ಸಾರ್ವಜನಿಕರು ನಿಗದಿತ ಸಮಯಕ್ಕೆ ತೆರಿಗೆ ಕಟ್ಟಿ: ತಹಶೀಲ್ದಾರ ಕೆ. ರಾಘವೇಂದ್ರರಾವ್
Public should pay taxes on time: Tahsildar K. Raghavendra Rao
ಶಿರಹಟ್ಟಿ 10 : ಸಾರ್ವಜನಿಕರು ನಿಗದಿತ ಸಮಯಕ್ಕೆ ತೆರಿಗೆ ಪಾವತಿಸಿದರೆ ಪಟ್ಟಣದ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ತಹಶೀಲ್ದಾರ ಹಾಗೂ ಪಟ್ಟಣ ಪಂಚಾಯತ್ ಆಡಳಿತ ಅಧಿಕಾರಿ ಕೆ. ರಾಘವೇಂದ್ರರಾವ್ ಹೇಳಿದರು. ಅವರು ಮಂಗಳವಾರ ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ಪಟ್ಟಣ ಪಂಚಾಯತ್ ಬಜೆಟ್ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಯಾವುದೇ ಒಂದು ವರ್ಗದಲ್ಲಿ ಆದಾಯ ಕೃಡೀಕರಣ ಸಮರ್ಕವಾಗಿದ್ದರೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಮತ್ತು ಅಭಿವೃದ್ದಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಸಾರ್ವಜನಿಕರು ನೀರು, ವಿದ್ಯುತ್, ಆಸ್ತಿ ತೆರಿಗೆ ಸೇರಿದಂತೆ ವಿವಿಧ ರೀತಿಯ ತೆರಿಗೆಗಳನ್ನು ನಿಗದಿತ ಸಮಯಕ್ಕೆ ಪಾವತಿಸಬೇಕು. ಆಧುನಿಕ ಯುಗದಲ್ಲಿ ತಂತ್ರಜ್ಞಾನ ಬಳಸಿಕೊಂಡು ಯಾವುದೇ ಕಾರ್ಯವನ್ನು ತ್ವರಿತಗತಿಯಲ್ಲಿ ಮಾಡಲು ಸಾಧ್ಯ. ಗೂಗಲ್ ಪೇ, ಹಾಗೂ ಪೋನ್ ಪೇ ನಿಂದ ಸಾರ್ವಜನಿಕರು ಪಾರದರ್ಶಕವಾಗಿ ಯಾವುದೇ ರೀತಿಯ ಆನ್‌ಲೈನ್ ಪೇಮೆಂಟ್ ಆಪ್‌ಗಳ ಮೂಲಕ ತೆರಿಗೆ ಪಾವತಿ ಮಾಡಿ ಸ್ಥಳದಲ್ಲಿಯೇ ರಸೀದಿ ಪಡೆದುಕೊಳ್ಳಬಹುದು.
ಇದರ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಇದರಿಂದ ಸಾರ್ವಜನಿಕರಿಗೆ ಕಚೇರಿಗೆ ಅಲೆಯುವ ಅವಶ್ಯಕತೆ ಇರುವದಿಲ್ಲ ಜೊತೆಗೆ ಸಮಯದ ಉಳಿತಾಯವಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ಸವಿತಾ ತಾಂಬ್ರೆ, ಪಟ್ಟಣದ ಪ್ರಮುಖರಾದ ಚಾಂದಸಾಬ ಮುಳಗುಂದ, ಹೊನ್ನಪ್ಪ ಶಿರಹಟ್ಟಿ, ಅಲ್ಲಾಭಕ್ಷಿ ನಗಾರಿ, ಮಾಬುಸಾಬ ಲಕ್ಷ್ಮೇಶ್ವರ, ಆನಂದ ಕೋಳಿ, ಅಶ್ರತ್ ಢಾಲಾಯಿತ್, ಇಸಾಕ್‌ಅಹಮ್ಮದ್ ಆದ್ರಳ್ಳಿ, ಕೆ ಎ. ಬಳಿಗೇರ, ಹೆಚ್ ಎಂ. ದೇವಗಿರಿ, ಮುನ್ನಾ ಢಾಲಾಯತ್ ಹಾಗೂ ಅನೇಕರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 