ಕರ್ನಾಟಕ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಂದ ಅತ್ಯುತ್ತಮ ವ್ಯಕ್ತವಾಗಿದೆ : ರೆಡ್ಡಿ ಶ್ರೀನಿವಾಸ

ಕೊಪ್ಪಳ 19: ಕರ್ನಾಟಕ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಮೂಲಕ ದೇಶದ ಏಕೈಕ ರಾಜ್ಯ ಎಂದು ಕರ್ನಾಟಕ ಹೆಸರಾಗುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕೊಪ್ಪಳ ಜಿಲ್ಲಾ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಹೇಳಿದರು.  

ಜಿಲ್ಲಾ ಪಂಚಾಯತ್ ನಜೆ.ಹೆಚ್‌.ಪಟೇಲ್ ಸಭಾಂಗಣದಲ್ಲಿ ಸೆ.19ರಂದು ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಮಾನ್ಯ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಈ ಯೋಜನೆಗಳ ಅನುಷ್ಠಾನದ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಅಧಿಕಾರಿಗಳಿಗೆ ಉತ್ತಮ ಮಾರ್ಗದರ್ಶನ ಮಾಡಿದ್ದರಿಂದಾಗಿ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನವು ತೃಪ್ತಿಕರವಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಂಬಂಧಿಸಿದ ಇಲಾಖೆಗಳ ಅನುಷ್ಠಾನಾಧಿಕಾರಿಗಳಿಗೆ ತಾವು ಅಭಿನಂದಿಸುವುದಾಗಿ ಹೇಳಿದರು. ಐದು ಗ್ಯಾರಂಟಿ ಯೋಜನೆಗಳ ಯಶೋಗಾಥೆಯನ್ನು ಜನತೆಗೆ ತಿಳಿಸಬೇಕು ಎಂದು ಸಲಹೆ ಮಾಡಿದರು.  

ಗೃಹಲಕ್ಷ್ಮಿ ಯೋಜನೆಯು ಸರ್ಕಾರದ ಮಹತ್ವಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದೆ. ಕುಟುಂಬದ ಯಜಮಾನಿ ಆರ್ಥಿಕವಾಗಿ ಸಬಲೀಕರಣ ಗೊಂಡಲ್ಲಿ ಕುಟುಂಬದ ಸಮಗ್ರಅಭಿವೃದ್ದಿಯಿಂದ ಸಮಾಜದ ಅಭಿವೃದ್ದಿಗೆ ಬುನಾದಿಯಾಗಲಿದೆ. ಮಹಿಳಾ ಸಬಲೀಕರಣ ಹಾಗೂ ಸ್ವಾಭಿಮಾನದ ಹೆಗ್ಗುರುತಾಗಲಿದೆ.ಬಿಪಿಎಲ್, ಎಪಿಎಲ್ ಅಂತ್ಯೋದಯ ಕಾರ್ಡನಲ್ಲಿ  ನಮೂದಿಸಿರುವಂತೆ ಕುಟುಂಬ ಯಜಮಾನಿ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು 2,000ಗಳನ್ನು ಡಿಬಿಟಿ ಮೂಲಕ ಪಾವತಿಸುವ ಕಾರ್ಯವು ಅಚ್ಚುಕಟ್ಟಾಗಿ ನಡೆಯಬೇಕು ಎಂದು ಅವರು ತಿಳಿಸಿದರು.  

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್‌ರತ್ನಂ ಪಾಂಡೆಯಅವರು ಮಾತನಾಡಿ, ಈ ಯೋಜನೆಗಳ ಲಾಭವು ಅರ್ಹ ಪ್ರತಿಯೊಬ್ಬ ಫಲಾನುಭವಿಗಳಿಗೆ ದೊರೆಯುವ ನಿಟ್ಟಿನಲ್ಲಿ ಜನತೆಗೆಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕೃಷಿ, ಆರೋಗ್ಯ, ಜಿಲ್ಲಾ ಪಂಚಾಯತ್ ಸೇರಿದಂತೆ ವಿವಿಧ ಇಲಾಖೆಗಳ ಅಧೀನದಲ್ಲಿ ಜಿಲ್ಲಾದ್ಯಂತ ಎಲ್ಲಾ ಕಡೆಗಿರುವ ಹೆದ್ದಾರಿ ಫಲಕಗಳಲ್ಲಿ ಯೋಜನೆಗಳ ಮಾಹಿತಿ ಅಳವಡಿಸಿ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ಮಾಡಿದರು. 

ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 3,31,365 ಪಡಿತರ ಚೀಟಿ ಹೊಂದಿದ್ದು, ಅದರಲ್ಲಿ ಪರಿಶಿಷ್ಟ ಜಾತಿ-56,145, ಪರಿಶಿಷ್ಟ ಪಂಗಡ-35,479 ಇತರೆ-2,28,526 ಸೇರಿ3,20,150 (ಶೇ.96.61) ಫಲಾನುಭವಿಗಳು ಗೃಹಲಕ್ಷ್ಮಿಯೋಜನೆಯಡಿ ನೋಂದಣಿಯಾಗಿದ್ದಾರೆ. ಜೂನ್‌-2024ರ ಅಂತ್ಯಕ್ಕೆ 3,11,144 ಫಲಾನುಭವಿಗಳಿಗೆ ಹಣ ಪಾವತಿಯಾಗಿದೆ. ಇದುವರೆಗೆಒಟ್ಟು 640.31,26,000 ಕೋಟಿರೂ. ವೆಚ್ಚಭರಿಸಲಾಗಿದೆ. ಜುಲೈ ಮತ್ತು  ಆಗಸ್ಟ್‌-2024 ರ ಮಾಹೆಯ ಸಹಾಯಧನ ಪಾವತಿಯು ಪ್ರಕ್ರಿಯೆ ಹಂತದಲ್ಲಿರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. 

