ಮಕ್ಕಳ ಸರ್ವಾಂಗಿಣ ಬೆಳವಣಿಗೆಗೆ ಎರಡು ಹನಿ ಪೊಲಿಯೊ ಲಸಿಕೆ ಹಾಕಿಸಿ: ಸಚಿವ ಸತೀಶ ಜಾರಕಿಹೊಳಿ
Pulse Polio Campaign-2025
ಪಲ್ಸ್ ಪೊಲಿಯೋ ಅಭಿಯಾನ-2025
ಬೆಳಗಾವಿ ಡಿ.21:ಭಾರತ ಪೋಲಿಯೋ ಮುಕ್ತ ದೇಶವಾಗಿದ್ದು, ಎರಡು ಹನಿ ಪೋಲಿಯೋ ಲಸಿಕೆ ಮಕ್ಕಳ ಅಂಗ ವೈಫಲ್ಯತೆ ತಪ್ಪಿಸಿ ಮಕ್ಕಳ ಸರ್ವತೋಮುಖ ಹಾಗೂ ಸರ್ವಾಂಗಿಣ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹೇಳಿದರು.
ಗೋಕಾಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಭಾನುವಾರ(ಡಿ.21) ಜರುಗಿದ ಬೆಳಗಾವಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹನಿ ಹಾಕುವ ಮೂಲಕ ಚಾಲನೆ ನೀಡಿದರು.ಇತರೆ ದೇಶಗಳಲ್ಲಿ ಪೋಲಿಯೋ ಸೋಂಕು ಇರುವುದರಿಂದ ಮಕ್ಕಳ ಹಿತಾಸಕ್ತಿಗಾಗಿ ಸರ್ಕಾರ ಪೋಲಿಯೋ ಅಭಿಯಾನ ನಡೆಸಿಕೊಂಡು ಬರುತ್ತಿದೆ. ದೇಶದಲ್ಲಿ 2011 ರಲ್ಲಿ ಕೊನೆಯದಾಗಿ ಪೋಲಿಯೋ ಪ್ರಕರಣ ಕಂಡುಬಂದಿದ್ದು ಅದರಂತೆ ಬೆಳಗಾವಿ ಜಿಲ್ಲೆಯಲ್ಲಿ 1998 ರಲ್ಲಿ ಕೊನೆಯ ಪ್ರಕರಣ ದೃಡಪಟ್ಟಿದ್ದು ಆ ನಂತರ ಯಾವುದೇ ಪ್ರಕರಣ ಕಂಡುಬಂದಿರುವುದಿಲ್ಲ ಎಂದರು.ಹತ್ತಿರದ ಪಲ್ಸ್ ಪೋಲಿಯೋ ಅಭಿಯಾನದಲ್ಲಿ ತಪ್ಪದೆ ಮಕ್ಕಳಿಗೆ ಪೋಲಿಯೋ ಲಸಿಕೆ ಕೊಡಿಸಬೇಕು.ಅಧಿಕಾರಿಗಳು ಸಕ್ರೀಯವಾಗಿ ಭಾಗವಹಿಸಿ ಸಾರ್ವಜನಿಕರ ಸಹಕಾರದೊಂದಿಗೆ 100ಅ ಸಾಧನೆಗೈಯಲು ಸೂಚಿಸಿದರು.
ಗೋಕಾಕ ಸಾರ್ವಜನಿಕ ಆಸ್ಪತ್ರೆ ಬಡ ರೋಗಿಗಳ ಪಾಲಿಗೆ ಸಂಜೀವಿನಿಯಾಗಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದು ಈ ಆಸ್ಪತ್ರೆಯನ್ನು ಜಿಲ್ಲಾ ಮಟ್ಟದ ಆಸ್ಪತ್ರೆಯಾಗಿಸಲು ಮುಂದಿನ ಸಚಿವ ಸಂಪುಟದಲ್ಲಿ ಚರ್ಚಿಸಿ ಕ್ರಮವಹಿಸುವುದಾಗಿ ಎಂದು ಸಚಿವರಾದಸತೀಶ ಜಾರಕಿಹೊಳಿ ಅವರು ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಈಶ್ವರ್ಪ ಗಡಾದ ಅವರು ಮಾತನಾಡಿ ಪೋಲಿಯೋ ಲಸಿಕೆಯನ್ನು ಬಾಯಿ ಮೂಲಕ ಹಾಗೂ ಲಸಿಕೆಯೊಂದಿಗೆ ಮಗುವಿನ 6 ವಾರಕ್ಕೆ ಮತ್ತು 14 ವಾರಕ್ಕೆ ಇಂಜೆಕ್ಷನ್ ಮೂಲಕ ಕೂಡ ಲಸಿಕೆ ನೀಡಲಾಗುತ್ತಿರುವ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಂತಾನೋತ್ಪತ್ತಿ ತಾಯಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿಗಳಾದ ಡಾ. ಎಸ್.ಎಸ್. ಸಾಯನ್ನವರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಬಿ.ಬಿ. ಈಶ್ವರ್ಪಗೋಳ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಆರಿ್ಜ. ಬಸ್ಸಾಪೂರ ಜಿಲ್ಲಾ ನೋಡಲ್ ಅಧಿಕಾರಿಗಳು, ತಾಲೂಕಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ರೋಟರಿ, ಲಾಯನ್ಸ್, ಸ್ಕೌಟ್ಸ್, ಗೈಡ್ಸ್, ಮುಂತಾದ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಮತ್ತು ತಾಯಂದಿರು, ಮಕ್ಕಳು, ಇಲಾಖಾ ಸಿಬ್ಬಂದಿಯವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 