೈಲ್ ಸಂಖ್ಯೆಯನ್ನು ನೀಡಿದಲ್ಲಿ, ಮೊಬೈಲ್ ಗೆ ಓಟಿಪಿ ಬರಲಿದ್ದು ಅದನ್ನು ದಾಖಲು ಮಾಡಬೇಕಾಗುತ್ತದೆ. ನಂತರ ತೆರೆಯುವ ಪುಟದಲ್ಲಿ ತಮ್ಮ ಸಮೀಕ್ಷೇಯ ಸ್ಥಿತಿ ಗತಿ ಕುರಿತಂತೆ ನಿಮ್ಮ ಸಮೀಕ್ಷೆ ಪೂರ್ಣಗೊಂಡಿದೆ ಅಥವಾ ಬಾಕಿ ಎಂದು ಕಾಣಬಹುದಾಗಿದ್ದು,  ಇದುವರೆಗೆ ಸಮೀಕ್ಷೆ ನಡೆಯದೇ ಬಾಕಿ ಇದ್ದಲ್ಲಿ, ಇನ್ನೂ ಯಾವುದೇ ಕುಟುಂಬ ಸದಸ್ಯರನ್ನು ಸೇರಿಸಿಲ್ಲ ಫಾರ್ಮ್‌ ಭರ್ತಿ ಮಾಡಲು ಆರಂಭಿಸಿ ಎಂಬ ಸಂದೇಶ ಕಾಣಲಿದ್ದು, ಹೊಸ ಸಮೀಕ್ಷೆ ಆರಂಭಿಸಿ ಎಂಬುದನ್ನು ಕ್ಲಿಕ್ ಮಾಡಬೇಕಾಗುತ್ತದೆ. ನಂತರದ ಪುಟದಲ್ಲಿ ಈಗಾಗಲೇ ತಮ್ಮ ಮನೆಗೆ ಅಂಟಿಸಲಾಗಿರುವ ಸ್ಟಿಕರ್ ನಲ್ಲಿರುವ ಸಂಖ್ಯೆ ಯನ್ನು ದಾಖಲಿಸಿ ಸ್ಕ್ರೀನ್ ನಲ್ಲಿ ಕೋರುವ ಮಾಹಿತಿಗಳನ್ನು ದಾಖಲು ಮಾಡಬೇಕಾಗುತ್ತದೆ. ಸದರಿ ಸಮೀಕ್ಷೆಗೆ ದಾಖಲೆಗಳ ಮಾಹಿತಿ ನೀಡುವ ಅವಶ್ಯಕತೆ ಇರುವುದರಿಂದ  ತಮ್ಮ ಕುಟುಂಬದ ಸದಸ್ಯರ ರೇಷನ್ ಕಾರ್ಡ,ಆಧಾರ್ ಕಾರ್ಡ್‌ ಮತದಾರರ ಗುರುತಿನ ಚೀಟಿ, ವಿಕಲಚೇತರನರಾಗಿದ್ದರೆ  ಅಥವಾ ಅಂಗವಿಕಲ ಪ್ರಮಾಣ ಪತ್ರದ ದಾಖಲೆಗಳನ್ನು ತೆಗೆದಿರಿಸಿಕೊಂಡು  ಸುಲಭವಾಗಿ ಈ ಸಮೀಕ್ಷೆ ಕಾರ್ಯದಲ್ಲಿ ತಾವೇ ಸ್ವಯಂ ಆಗಿ ಭಾಗವಹಿಸಬಹುದುದಾಗಿದ್ದು, ಸಮೀಕ್ಷೆ ಯಶಸ್ವಿಯಾದ ನಂತರ  ಈ ಬಗ್ಗೆ  ಮೊಬೈಲ್ ಗೆ ಸಂದೇಶ ಬರಲಿದೆ. ಗಣತಿದಾರರು ತಮ್ಮ ಮನೆಗೆ ಬರುವವರೆಗೆ ಕಾಯದೇ  ಸಾರ್ವಜನಿಕರು ತಮಗೆ ಅನುಕೂಲವಾದ ಅವಧಿಯಲ್ಲಿ ಯಾವುದೇ ಪ್ರದೇಶದಿಂದ ಸಮೀಕ್ಷೆಯಲ್ಲಿ ಭಾಗವಹಿಸಲು ಅನುಕೂಲವಾಗಲಿದ್ದು, ತಾವೇ ತಮ್ಮ ಮಾಹಿತಿಯನ್ನು ದಾಖಲು ಮಾಡುವುದರಿಂದ, ಯಾವುದೇ ಗೊಂದಲಗಳಿಲ್ಲದೆ ನಿಖರವಾಗಿ ತಮ್ಮ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿಯನ್ನು  ಸಮೀಕ್ಷೆ ಯಲ್ಲಿ ತಿಳಿಸಲು ಸಾಧ್ಯವಾಗಲಿದೆ. ಪ್ರವಾಸ, ಬೋಟಿಂಗ್ ಚಟುವಟಿಕೆ ಕಾರ್ಯಕ್ರಮಕ್ಕೆ ಚಾಲನೆ. ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಮತ್ತು ಪ್ರವಾಸೋದ್ಯಮ ಉದ್ಯಮೆದಾರರ ಸಹಯೋಗದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ   ಶನಿವಾರ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ,  ಭೀಮಕೋಲ ಕೆರೆಯಲ್ಲಿ ಪ್ರವಾಸ, ಬೋಟಿಂಗ್ ಚಟುವಟಿಕೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕಿ ಮಂಗಳ  ಗೌರಿ ಭಟ್ ಮತ್ತಿತರರು  ಉಪಸ್ಥಿತರಿದ್ದರು.   ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳ ಕಚೇರಿಯಿಂದ ಮಾಜಾಳಿ ಕಡಲತೀರದವರೆಗೆ ಕಾರವಾರ ಬೈಸಿಕಲ್ ಕ್ಲಬ್ ವತಿಯಿಂದ ಸೈಕಲ್ ರ್ಯಾಲಿ ನಡೆಯಿತು.