ಪಲ್ಸ್ ಪೋಲಿಯೊ ಲಸಿಕೆ ಕಡ್ಡಾಯ: ಮಂಜುನಾಥ ಅಂಗಡಿ
Pulse Polio Vaccination Mandatory: Manjunatha Shop
ಲೋಕದರ್ಶನ ವರದಿ
ಉಗರಗೋಳ 28 : ಅಂಗವೈಕಲ್ಯ ಸೇರಿದಂತೆ ಹಲವು ಸಾಂಕ್ರಾಮಿಕ ರೋಗಗಳಿಂದ ಮಕ್ಕಳನ್ನು ರಕ್ಷಿಸಲು ಪೋಷಕರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಮಂಜುನಾಥ ಅಂಗಡಿ ಹೇಳಿದರು. ಶ್ರೀಕ್ಷೇತ್ರ ಯಲ್ಲಮ್ಮನ ಗುಡ್ಡದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಎರಡು ಹನಿ ಪಲ್ಸ್ ಪೋಲಿಯೊ ಲಸಿಕೆಯನ್ನು ತಪ್ಪದೇ ಹಾಕಿಸಬೇಕು. ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಪೋಷಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪ್ರಭು ಹಂಜಗಿ, ಐ.ಎಂ. ಕಗದಾಳ, ಎಂ.ಜಿ. ಪವಾರ, ಬಸವರಾಜ, ಆನಂದ, ವರುಣ ಅರಗಂಜಿ, ಮಹೇಶ್ ಸೋಮನಟ್ಟಿ, ಅಕ್ಕಮ್ಮ ಮಾದರ, ಗಡಿಗೆಪ್ಪ ಕಂಕಣವಾಡಿ, ಉಣಕಲ್ಲದ ಸಿದ್ದಪ್ಪ ಸಣ್ಣತಂಗಿ, ರಘು ಓಲೆಕಾರ, ಪರಶುರಾಮ ಸಣ್ಣತಂಗಿ, ವನಜಾಕ್ಷಿ ಓಲೆಕಾರ, ಯಲ್ಲಪ್ಪ ಹಿರೇಕುಂಬಿ, ಸವದತ್ತಿ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ದೇವಸ್ಥಾನದ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 