ಹಾವೇರಿ ಜಿಲ್ಲೆಯಲ್ಲಿ ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡಬೇಕೆಂದು ಪೂಜಾರ ಆಗ್ರಹ
Pujara demands support price for farmers' crops in Haveri district
ರಾಣೇಬೆನ್ನೂರು 17 : ಹಾವೇರಿ ಜಿಲ್ಲೆಯಲ್ಲಿ ಬೆಳೆಯುವ ಪ್ರಮುಖ ಬೆಳೆಗಳಾದ ಮೆಕ್ಕೆಜೋಳ ಕ್ವಿಂ.ಗೆ ರೂ 2500, ಭತ್ತಕ್ಕೆ 2500ರೂ , ಕಬ್ಬಿಗೆ 3500 ರೂ ಬೆಂಬಲ ಬೆಲೆ ಯೋಜನೆ ಅಡಿ ಖರೀದಿ ಕೇಂದ್ರ ತೆರೆದು ಜಿಲ್ಲೆ ಮತ್ತು ತಾಲ್ಲೂಕಿನ ರೈತರಿಗೆ ಬೆಂಬಲ ಬೆಲೆ ನೀಡಿ ಆರ್ಥಿಕವಾಗಿ ಅನುಕೂಲವಾಗುವ ನಿಟ್ಟಿನಲ್ಲಿ ತುರ್ತು ಕ್ರಮ ಕೈಗೊಳ್ಳಬೇಕೆಂದು ಮಾಜಿ ಶಾಸಕ ಅರುಣ್ ಕುಮಾರ್ ಪೂಜಾರ ಆಗ್ರಹಿಸಿದರು . ನಗರದಲ್ಲಿ ಎನ್ ಡಿಎ ಮೈತ್ರಿಕೂಟದ ಬಿಜೆಪಿ ಮತ್ತು ಜೆಡಿಎಸ್ ಪಕ್ಷ ಹಾಗೂ ರಾಜ್ಯ ರೈತ ಸಂಘ, ಹಸಿರು ಸೇನೆ ಮತ್ತು ತಾಲೂಕಿನ ವಿವಿಧ ರೈತ ಸಂಘಟನೆಗಳ ವತಿಯಿಂದ ಮೆಕ್ಕೆಜೋಳ ಭತ್ತ ಕಬ್ಬು ಬೆಂಬಲ ಯೋಜನೆ ಅಡಿ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿ ಕೆಇಬಿ ಗಣಪತಿ ದೇವಸ್ಥಾನದಿಂದ ತಹಶೀಲ್ದಾರ್ ಕಚೇರಿ ವರೆಗೆ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಮೆಕ್ಕೆಜೋಳ ಮತ್ತು ಭತ್ತದ ಬೆಳೆಗಾರರು ಹೆಚ್ಚಾಗಿದ್ದು, ಈಗಾಗಲೇ ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಣೆ ಮಾಡಿರುತ್ತದೆ. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರ ನೆರವಿಗೆ ಧಾವಿಸದೆ ಖರೀದಿಯಲ್ಲಿ ವಿಳಂಬ ನೀತಿಯನ್ನು ಅನುಸರಿಸುತ್ತಿದೆ ಕೂಡಲೇ ಸರ್ಕಾರ ಬೆಂಬಲ ಬೆಲೆಯಲ್ಲಿ ಖರೀದಿ ಕೇಂದ್ರ ತೆರೆಯಲು ವಿಳಂಬ ಮಾಡಿದರೆ ಮುಖ್ಯಮಂತ್ರಿ ನಿವಾಸದವರೆಗೂ ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಇದೇ ವೇಳೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಡಾ.