ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

ಬೆಳಗಾವಿ:  ಲೋಕಾಯುಕ್ತ ಪೊಲೀಸರಿಂದ ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಕನರ್ಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ಸಾರ್ವಜನಿಕರಿಂದ ಭತರ್ಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ದೂರು, ಅಹವಾಲು ಅಜರ್ಿಗಳನ್ನು ಸ್ವೀಕರಿಸಲಾಗುವುದು. 

ಸಕರ್ಾರಿ ಕಚೇರಿಗಳಲ್ಲಿ ಅಧೀಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ದೂರುಗಳನ್ನು ಅಲ್ಲಿನ ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು ಎಂದು ಲೋಕಾಯುಕ್ತ ಪ್ರಭಾರಿ ಪೊಲೀಸ್ ಅಧೀಕ್ಷಕರಾದ ಆರ್.ಕೆ. ಪಾಟೀಲ್ ಅವರು ತಿಳಿಸಿದ್ದಾರೆ.

ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜುಲೈ 27 ರಿಂದ 31 ರವರೆಗೆ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ಆರ್.ಆರ್. ಅಂಬಡಗಟ್ಟಿ ಅವರು ಜು.27 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ಖಾನಾಪೂರ ಪಟ್ಟಣದ ನಿರೀಕ್ಷಣಾ ಮಂದಿರದಲ್ಲಿ ಹಾಗೂ ಜು.28 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ಬೆಳಗಾವಿ ಲೋಕಾಯುಕ್ತ ಕಚೇರಿಯಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.

ಲೋಕಾಯುಕ್ತ ಪೊಲೀಸ್ ನಿರೀಕ್ಷಕರಾದ ಪಿ.ಜಿ. ನೀಲಮ್ಮನವರ ಅವರು ಜು.27 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ಅಥಣಿ  ಪಟ್ಟಣದ ಲೋಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ ಹಾಗೂ ಜು.30 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಚಿಕ್ಕೋಡಿ ಪಟ್ಟಣದ ಲೋಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.

ಲೋಕಾಯುಕ್ತ ಪೊಲೀಸ್ ನಿರೀಕ್ಷಕರಾದ ಗೋಪಾಲ.ಡಿ. ಜೋಗಿನ ಅವರು ಜು.28 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ಬೈಲಹೊಂಗಲ ಪಟ್ಟಣದ ಲೋಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ ಹಾಗೂ ಜು.30 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸವದತ್ತಿ ಪಟ್ಟಣದ ಲೋಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

ಲೋಕಾಯುಕ್ತ ಪೊಲೀಸ್ ನಿರೀಕ್ಷಕರಾದ ಪಿ.ಆರ್. ಧಬಾಲಿ ಅವರು ಜು.28 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ರಾಯಬಾಗ ಪಟ್ಟಣದ ಲೋಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ ಹಾಗೂ ಜು.31 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ರಾಮದುರ್ಗ ಪಟ್ಟಣದ ಲೋಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.

ಲೋಕಾಯುಕ್ತ ಪ್ರಭಾರಿ ಪೊಲೀಸ್ ಅಧೀಕ್ಷಕರಾದ ಆರ್.ಕೆ. ಪಾಟೀಲ್ ಅವರು ಜು.30 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ಹುಕ್ಕೇರಿ ತಾಲೂಕಿನ ಲೋಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ ಹಾಗೂ ಜು.31 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ಗೋಕಾಕ ತಾಲೂಕಿನ ಘಟಪ್ರಭಾ ಧುಪದಾಳ ಲೋಕೋಪಯೋಗಿ ನಿರೀಕ್ಷಣಾ ಮಂದಿರದಲ್ಲಿ ಅಹವಾಲು ಸ್ವೀಕರಿಸಲಿದ್ದಾರೆ.

ಹೆಚ್ಚಿನ ಮಾಹಿತಿಗೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಬೆಳಗಾವಿ ಕಚೇರಿ ದೂರವಾಣಿ ಸಂಖ್ಯೆ: 0831-2421550 ಅಥವಾ 0831-2421922 ಗೆ ಸಂಪಕರ್ಿಸಬಹುದಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.