ಗಂಗಾವತಿ ತಹಶೀಲ್ದಾರ್ ಕಚೇರಿಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಸಾರ್ವಜನಿಕರ ಆಕ್ರೋಶ
Public outrage over drinking water at Gangavati Tahsildar's office
ಗಂಗಾವತಿ 12: ಇಲ್ಲಿನ ತಾಲೂಕು ಆಡಳಿತದ ಕೇಂದ್ರ ಬಿಂದುವಾಗಿರುವ ತಹಶೀಲ್ದಾರ್ ಕಚೇರಿಗೆ ಪ್ರತಿದಿನ ನೂರಾರು ಸಾರ್ವಜನಿಕರು ತಮ್ಮ ವಿವಿಧ ಕಂದಾಯ, ದಾಖಲಾತಿ ಹಾಗೂ ವೈಯಕ್ತಿಕ ಕೆಲಸ ಕಾರ್ಯಗಳ ನಿಮಿತ್ತ ಆಗಮಿಸುತ್ತಾರೆ. ಕಚೇರಿಯ ಸಿಬ್ಬಂದಿ ಸೇರಿದಂತೆ ದಿನನಿತ್ಯ ಸಾವಿರಾರು ಜನರ ಓಡಾಟವಿರುವ ಇಂತಹ ಪ್ರಮುಖ ಸರ್ಕಾರಿ ಸ್ಥಳದಲ್ಲೇ ಸಾರ್ವಜನಿಕರಿಗೆ ಕನಿಷ್ಠ ಕುಡಿಯುವ ನೀರಿನ ಸೌಲಭ್ಯವೂ ಇಲ್ಲದೆ ತೀವ್ರ ಅಭಾವ ಸೃಷ್ಟಿಯಾಗಿದೆ. ಕಚೇರಿಯ ಒಳ ಆವರಣದಲ್ಲೇ ಸಾರ್ವಜನಿಕರ ಅನುಕೂಲಕ್ಕಾಗಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಶುದ್ಧ ಕುಡಿಯುವ ನೀರಿನ ಘಟಕವಿದ್ದರೂ, ಅದು ಸಾರ್ವಜನಿಕರ ದಾಹ ನೀಗಿಸುವ ಬದಲು ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ಚುನಾವಣಾ ಸಾಮಗ್ರಿಗಳನ್ನು ಇಡುವ ಸ್ಟೋರ್ ರೂಂ ಆಗಿ ಮಾರ್ಪಟಟಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಕಚೇರಿ ಆವರಣದಲ್ಲಿ ಧೂಳು ಹಿಡಿಯುತ್ತಿರುವ ಕುಡಿಯುವ ನೀರಿನ ಘಟಕವನ್ನು ದುರಸ್ತಿ ಮಾಡಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವ ಬದಲು, ಕಚೇರಿಯ ಚುನಾವಣೆ ಶಿರಸ್ತೆದಾರ್ ಆಗಿರುವ ರವಿ ನಾಯಕ್ವಾಡ್ ಅವರು ತಮ್ಮ ತೀವ್ರ ಬೇಜವಾಬ್ದಾರಿತನದಿಂದ ಘಟಕವನ್ನು ಚುನಾವಣಾ ಬಾಕ್ಸ್ಗಳನ್ನು ಇಡುವ ಸ್ಟೋರ್ ರೂಂ ಆಗಿ ಪರಿವರ್ತಿಸಿದ್ದಾರೆ ಎನ್ನುವ ಗಂಭೀರ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿವೆ. ಕಳೆದ 2019-20ರ ಸಾಲಿನಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ನಿರ್ಮಾಣವಾದ ಈ ಶುದ್ಧ ನೀರಿನ ಘಟಕದಲ್ಲಿ ಸದ್ಯಕ್ಕೆ ಯಾವುದೇ ರೀತಿಯ ನೀರಿನ ಶುದ್ಧೀಕರಣ ಯಂತ್ರೋಪಕರಣಗಳೇ ಇಲ್ಲದಂತಾಗಿದೆ. ಅಲ್ಲಿ ಅಳವಡಿಸಲಾಗಿದ್ದ ದುಬಾರಿ ಫಿಲ್ಟರ್ ಯಂತ್ರಗಳು ಎಲ್ಲಿ ಮಾಯವಾದವು ಎಂಬುದು ಸಾರ್ವಜನಿಕರನ್ನು ಕಾಡುತ್ತಿರುವ ದೊಡ್ಡ ಪ್ರಶ್ನೆಯಾಗಿದೆ.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 