ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರು ಸಹಕರಿಸಿ: ಮಹಮ್ಮದ್ ಹಾರೀಸ್ ಸುಮೇರ್
Public urged to cooperate with electoral roll revision: Mohammed Haris Sumer
ಲೋಕದರ್ಶನ ವರದಿ
ಬಳ್ಳಾರಿ 10: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಎಸ್‌ಆರ್) ಪ್ರಕ್ರಿಯೆ ಆರಂಭಗೊಂಡಿದ್ದು, ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ವಿತರಿಸುತ್ತಿರುವ ಎಣಿಕೆ (ಎನ್ಯುಮರೇಷನ್) ನಮೂನೆಗಳನ್ನು ಸಾರ್ವಜನಿಕರು ಶೀಘ್ರ ಭರ್ತಿ ಮಾಡಿ ಮರಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಮಹಮ್ಮದ್ ಹಾರೀಸ್ ಸುಮೇರ್ ಮನವಿ ಮಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಕನಕದುರ್ಗಮ್ಮ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಎಸ್‌ಎಸ್‌ಆರ್ ಜಾಗೃತಿ ಅಂಗವಾಗಿ ನಡೆದ ತ್ರಿಚಕ್ರ ವಾಹನ ಜಾಗೃತಿ ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಜುಲೈ 29ರವರೆಗೆ ನಡೆಯಲಿರುವ ಎಣಿಕೆ ನಮೂನೆಗಳ ವಿತರಣಾ ಪ್ರಕ್ರಿಯೆಯಲ್ಲಿ ಬಿಎಲ್‌ಒಗಳು ಮನೆಮನೆಗೆ ಭೇಟಿ ನೀಡಿ ನಮೂನೆಗಳನ್ನು ವಿತರಿಸುತ್ತಿದ್ದಾರೆ. ಸಾರ್ವಜನಿಕರು ಕೊನೆಯ ಕ್ಷಣದವರೆಗೆ ಕಾಯದೆ ತಮಗೆ ನೀಡಿರುವ ನಮೂನೆಗಳನ್ನು ತ್ವರಿತವಾಗಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಹೇಳಿದರು.
ಜಿಲ್ಲೆಯ ಯಾವುದೇ ವಿಶೇಷಚೇತನರು ಈ ಪ್ರಕ್ರಿಯೆಯಿಂದ ವಂಚಿತರಾಗಬಾರದು. ಎಂಆರ್ಡಬ್ಲ್ಯು ಹಾಗೂ ವಿಆರ್ಡಬ್ಲ್ಯು ಕಾರ್ಯಕರ್ತರು ತಮ್ಮ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ಅರ್ಹರ ಮನೆಗಳಿಗೆ ತೆರಳಿ ಎಸ್‌ಎಸ್‌ಆರ್ ಕುರಿತು ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.
ಪ್ರತಿಯೊಬ್ಬರೂ ಎಸ್‌ಎಸ್‌ಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ಅಗತ್ಯ ಮಾಹಿತಿಯನ್ನು ಸಲ್ಲಿಸದಿದ್ದರೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರೆ್ಡ ಅಥವಾ ತಿದ್ದುಪಡಿ ವಿಳಂಬವಾಗುವ ಸಾಧ್ಯತೆ ಇದೆ. ಯಾವುದೇ ಸಂದೇಹಗಳಿದ್ದರೆ ಸಂಬಂಧಿತ ಬಿಎಲ್‌ಒ ಅಥವಾ ತಹಶೀಲ್ದಾರ್ ಕಚೇರಿಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.
ಕುಟುಂಬದ ಹಿರಿಯರು ಅಥವಾ ಪೋಷಕರು ಹಿಂದೆ ಮತ ಚಲಾಯಿಸಿದ್ದರೆ ಅದರ ವಿವರಗಳನ್ನು ನಮೂನೆಯಲ್ಲಿ ದಾಖಲಿಸಬೇಕು. ಮತ ಚಲಾಯಿಸದವರಾದರೆ ಪೋಷಕರ ವಿವರಗಳನ್ನು ನಮೂದಿಸಿ ಸಲ್ಲಿಸುವಂತೆ ಅವರು ಸಲಹೆ ನೀಡಿದರು.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 