ಕೊಪ್ಪಳ ಜಿಲ್ಲೆಯಲ್ಲಿ ಅಂತ್ಯೋದಯ 37377, ಬಿಪಿಎಲ್ 289,741 ಸೇರಿದಂತೆ ಒಟ್ಟು 3,27,118 ಪಡಿತರ ಚೀಟಿಗಳಿದ್ದು ಅವುಗಳಲ್ಲಿನ 11,78,018 ಸದಸ್ಯರಿಗೆ ಸರ್ಕಾರದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಂತೆ ಪ್ರತಿ ಸದಸ್ಯರಿಗೆ 5 ಕೆ.ಜಿ. ಆಹಾರ ಧಾನ್ಯವನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ. ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿಯಾಗಿ ನೀಡುವ  5ಕೆ.ಜಿ ಅಕ್ಕಿ ಬದಲಿಗೆೆ ಪ್ರತಿ ಸದಸ್ಯರಿಗೆ 170ರೂಪಾಯಿ ನೀಡಲು ಘೋಷಿಸಿದಂತೆ ನೇರ ನಗದು ವರ್ಗಾವಣೆ ಮೂಲಕ (ಡಿ.ಬಿ.ಟಿ) ಹಣವನ್ನುಕುಟುಂಬದ ಮುಖ್ಯಸ್ಥರ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತಿದೆ. ಈ ಯೋಜನೆಯು ಜುಲೈ-2023 ರಿಂದ ಜಾರಿಯಲ್ಲಿದ್ದು ಈ ವರೆಗೆ ಕೊಪ್ಪಳ ಜಿಲ್ಲೆಯಲ್ಲಿ 209.71 ಕೋಟಿ ರೂಪಾಯಿಗಳನ್ನು ಈ ಯೋಜನೆಯಲ್ಲಿ ಕಾರ್ಡುದಾರರಿಗೆ ವಿತರಿಸಲಾಗಿದೆ ಎಂದು ಆಹಾರ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತ ನೀಡಿದರು. 

ಶಕ್ತಿ ಯೋಜನೆಯು ಜಿಲ್ಲೆಯಲ್ಲಿ ಉತ್ತಮವಾಗಿ ಅನುಷ್ಠಾನವಾಗುತ್ತಿದೆ. ಕೊಪ್ಪಳ, ಕುಷ್ಟಗಿ, ಯಲಬುರ್ಗಾ, ಗಂಗಾವತಿ ಮತ್ತುಕುಕನೂರ ಸೇರಿಜೂನ್ 23ರಿಂದ ಆಗಸ್ಟ್‌ 24ರವರೆಗೆ ಶಕ್ತಿ ಯೋಜನೆಯಡಿ 475.74 ಲಕ್ಷ ಮಹಿಳಾ ಪ್ರಯಾಣಿಕರು ಮತ್ತು 57.44 ಲಕ್ಷ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.   

2023 ರಜುಲೈ 1 ರಿಂದ ಕೊಪ್ಪಳ ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯನ್ನು ಜಾರಿ ಮಾಡಲಾಗಿದ್ದು, ಜೂನ್ 30ರವರೆಗೆ ಕೊಪ್ಪಳ ಜಿಲ್ಲೆಯ 3,01,656 ವಿದ್ಯುತ್‌ಗ್ರಾಹಕರ ಪೈಕಿ 2,72,610 ಅರ್ಹಗ್ರಾಹಕರು ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದುಶೇ.96 ರಷ್ಟುಗ್ರಾಹಕರು ಯೋಜನೆಯ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದು ಜೆಸ್ಕಾಂ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.  

ಜಿಲ್ಲೆಯಲ್ಲಿ ಯುವನಿಧಿ ಯೋಜನೆಯಡಿ ಪದವೀಧರರಿಗೆ ಪ್ರತಿ ಮಾಹೆ 3,000ರೂ. ಮತ್ತು ಡಿಪ್ಲೋಮಾ ಹೊಂದಿರುವವರಿಗೆ 1,500 ರೂ.ಮಾಸಿಕ ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ.  ಸೇವಾಸಿಂಧು ಪೋರ್ಟಲ್ ಮೂಲಕ ಒಟ್ಟು 4,920 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಆಗಸ್ಟ್‌ ಮಾಹೆವರೆಗೆ3,819 ಫಲಾನುಭವಿಗಳಿಗೆ 1,14,22,500 ರೂಗಳ ನಿರುದ್ಯೋಗ ಭತ್ಯೆಯನ್ನು ಪಾವತಿ ಮಾಡಲಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. 

ಸಭೆಯಲ್ಲಿಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಎಲ್ಲ ಉಪಾಧ್ಯಕ್ಷರು, ಸದಸ್ಯರು ಮತ್ತುಇನ್ನೀತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.