ಸ್ವಾಮಿ ವಿವೇಕಾನಂದ ಶಾಲೆ ಮಕ್ಕಳಿಂದ ಪಲ್ಸ್ ಪೋಲಿಯೋ ಜಾಗೃತಿ ಜಾಥ
Pulse Polio Awareness Rally by Swami Vivekananda School Children
ಲೋಕದರ್ಶನ ವರದಿ
ಕಂಪ್ಲಿ 27: ರಾಷ್ಟ್ರೀಯ ಪಲ್ಸ್ ಪೋಲಿಯೋ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಇಲ್ಲಿನ ಕೋಟೆಯ ಶ್ರೀ ಸ್ವಾಮಿ ವಿವೇಕಾನಂದ ಶಾಲೆಯ ಮುಖ್ಯಗುರು ಬಡಿಗೇರ್ ಜಿಲಾನಸಾಬ್ ಪಲ್ಸ್ ಪೋಲಿಯೋ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿ, ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತರಾಗಬಾರದು ಎಂದು ಹೇಳಿದರು. ಶಾಲಾ ಆವರಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಂಪ್ಲಿ ಪ್ರಾಥಮಿಕ ಆಸ್ಪತ್ರೆ, ಶ್ರೀ ಸ್ವಾಮಿ ವಿವೇಕಾನಂದ ಶಾಲೆ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು, ಪಟ್ಟಣದಲ್ಲಿ ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು, ಐದು ವರ್ಷದ ಒಳಗಿನ ಮಕ್ಕಳಿಗೆ ಲಸಿಕೆ ಹಾಕಿಸಬೇಕು,
ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ ಸಹ, ಈ ಬಾರಿ ತಪ್ಪದೇ ಮೊದಲ ದಿನದಂದೇ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಹಾಕಿಸಬೇಕು. ಜೂ.28ರಂದು ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತದೆ. ಈ ಅಭಿಯಾನಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು.ಶಾಲಾ ಆವರಣದಿಂದ ಆರಂಭಗೊಂಡ ಜಾಗೃತಿ ಜಾಥಾ ಕೋಟೆಯ ಪ್ರಮುಖ ರಸ್ತೆಗಳಲ್ಲಿ ಸಾಗಿ ಶಾಲಾ ಆವರಣದಲ್ಲಿ ಅಂತ್ಯಗೊಂಡಿತು. ಆಶಾ ಕಾರ್ಯಕರ್ತೆ ಆರ್. ವಲಿಮಾ, ಶಿಕ್ಷಕಿಯರಾದ ಕೆ. ಶ್ವೇತಾ, ಜೆ. ಅಕ್ಷತಾ, ಕೊಲ್ಕರ್ ಉಮಾ, ವರ್ಷಾ ಮಜುಂದಾರ್, ಗೌಸಿಯ, ಮಠದ ಸುನೀತಾ, ಡಿ. ಉಮಾ, ಸಹಾಯಕಿ ಶರ್ಮಾಸಬಿ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 