ಮಳೆಗಾಲದ ಸಾಮಾನ್ಯ ರೋಗಗಳ ಕುರಿತು ಕೆಎಲ್ಇ ವೇಣುಧ್ವನಿ ಎಫ್ಎಂನಲ್ಲಿ ಜನಜಾಗೃತಿ ಕಾರ್ಯಕ್ರಮ
Public awareness program on KLE Venudhvani FM on common diseases of the monsoon season
ಲೋಕದರ್ಶನ ವರದಿ
ಬೆಳಗಾವಿ 30: ಕೆಎಲ್ಇ ವೇಣುಧ್ವನಿ 90.4 ಎಫ್ಎಂ ಸಮುದಾಯ ಬಾನುಲಿ ಕೇಂದ್ರ, ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ಮತ್ತು ಕೆಎಲ್ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಮಳೆಗಾಲದಲ್ಲಿ ಕಾಣಿಸಿಕೊಳ್ಳುವ ಸಾಮಾನ್ಯ ರೋಗಗಳು ಹಾಗೂ ಅವುಗಳ ತಡೆ-ಚಿಕಿತ್ಸೆ ಕುರಿತು ನೇರ ಫೋನ್-ಇನ್ ಜನಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಕೆಎಲ್ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಹಾಗೂ ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ತಜ್ಞ ವೈದ್ಯ ಡಾ. ಜಯಪ್ರಕಾಶ ಅಪ್ಪಾಜಿಗೋಳ ಅವರು ಭಾಗವಹಿಸಿ, ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುವ ಡೆಂಗ್ಯೂ, ಟೈಫಾಯ್ಡ್, ಹೆಪಟೈಟಿಸ್-ಎ, ವೈರಲ್ ಜ್ವರ ಹಾಗೂ ಅತಿಸಾರದಂತಹ ರೋಗಗಳ ಬಗ್ಗೆ ಮಾಹಿತಿ ನೀಡಿದರು.
ಮಳೆಗಾಲದಲ್ಲಿ ತೇವಾಂಶ ಹೆಚ್ಚಿರುವುದರಿಂದ ಸೂಕ್ಷ್ಮಜೀವಿಗಳು ಮತ್ತು ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತದೆ. ಮಳೆ ನೀರು ನಿಂತಿರುವ ಸ್ಥಳಗಳು ಸೋಂಕು ಹರಡುವ ಪ್ರಮುಖ ಕಾರಣವಾಗುತ್ತವೆ. ಆದ್ದರಿಂದ ಸ್ವಚ್ಛತೆ ಕಾಪಾಡುವುದು, ನೀರು ನಿಲ್ಲದಂತೆ ನೋಡಿಕೊಳ್ಳುವುದು ಹಾಗೂ ವೈಯಕ್ತಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಶ್ರೋತೃಗಳ ಪ್ರಶ್ನೆಗಳಿಗೆ ಉತ್ತರ ನೀಡಿ ಆರೋಗ್ಯ ಸಂಬಂಧಿತ ಹಲವು ಸಲಹೆಗಳನ್ನು ನೀಡಲಾಯಿತು. ವೇಣುಧ್ವನಿ ಕಾರ್ಯಕ್ರಮ ನಿರ್ವಾಹಕರಾದ ಮಣಿಷಾ ಪಿ.ಎಸ್. ಮತ್ತು ಮಂಜುನಾಥ ಪೈ ಕಾರ್ಯಕ್ರಮವನ್ನು ನಿರೂಪಿಸಿದರು.
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು 