ಚಿಕ್ಕುಂಬಿಯಲ್ಲಿ ಪಲ್ಸ್ ಪೋಲಿಯೊಗೆ ಚಾಲನೆ
Pulse polio launched in Chikkumbi
ಲೋಕದರ್ಶನ ವರದಿ
ಉಗರಗೋಳ 28 : ಸವದತ್ತಿ ತಾಲೂಕಿನ ಚಿಕ್ಕುಂಬಿ ಗ್ರಾಮದ ಉಪ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಡಾ. ಕೆ.ಬಿ. ಹನಶಿ ಐದು ವರ್ಷದೊಳಗಿನ ಮಕ್ಕಳಿಗೆ ಎರಡು ಹನಿ ಪೋಲಿಯೊ ಲಸಿಕೆ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ, ಪ್ರತಿಯೊಬ್ಬ ಪೋಷಕರೂ ತಮ್ಮ ಮಕ್ಕಳಿಗೆ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಎಚ್.ಎಂ. ಅವಟೆ, ವಿನೋದ ಲಮಾಣಿ, ಯಲ್ಲಪ್ಪ ಗೊಲ್ಲರ, ಶೋಭಾ ಸಂಗನಗೌಡರ, ಮಮತಾದೇವಿ ದೊಡ್ಡಮನಿ, ಕಲಾವತಿ ಕುಂಭಾರ, ಮಲ್ಲಪ್ಪ ಬಡಿಗೇರ, ಗಂಗಮ್ಮ ಮಾದರ, ಕಲ್ಲವ್ವ ಹತ್ತಿಕಟಗಿ, ಶಾಂತವ್ವ ಬಾಕಿರ್, ಗೌರವ್ವ ಹುಡೆದ, ಫರೀಜಾನ ನದಾಫ್, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಕೇಂದ್ರದ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 