ಬಸವರಾಜ ಕೇಲಗಾರ, ನಗರ ಘಟಕ ಅಧ್ಯಕ್ಷ ಮಂಜುನಾಥ ಕಾಟಿ, ಗ್ರಾಮೀಣ ಘಟಕದ ಅಧ್ಯಕ್ಷ ಸುಭಾಶ ಶಿರಗೇರಿ, ಮುಖಂಡರಾದ ಸಂತೋಷಕುಮಾರ ಪಾಟೀಲ, ಪರಮೇಶ ಗೂಳಣ್ಣನವರ, ಚೋಳಪ್ಪ ಕಸವಾಳ, ಸೋಮಣ್ಣ ಗೌಡಶಿವಣ್ಣನವರ, ಅಮೋಘ ಬಾದಾಮಿ, ಮೈಲಪ್ಪ ಗೋಣಿಬಸಮ್ಮನವರ, ಎ.ಬಿ.ಪಾಟೀಲ, ಗದಿಗೆಪ್ಪ ಹೊಟ್ಟಿಗೌಡ್ರ, ಪ್ರಕಾಶ ಪೂಜಾರ, ರವಿ ತಳವಾರ, ಶ್ರೀನಿವಾಸ ಅಡ್ಮನಿ, ಹನುಮಂತಪ್ಪ ದೇವರಗುಡ್ಡ, ಕಿರಣ ಅಂಗಡಿ, ಸಂತೋಷ ತೆವರಿ, ಯುವರಾಜ ಬಾರಟಕ್ಕಿ, ಸಂತೋಷ ಬಗಾಡೆ, ಕೊಟ್ರೇಶಪ್ಪ ಎಮ್ಮಿ, ಬಸವರಾಜ ಮೈಲಾರ, ಸಿದ್ದಪ್ಪ ಚಿಕ್ಕಬಿದರಿ, ಅಶೋಕ ಪಾಸಿಗಾರ, ಜೆಡಿಎಸ್ ತಾಲೂಕಾಧ್ಯಕ್ಷ ನಿಂಗಪ್ಪ ಜಿಲ್ಲಾ ಕಾರ್ಯದರ್ಶಿ ಸಿದ್ದಣ್ಣ ಗುಡಿಮುಂದ್ಲರ , ಮಲ್ಲಿಕಾರ್ಜುನ ಹಲಗೇರಿ, ಮೌನೇಶ ಬಡಿಗೇರ, ಹನುಮಂತಪ್ಪ ಬಿಷ್ಟಣ್ಣನವರ, ಗಣೇಶ ಬಡಿಗೇರ, ರಮೇಶ ಮಾಕನೂರು, ಕುಬೇರ್ಪ ಪಿ, ವಿಠ್ಠಲ ಸುಣಗಾರ, ಉಷಾ ಜಾಡಮಲಿ, ಲಕ್ಷ್ಮಿ ಕದರಮಂಡಲಗಿ, ಪೂಜಾ ದೈವಜ್ಞ, ಐಶ್ವರ್ಯ ಮಡಿವಾಳರ, ಈರಣ್ಣ ಕಡೂರು, ಶಿವು ಕರಿಯಪ್ಪನವರ, ರೈತ ಮುಖಂಡರಾದ ಈರಣ್ಣ ಹಲಗೇರಿ, ಹನುಮಂತಪ್ಪ ಕಬ್ಬಾರ, ಸುರೇಶ ಹೊನ್ನಪ್ಪಳವರ , ಹನುಮಂತಪ್ಪ ದೀವಿಗಿಹಳ್ಳಿ, ರಮೇಶ ನಂದಿಹಳ್ಳಿ, ಈರಣ್ಣ ನಿಟ್ಟೂರು, ಮಂಜು ಗೌಡ್ರ, ಮನು ಗೌಡಶಿವಣ್ಣನವರ, ಮಂಜು ಭಂಡಾರಿ, ನಾಗರಾಜ ಅಜಗಣ್ಣನವರ, ಬೀರೇಶ ಬಾರ್ಕಿ, ಬಸವರಾಜ ಕೊಪ್ಪದ ಸೇರಿದಂತೆ ಬಿಜೆಪಿ ಜೆಡಿಎಸ್ ಪಕ್ಷದ ಮುಖಂಡರು ಕಾರ್ಯಕರ್ತರು ರೈತರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 