ಜಿಲ್ಲಾಧಿಕಾರಿ ಕಚೇರಿಗೆ ಸಾರ್ವಜನಿಕರ ಭೇಟಿ ಸ್ಥಗಿತ: ಡಿಸಿ

ಬಳ್ಳಾರಿ, ಜು.13: ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಮಿಕ ರೋಗವು ತೀವ್ರಗತಿಯಲ್ಲಿ ಹರಡುತ್ತಿದ್ದು, ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಮಿಕ ರೋಗ ಪ್ರಸರಣವನ್ನು ತಡೆಟ್ಟುವ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿ ಕಾಯರ್ಾಲಯದಲ್ಲಿ ಸಾರ್ವಜನಿಕರ ಭೇಟಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

     ಜಿಲ್ಲಾಧಿಕಾರಿ ಕಾಯರ್ಾಲಯದಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕೋವಿಡ್-19 ನಿಯಂತ್ರಣ ಪ್ರಕ್ರಿಯೆಯಲ್ಲಿ ನೇರವಾಗಿ ಭಾಗವಹಿಸಿರುವುದರಿಂದ ಅವರ ಸುರಕ್ಷತೆಯು ಸಹ ಅತ್ಯಂತ ಮಹತ್ವದ ವಿಷಯವಾಗಿರುವುದರಿಂದ ಹಾಗೂ ಸೋಂಕಿನಿಂದ ತಡೆಯುವ ದೃಷ್ಠಿಯಿಂದ ಇಂದಿನಿಂದ ಜಿಲ್ಲಾಧಿಕಾರಿಗಳ ಕಾಯರ್ಾಲಯ ಸಂಬಂಧಪಟ್ಟ ವಿಭಾಗಗಳಿಗೆ ಸಾರ್ವಜನಿಕರ ಭೇಟಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.  

     ಜಿಲ್ಲಾಧಿಕಾರಿಗಳ ಕಾಯರ್ಾಲಯದಲ್ಲಿ ಅಜರ್ಿ ಕಿಯಾಸ್ಕ್ (ಏಔಖಏ) ನ್ನು ಅಳವಡಿಸಲಾಗಿದ್ದು, ಎಲ್ಲಾ ಸಾರ್ವಜನಿಕರು ತಮ್ಮ ಅಹವಾಲು, ಅಜರ್ಿಯನ್ನು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕಿಯಾಸ್ಕ್ನಲ್ಲಿಯೇ ಸಲ್ಲಿಸಬೇಕು. ತುತರ್ು ಮತ್ತು ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಅನಿವಾರ್ಯ ಸಂದರ್ಭವಿದ್ದಲ್ಲಿ ಮಾತ್ರ ಜಿಲ್ಲಾಧಿಕಾರಿ ಕಾಯರ್ಾಲಯಕ್ಕೆ ಭೇಟಿಗೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.